11 ವರ್ಷ ಹಿಂದಿನ ನ್ಯಾಯಾಂಗ ನಿಂದನೆ: ವಕೀಲ ಪ್ರಶಾಂತ್ ಭೂಷಣ್ ಪ್ರಕರಣದ ವಿಚಾರಣೆ ಮುಂದೂಡಿದ 'ಸುಪ್ರೀಂ'
ಹಿರಿಯ ವಕೀಲ ಪ್ರಶಾಂತ್ ಭೂಷಣ್ ಅವರ ವಿರುದ್ಧದ 11 ವರ್ಷ ಹಿಂದಿನ ನ್ಯಾಯಾಂಗ ನಿಂದನೆ ಪ್ರಕರಣದ ವಿಚಾರಣೆಯನ್ನು ಸುಪ್ರೀಂಕೋರ್ಟ್ ಆಗಸ್ಟ್ 4ಕ್ಕೆ ಮುಂದೂಡಿದೆ.
ನವದೆಹಲಿ: ಹಿರಿಯ ವಕೀಲ ಪ್ರಶಾಂತ್ ಭೂಷಣ್ ಅವರ ವಿರುದ್ಧದ 11 ವರ್ಷ ಹಿಂದಿನ ನ್ಯಾಯಾಂಗ ನಿಂದನೆ ಪ್ರಕರಣದ ವಿಚಾರಣೆಯನ್ನು ಸುಪ್ರೀಂಕೋರ್ಟ್ ಆಗಸ್ಟ್ 4ಕ್ಕೆ ಮುಂದೂಡಿದೆ.
ನ್ಯಾಯಮೂರ್ತಿ ಅರುಣ್ ಮಿಶ್ರಾ ನೇತೃತ್ವದ ನ್ಯಾಯಪೀಠ ವಿಚಾರಣೆಯನ್ನು ಮುಂದೂಡಿದ್ದು, ಮುಂದಿನ ವಿಚಾರಣೆ ವೇಳೆ ವಾದ ಮಂಡಿಸಲು ಸಿದ್ಧರಾಗಿರುವಂತೆ ವಕೀಲರಿಗೆ ಸೂಚಿಸಿದೆ.
2009ರಲ್ಲಿ ತೆಹಲ್ಕಾ ನಿಯತಕಾಲಿಕೆಗೆ ಸಂದರ್ಶನ ನೀಡಿದ್ದ ಭೂಷಣ್ ಅವರು ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳ ವಿರುದ್ಧ ಹೇಳಿಕೆ ನೀಡಿದ್ದರು. ಈ ಸಂಬಂಧ ನ್ಯಾಯಾಲಯದಲ್ಲಿ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಾಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.