ದೇಶ

ಶ್ರೀನಗರದಲ್ಲಿ ಎನ್'ಕೌಂಟರ್: ಇಬ್ಬರು ಉಗ್ರರನ್ನು ಸದೆಬಡಿದ ಭಾರತೀಯ ಸೇನೆ

Manjula VN

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಶನಿವಾರ ತಿಳಿದುಬಂದಿದೆ. 

ಶ್ರೀನಗರದ ರಣಬೀರ್ಗರ್ಹ್ ಎಂಬ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವ ಮಾಹಿತಿ ತಿಳಿಯುತ್ತಿದ್ದಂತೆಯೇ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಲು ಆರಂಭಿಸಿತ್ತು. 

ಈ ವೇಳೆ ಅಡಗಿ ಕುಳಿತಿದ್ದ ಉಗ್ರರು ಏಕಾಏಕಿ ಸೇನಾಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದು, ಕೂಡಲೇ ಕಾರ್ಯಾಚರಣೆಗಿಳಿದ ಭದ್ರತಾ ಪಡೆಗಳು ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ ಎಂದು ತಿಳಿದುಬಂದಿದೆ. 

ಸ್ಥಳದಲ್ಲಿ ಮತ್ತಷ್ಟು ಉಗ್ರರು ಅಡಗಿ ಕುಳಿತಿರುವ ಶಂಕೆಗಳು ಮೂಡಿರುವ ಹಿನ್ನೆಲೆಯಲ್ಲಿ ಕಾರ್ಯಾಚರಣೆ ಮುಂದುವರೆದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

SCROLL FOR NEXT