ತಮಿಳುನಾಡಿಗೆ ಕೊರೋನಾಘಾತ: 2 ಲಕ್ಷದ ಗಡಿ ದಾಟಿದ ಸೋಂಕಿತರ ಸಂಖ್ಯೆ, ಇಂದು 6,988 ಮಂದಿಗೆ ಪಾಸಿಟಿವ್
ತಮಿಳುನಾಡಿನಲ್ಲಿ ಕೊರೋನಾ ವೈರಸ್ ಅಟ್ಟಹಾಸ ಮುಂದುವರೆದಿದ್ದು, ರಾಜ್ಯದಲ್ಲಿ ಶನಿವಾರ ಒಂದೇ ದಿನ ಬರೋಬ್ಬರಿ 6,988 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 2 ಲಕ್ಷದ ಗಡಿ ದಾಟಿದೆ.
ಚೆನ್ನೈ: ತಮಿಳುನಾಡಿನಲ್ಲಿ ಕೊರೋನಾ ವೈರಸ್ ಅಟ್ಟಹಾಸ ಮುಂದುವರೆದಿದ್ದು, ರಾಜ್ಯದಲ್ಲಿ ಶನಿವಾರ ಒಂದೇ ದಿನ ಬರೋಬ್ಬರಿ 6,988 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 2 ಲಕ್ಷದ ಗಡಿ ದಾಟಿದೆ.
ತಮಿಳುನಾಡಿನಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 2,06,737ಕ್ಕೆ ಏರಿಕೆಯಾಗಿದ್ದು, ಇಂದು ಒಂದೇ ದಿನ ಮಹಾಮಾರಿಗೆ 89 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸಾವಿನ ಸಂಖ್ಯೆ 3409ಕ್ಕೆ ಏರಿಕೆಯಾಗಿದೆ.
ಹೊಸ ಪಾಸಿಟಿವ್ ಪ್ರಕರಣಗಳಿಂದ ಚೇತರಿಕೆ ಪ್ರಮಾಣ ಹೆಚ್ಚಾಗಿದ್ದು, ಕಳೆದ 24 ಗಂಟೆಯಲ್ಲಿ 7758 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಚೇತರಿಸಿಕೊಂಡವರ ಸಂಖ್ಯೆ 1,51,055ಕ್ಕೆ ತಲುಪಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಇನ್ನು ತಮಿಳುನಾಡು ರಾಜಧಾನಿ ಚೆನ್ನೈನಲ್ಲಿ ಇಂದು 1329 ಹೊಸ ಪ್ರಕರಣಗಳು ವರದಿಯಾಗಿದ್ದು, ನಗರದಲ್ಲಿ ಸೋಂಕಿತರ ಸಂಖ್ಯೆ 93,537ಕ್ಕೆ ಏರಿಕೆಯಾಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.