ಶಿವರಾಜ್ ಸಿಂಗ್ ಚೌಹಾಣ್ 
ದೇಶ

ಕೋವಿಡ್-19: ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್'ಗೆ ಕೊರೋನಾ ಪಾಸಿಟಿವ್!

ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರಲ್ಲಿ ಕೊರೋನಾ ವೈರಸ್ ದೃಢಪಟ್ಟಿದೆ ಎಂದು ವರದಿಗಳಿಂದ ತಿಳಿದುಬಂದಿದೆ.

ಭೋಪಾಲ್: ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರಲ್ಲಿ ಕೊರೋನಾ ವೈರಸ್ ದೃಢಪಟ್ಟಿದೆ ಎಂದು ವರದಿಗಳಿಂದ ತಿಳಿದುಬಂದಿದೆ. 

ಈ ಕುರಿತು ಸ್ವತಃ ಶಿವರಾಜ್ ಸಿಂಗ್ ಚೌಹಾಣ್ ಅವರೇ ತಮ್ಮ ಅಧಿಕೃತ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಮಾಹಿತಿ ನೀಡಿದ್ದಾರೆ. 

ಕೆಲ ದಿನಗಳಿಂದ ನನಗೆ ಕೊರೋನಾ ಲಕ್ಷಣಗಳು ಕಂಡು ಬಂದಿತ್ತು. ಹೀಗಾಗಿ ಪರೀಕ್ಷೆಗೊಳಗಾಗಿದ್ದೆ. ಇದೀಗ ವೈದ್ಯಕೀಯ ವರದಿ ಬಂದಿದ್ದು, ಕೊರೋನಾ ವೈರಸ್ ಇರುವುದು ದೃಢಪಟ್ಟಿದೆ. ನನ್ನೊಂದಿಗೆ ಸಂಪರ್ಕದಲ್ಲಿದ್ದವರು ಕೂಡಲೇ ಕೊರೋನಾ ಪರೀಕ್ಷೆ ಮಾಡಿಸಿಕೊಳ್ಳಿ. ಹಾಗೂ ನಿಕಟ ಸಂಪರ್ಕದಲ್ಲಿದ್ದವರು ಕೂಡಲೇ ಕ್ವಾರಂಟೈನ್'ಗೆ ಒಳಗಾಗುವಂತೆ ಈ ಲಕ ಮನವಿ ಮಾಡಿಕೊಳ್ಳುತ್ತೇನೆಂದು ತಿಳಿಸಿದ್ದಾರೆ. 

ಕೋವಿಡ್ 19 ಮಾರ್ಗಸೂಚಿಗಳನ್ನು ನಾನು ಅನುಸರಿಸುತ್ತಿದ್ದೇನೆ. ವೈದ್ಯರ ಸಲಹೆಯಂತೆ ಕ್ವಾರಂಟೈನ್'ಗೊಳಗಾಗಿದ್ದೇನೆ. ರಾಜ್ಯದ ಕೊರೋನಾ ಪರಿಸ್ಥಿತಿ ಕುರಿತಂತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಚರ್ಚೆ ಸಭೆ ನಡೆಸುತ್ತೇನೆಂದಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT