ಸಂಗ್ರಹ ಚಿತ್ರ 
ದೇಶ

ಭಾರತದಲ್ಲಿ 24 ಗಂಟೆಗಳಲ್ಲಿ 48,916 ಕೊರೋನಾ ಕೇಸ್ ಪತ್ತೆ; ಸೋಂಕಿತರ ಸಂಖ್ಯೆ 1.33 ಲಕ್ಷಕ್ಕೆ ಏರಿಕೆ, 31,358 ಮಂದಿ ಸಾವು

ಭಾರತದಲ್ಲಿ ಕೊರೋನಾ ಆರ್ಭಟ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು, ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 48,916 ಮಂದಿಯಲ್ಲಿ ವೈರಸ್ ಪತ್ತೆಯಾಗಿದೆ. ಇದರೊಂದಿಗೆ, ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 13,36,861ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶನಿವಾರ ಮಾಹಿತಿ ನೀಡಿದೆ. 

ನವದೆಹಲಿ: ಭಾರತದಲ್ಲಿ ಕೊರೋನಾ ಆರ್ಭಟ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು, ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 48,916 ಮಂದಿಯಲ್ಲಿ ವೈರಸ್ ಪತ್ತೆಯಾಗಿದೆ. ಇದರೊಂದಿಗೆ, ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 13,36,861ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶನಿವಾರ ಮಾಹಿತಿ ನೀಡಿದೆ. 

ಈ ನಡುವೆ ಒಂದೇ ದಿನ 757 ಮಂದಿ ಬಲಿಯಾಗಿದ್ದು, ಸಾವಿನ ಸಂಖ್ಯೆ ಕೂಡ 31,358 ಏರಿಕೆಯಾಗಿದೆ ಎಂದು ತಿಳಿದುಬಂದಿದೆ. 

ಇನ್ನು 13,36,861 ಮಂದಿ ಸೋಂಕಿತರ ಪೈಕಿ 8,49,431 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದು, ಪ್ರಸ್ತುತ ಇನ್ನೂ ದೇಶದಲ್ಲಿ 4,56,071 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ. 

ಮಹಾರಾಷ್ಟ್ರದಲ್ಲಿ 9,615 ಕೇಸು, 278 ಸಾವು, ಆಂಧ್ರಪ್ರದೇಶದಲ್ಲಿ 8,147 ಕೇಸು, 49 ಸಾವು, ತಮಿಳುನಾಡಿನಲ್ಲಿ 6472 ಸೋಂಕು, 88 ಸಾವು, ಕರ್ನಾಟಕದಲ್ಲಿ 5.007 ಸೋಂಕು 110 ಸಾವು ದಾಖಲಾಗಿದೆ. 

ದೇಶದಲ್ಲಿ ಕೊರೋನಾ ವೈರಸ್ ಪ್ರಕರಣಗಳು ಭಾರೀ ಪ್ರಮಾಣದಲ್ಲಿ ಏರಿಕೆಯಾಗುತ್ತಿರುವ ನಡುವಲ್ಲೇ ಕೊರೋನಾ ಮರಣ ಪ್ರಮಾಣ ಶೇ.2.38ಕ್ಕೆ ಇಳಿಕೆಯಾಗಿದೆ. 

ಮೇನಲ್ಲಿ ಕೊರೋನಾ ಸಾವಿನ ಪ್ರಮಾಣ ಶೇ.3.2ರಷ್ಟಿತ್ತು. ಜು.10ರಂದು ಸಾವಿನ ಪ್ರಮಾಣ ಶೇ.2.72ಕ್ಕೆ ಇಳಿಕೆಯಾಗಿತ್ತು. ನಂತರ ಮತ್ತಷ್ಟು ಇಳಿಕೆ ಕಂಡು ಜು.20ರಂದು ಶೇ.2.49ಕ್ಕೆ ಕುಸಿದಿತ್ತು. ಇದೀಗ ಮರಣ ಪ್ರಮಾಣ ಮತ್ತಷ್ಟು ಇಳಿಕೆ ಕಂಡಿರುವುದು ಆಶಾವಾದ ಮೂಡಿಸಿದೆ. ಇದೇ ವೇಳೆ ಕೊರೋನಾದಿಂದ ಗುಣಮುಖರಾದವರ ಪ್ರಮಾಣ ದೇಶದಲ್ಲಿ 63.45ಕ್ಕೆ ಏರಿಕೆಯಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಜರ್ಮನಿಯ ವಸತಿ ಕಟ್ಟಡದಲ್ಲಿ ಶಂಕಿತ ಬೆಂಕಿ ಅವಘಡ: 3 ಭಾರತೀಯರು ಸಾವು!

ಕಾಂಗ್ರೆಸ್‌ನ ಆಂತರಿಕ ಕಲಹದಿಂದ 'ಮೂರನೇ ಮುಖ್ಯಮಂತ್ರಿ' ಬಂದರೂ ಅಚ್ಚರಿ ಇಲ್ಲ: ಬಿ.ವೈ ವಿಜಯೇಂದ್ರ; Video

ಯೂಟ್ಯೂಬರ್ ಧ್ರುವ್ ರಾಠಿಗೆ ಸಂಕಷ್ಟ: 8 ವರ್ಷಗಳ ಹಿಂದಿನ ಪ್ರಕರಣಕ್ಕೆ ಮರುಜೀವ; ದೆಹಲಿ ಕೋರ್ಟ್ ಸಮನ್ಸ್!

"ತಿರಂಗಾ ಹಾರಿಸುವುದು ಅಪರಾಧವಲ್ಲ ಎಂಬುದನ್ನು ತೋರಿಸುತ್ತೇವೆ": ಅಕ್ಟೋಬರ್ 16ಕ್ಕೆ ತ್ರಿವರ್ಣ ಧ್ವಜದೊಂದಿಗೆ ಬನ್ನಿ- ಅಭಿಜಿತ್ ದೀಪ್ಕೆ ಕರೆ

ಸುಪ್ರೀಂಕೋರ್ಟ್​ಗೆ ನನ್ನ ಬಗ್ಗೆ ತಪ್ಪು ಮಾಹಿತಿ: ಸರ್ಕಾರದ ವಿರುದ್ಧ ಡಿಜಿಪಿ ಅಲೋಕ್ ಕುಮಾರ್ ಅಸಮಾಧಾನ!