ಸಂಗ್ರಹ ಚಿತ್ರ 
ದೇಶ

ಭಾರತದಲ್ಲಿ ಈವರೆಗೂ 1.58 ಕೋಟಿ ಜನರಿಗೆ ಕೋವಿಡ್-19 ಪರೀಕ್ಷೆ ನಡೆಸಲಾಗಿದೆ: ಐಸಿಎಂಆರ್

ಕಳೆದ 24 ಗಂಟೆಗಳಲ್ಲಿ ಕೊರೋನಾ ಸೋಂಕಿನ ಕಾರಣಕ್ಕೆ 4,20,898 ಮಂದಿಯ ಮಾದರಿಗಳನ್ನು ಪರೀಕ್ಷೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಶನಿವಾರ ಮಾಹಿತಿ ನೀಡಿದೆ. 

ನವದೆಹಲಿ: ಕಳೆದ 24 ಗಂಟೆಗಳಲ್ಲಿ ಕೊರೋನಾ ಸೋಂಕಿನ ಕಾರಣಕ್ಕೆ 4,20,898 ಮಂದಿಯ ಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಶನಿವಾರ ಮಾಹಿತಿ ನೀಡಿದೆ. 

ನಿನ್ನೆ ಒಂದೇ ದಿನ ದೇಶಾದ್ಯಂತ 4,20,898 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದ್ದು, ಆ ಮೂಲಕ ದೇಶದಲ್ಲಿ ಈ ವರೆಗೂ ಅಂದರೆ ಜು.24 ರವರೆಗೂ 1,58,49,068 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ.

ಈ ನಡುವೆ ದೇಶದಲ್ಲಿ ಶನಿವಾರ ಹೊಸದಾಗಿ 48,916 ಮಂದಿಯಲ್ಲಿ ಕೊರೋನಾ ವೈರಸ್ ಸೋಂಕು ಇರುವುದು ಖಚಿತವಾಗಿದ್ದು, ಆ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 13,36,861ಕ್ಕೆ ಏರಿಕೆಯಾಗಿದೆ. ಇನ್ನು ಕಳೆದ 24 ಗಂಟೆಗಳಲ್ಲಿ 757 ಮಂದಿ ಸಾವನ್ನಪ್ಪಿದ್ದು, ಇದರೊಂದಿಗೆ ಮಹಾಮಾರಿ ವೈರಸ್ ದೇಶದಲ್ಲಿ 31,358 ಮಂದಿಯನ್ನು ಬಲಿ ಪಡೆದುಕೊಂಡಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತದಾನದ ಹಕ್ಕನ್ನೇ ಕಸಿದರೆ ಯಾವ ಪಕ್ಷವೂ ಸುರಕ್ಷಿತವಾಗಿರಲ್ಲ': SIR ವಿರುದ್ಧ ದೇಶಾದ್ಯಂತ ಹೋರಾಟಕ್ಕೆ CJP ಕರೆ

ಸ್ಟಿಂಗ್‌ ಆಪರೇಷನ್ ಆರೋಪ: ಶಾಂಗ್ರೀಲಾ ಹೋಟೆಲ್‌ನಲ್ಲಿ ಯಾರ ಜೊತೆ ಕುಳಿತಿದ್ರಿ; ಸಿಎಂ ಶಿವಕುಮಾರ್ ವಿರುದ್ಧ HDK ಹೊಸ ಬಾಂಬ್

ಒಂದು ಕ್ಷಣದ ನಿರ್ಲಕ್ಷ್ಯ, ವಿಚಿತ್ರ ರನೌಟ್‌ಗೆ ತಿಲಕ್ ವರ್ಮಾ ಬಲಿ; ಗಂಭೀರ್ ಫುಲ್ ಗರಂ! ಆಗಿದ್ದೇನು? Video

3rd T20I: ಆಲೌಟ್ ನಲ್ಲೂ ವಿಚಿತ್ರ ದಾಖಲೆ ಬರೆದ ಟೀಂ ಇಂಡಿಯಾ!

"ಜಗತ್ತಿಗೆ ಅಗತ್ಯವಿರುವ ಪರಿಹಾರಗಳು ನಿಮ್ಮಲ್ಲಿವೆ": ಚೆನ್ನೈನಲ್ಲಿ 'Gen Z ಯನ್ನುದ್ದೇಶಿಸಿ ಪ್ರಧಾನಿ ಮೋದಿ ಮಾತು