ಕೋವಿಡ್- ರೋಗಿಗಳ ಸಾಂದರ್ಭಿಕ ಚಿತ್ರ 
ದೇಶ

ತಮಿಳುನಾಡು:ರಾಷ್ಟ್ರೀಯ ಬ್ಯಾಂಕ್ ವೊಂದರ ಮುಖ್ಯ ಶಾಖೆಯ  38 ಉದ್ಯೋಗಿಗಳಿಗೆ ಕೊರೋನಾ!

ತಮಿಳುನಾಡಿನ ತಿರುಚಿರಪಳ್ಳಿಯ ರಾಷ್ಟ್ರೀಯ ಬ್ಯಾಂಕ್ ವೊಂದರ ಮುಖ್ಯ ಶಾಖೆಯ 38 ನೌಕರರಿಗೆ ಕೊರೋನಾತಗುಲಿದೆ. ಬ್ಯಾಂಕ್ ಹಾಗೂ ಸ್ಥಳೀಯ ಸಂಸ್ಥೆಯ ಅಧಿಕಾರಿಗಳು ಈ ವಿಷಯವನ್ನು ತಿಳಿಸಿದ್ದಾರೆ.

ತಿರುಚಿರಪಳ್ಳಿ: ತಮಿಳುನಾಡಿನ ತಿರುಚಿರಪಳ್ಳಿಯ ರಾಷ್ಟ್ರೀಯ ಬ್ಯಾಂಕ್ ವೊಂದರ ಮುಖ್ಯ ಶಾಖೆಯ 38 ನೌಕರರಿಗೆ ಕೊರೋನಾ
ತಗುಲಿದೆ. ಬ್ಯಾಂಕ್ ಹಾಗೂ ಸ್ಥಳೀಯ ಸಂಸ್ಥೆಯ ಅಧಿಕಾರಿಗಳು ಈ ವಿಷಯವನ್ನು ತಿಳಿಸಿದ್ದಾರೆ.

ಬ್ಯಾಂಕಿಗೆ ಬಂದಿರುವ ಗ್ರಾಹಕರು ಸ್ವಯಂ ಪ್ರೇರಿತರಾಗಿ ಕೊರೋನಾವೈರಸ್ ಪರೀಕ್ಷೆ ಮಾಡಿಸಿಕೊಳ್ಳುವಂತೆ ಅಧಿಕಾರಿಗಳು ಸಲಹೆ ನೀಡಿದ್ದಾರೆ.

ಈ ಹಿಂದೆ ಶಾಖೆಯ ಹಿರಿಯ ಅಧಿಕಾರಿಯೊಬ್ಬರು ಕೋವಿಡ್-19 ಕಾರಣದಿಂದ ಮೃತಪಟ್ಟಿದ್ದರು.ಇತ್ತೀಚಿಗೆ ಬ್ಯಾಂಕ್ ನಲ್ಲಿ
ಸಾಮೂಹಿಕ ವೈದ್ಯಕೀಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು. ನಂತರ ತಡವಾಗಿ ಪಾಸಿಟಿವ್ ಪ್ರಕರಣ ಕಂಡುಬಂದಿದೆ 
ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಬ್ಯಾಂಕಿಗೆ ಸೋಂಕು ನಿವಾರಕ ದ್ರಾವಣ ಸಿಂಪಡಿಸಿ ಸ್ವಚ್ಛಗೊಳಿಸಲಾಗಿದ್ದು, ನಾಳೆಯಿಂದ ಕಾರ್ಯಾರಂಭ ಮಾಡುವ ಸಾಧ್ಯತೆಯಿದೆ
ಕಾರ್ಪೋರೇಷನ್ ಆರೋಗ್ಯ ಅಧಿಕಾರಿಗಳು ಬ್ಯಾಂಕಿಗೆ ಆಗಮಿಸಿದ ಗ್ರಾಹಕರೊಂದಿಗೆ ಸಂಪರ್ಕದಲ್ಲಿರುವುದಾಗಿ ಹಿರಿಯ ಬ್ಯಾಂಕ್
ಅಧಿಕಾರಿಗಳು ಹೇಳಿದ್ದಾರೆ.

ಮಹಾರಾಷ್ಟ್ರ ನಂತರ ತಮಿಳುನಾಡಿನಲ್ಲಿ ಅತಿ ಹೆಚ್ಚಿನ ಸಂಖ್ಯೆಯ ಕೊರೋನಾವೈರಸ್ ಪ್ರಕರಣ ವರದಿಯಾಗಿದೆ. ಶನಿವಾರ ಒಟ್ಟಾರೇ, 2,06, 737 ಪಾಸಿಟಿವ್ ಪ್ರಕರಣ ವರದಿಯಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ನೀವು ಪಡೆದ IMF ಬೇಲ್ಔಟ್‌ಗಿಂತ 2 ಪಟ್ಟು ಹೆಚ್ಚು; ಜಾಗಬಿಟ್ಟು ಹೋಗುವುದೇ ಪಾಕ್​ಗಿರುವ ಒಂದೇ ಆಯ್ಕೆ: ವಿಶ್ವಸಂಸ್ಥೆಯಲ್ಲಿ ಭಾರತ ವಾಗ್ದಾಳಿ!

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

Ranji Trophy final: ಔಕಿಬ್ ನಬಿ ಬೌಲಿಂಗ್ ಮ್ಯಾಜಿಕ್‌ಗೆ ಬೆರಗಾದ ಕೆಎಲ್ ರಾಹುಲ್; ಆರಂಭದಲ್ಲೇ ಕರ್ನಾಟಕಕ್ಕೆ ಸಂಕಷ್ಟ!

SCROLL FOR NEXT