ಲಾಲು ಪ್ರಸಾದ್ ಯಾದವ್ 
ದೇಶ

ರಾಂಚಿಯ ರಿಮ್ಸ್ ಆಸ್ಪತ್ರೆಯಲ್ಲಿರುವ ಲಾಲು ಪ್ರಸಾದ್ ಯಾದವ್ ಗೆ ಕೊರೋನಾ ಟೆಸ್ಟ್

ಬಹುಕೋಟಿ ಮೇವು ಹಗರಣದಲ್ಲಿ ಜೈಲು ಪಾಲಾಗಿರುವ ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರು ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ರಾಂಚಿಯ ರಾಜೇಂದ್ರ ವೈದ್ಯಕೀಯ ವಿಜ್ಞಾನ ಸಂಸ್ಥೆ(ರಿಮ್ಸ್)ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಶನಿವಾರ ಅವರನ್ನು ಕೊವಿಡ್-19 ಪರೀಕ್ಷೆಗೆ ಒಳಪಡಿಸಲಾಗಿದೆ.

ರಾಂಚಿ: ಬಹುಕೋಟಿ ಮೇವು ಹಗರಣದಲ್ಲಿ ಜೈಲು ಪಾಲಾಗಿರುವ ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರು ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ರಾಂಚಿಯ ರಾಜೇಂದ್ರ ವೈದ್ಯಕೀಯ ವಿಜ್ಞಾನ ಸಂಸ್ಥೆ(ರಿಮ್ಸ್)ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಶನಿವಾರ ಅವರನ್ನು ಕೊವಿಡ್-19 ಪರೀಕ್ಷೆಗೆ ಒಳಪಡಿಸಲಾಗಿದೆ.

ಲಾಲು ಆಪ್ತರು ಶೀತ ಮತ್ತು ಕೆಮ್ಮಿನಿಂದ ಬಳಲುತ್ತಿರುವ ಹಿನ್ನೆಲೆಯಲ್ಲಿ ಅವರಿಗೆ ಕೊರೋನಾ ಟೆಸ್ಟ್ ನಡೆಸಲಾಗಿದೆ ಎನ್ನಲಾಗುತ್ತಿದೆ. ಆದರೆ ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಲಾಲು ಪ್ರಸಾದ್ ಯಾದವ್ ಅವರಿಗೆ ಕೊರೋನಾ ಟೆಸ್ಟ್ ನಡೆಸಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಲಾಲು ಪ್ರಸಾದ್ ಯಾದವ್ ಅವರ ಸ್ವ್ಯಾಬ್ ಮಾದರಿಯನ್ನು ಪಡೆದು ಟೆಸ್ಟ್ ಕಳುಹಿಸಲಾಗಿದೆ. ಭಾನುವಾರ ಸಂಜೆ ವರದಿ ಬರುವ ಸಾಧ್ಯತೆ ಇದೆ ಎಂದು ಆಸ್ಪತ್ರೆಯ ವೈದ್ಯ ಡಾ. ಉಮೇಶ್ ಪ್ರಸಾದ್ ಅವರು ತಿಳಿಸಿದ್ದಾರೆ.

ಬಿಹಾರ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ ಅವರಿಗೆ ಕೊರೋನಾದ ಯಾವುದೇ ಲಕ್ಷಣಗಳು ಕಾಣಿಸಿಕೊಂಡಿಲ್ಲ ಎಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

CJP protest: ಮಮತಾ ಬ್ಯಾನರ್ಜಿ, ನೇಹಾ ಬೋರಾ, ಯೋಗೇಂದ್ರ ಯಾದವ್ ವಶಕ್ಕೆ ಪಡೆದ ಪೊಲೀಸರು