ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ದೇಶಾದ್ಯಂತ 24 ಗಂಟೆಗಳಲ್ಲಿ 4,42,263 ಕೋವಿಡ್ ಪರೀಕ್ಷೆ, ಜುಲೈ 25ರವರೆಗೆ ಒಟ್ಟಾರೆ 1,62,91,331 ಸ್ಯಾಂಪಲ್ ಪರೀಕ್ಷೆ: ಐಸಿಎಂಆರ್

ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ದೇಶದಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿರುವಂತೆಯೇ ಇತ್ತ ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ 24 ಗಂಟೆಗಳಲ್ಲಿ ದೇಶಾದ್ಯಂತ 4,42,263 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ.

ಸಂಗ್ರಹ ಚಿತ್ರ
Manjula VN
Updated On : 26 Jul 2020, 10:27 am

ನವದೆಹಲಿ: ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ದೇಶದಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿರುವಂತೆಯೇ ಇತ್ತ ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ 24 ಗಂಟೆಗಳಲ್ಲಿ ದೇಶಾದ್ಯಂತ 4,42,263 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ. 

ಈ ಬಗ್ಗೆ ಐಸಿಎಂಆರ್ ಮಾಹಿತಿ ನೀಡಿದ್ದು, ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 4,42,263 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದ್ದು, ಆ ಮೂಲಕ ದೇಶದಲ್ಲಿ ಈ ವರೆಗೂ ಅಂದರೆ ಜುಲೈ.26ರವರೆಗೂ 1,62,91,331 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ.

ಈ ನಡುವೆ ದೇಶದಲ್ಲಿ ಕೊರೋನಾ ಆರ್ಭಟ ಮತ್ತಷ್ಟು ತೀವ್ರಗೊಂಡಿದ್ದು, ಒಂದೇ ದಿನ 48,661 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. 

Advertisement

Advertisement

ಇದರೊಂದಿಗೆ ದೇಶದಲ್ಲಿ ಈ ವರೆಗೂ ಒಟ್ಟು ಸೋಂಕಿತರ ಸಂಖ್ಯೆ 13,85,522ಕ್ಕೆ ಏರಿಕೆಯಾಗಿದೆ. ಮತ್ತೊಂದೆಡೆ ನಿನ್ನೆ ಒಂದೇ ದಿನ 705 ಮಂದಿ ಬಲಿಯಾಗಿದ್ದು, ಸಾವಿನ ಸಂಖ್ಯೆ ಕೂಡ 32,063ಕ್ಕೆ ತಲುಪಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement