120 ವೆಂಟಿಲೇಟರ್ ಕೊಡುಗೆ 
ದೇಶ

ಫ್ರಾನ್ಸ್ ನಿಂದ ಭಾರತಕ್ಕೆ 120 ವೆಂಟಿಲೇಟರ್, 50,000 ಕೊವಿಡ್‍ ಪರೀಕ್ಷಾ ಕಿಟ್‌ಗಳ ಕೊಡುಗೆ

ಉಭಯ ದೇಶಗಳ ದ್ವಿಪಕ್ಷೀಯ ಸಂಬಂಧವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುವ ನಿಟ್ಟಿನಲ್ಲಿ ಕರೋನಾ ವೈರಸ್ ಪ್ರಕರಣಗಳು ವೇಗವಾಗಿ ಹರಡುವುದನ್ನು ಎದುರಿಸಲು ಫ್ರಾನ್ಸ್ ಸರ್ಕಾರ...

ನವದೆಹಲಿ: ಉಭಯ ದೇಶಗಳ ದ್ವಿಪಕ್ಷೀಯ ಸಂಬಂಧವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುವ ನಿಟ್ಟಿನಲ್ಲಿ ಕರೋನಾ ವೈರಸ್ ಪ್ರಕರಣಗಳು ವೇಗವಾಗಿ ಹರಡುವುದನ್ನು ಎದುರಿಸಲು ಫ್ರಾನ್ಸ್ ಸರ್ಕಾರ 120 ವೆಂಟಿಲೇಟರ್ ಗಳು ಮತ್ತು 50,000 ಕೊವಿಡ್‍ -19 ಪರೀಕ್ಷಾ ಕಿಟ್‌ಗಳನ್ನು ಭಾರತಕ್ಕೆ ಕೊಡುಗೆಯಾಗಿ ನೀಡಿದೆ.

ವೆಂಟಿಲೇಟರ್‌ಗಳು ಮತ್ತು ಟೆಸ್ಟ್ ಕಿಟ್‌ಗಳನ್ನು ಮಂಗಳವಾರ ಭಾರತದಲ್ಲಿನ ಫ್ರಾನ್ಸ್ ರಾಯಭಾರಿ ಎಮ್ಯಾನುಯೆಲ್ ಲೆನೈನ್ ಅವರಿಂದ ಭಾರತೀಯ ರೆಡ್‌ಕ್ರಾಸ್ ಸೊಸೈಟಿ ಮತ್ತು ಐಸಿಎಂಆರ್ ಅಧಿಕಾರಿಗಳು ಸ್ವೀಕರಿಸಿದರು.

‘ಭಾರತಕ್ಕೆ ಫ್ರಾನ್ಸ್ ಪ್ರಮುಖ ಕಾರ್ಯತಂತ್ರದ ಪಾಲುದಾರ ದೇಶಗಳಲ್ಲಿ ಒಂದಾಗಿದ್ದು, ಎರಡೂ ದೇಶಗಳ ಅತ್ಯಂತ ಸ್ನೇಹಪರ ಸಂಬಂಧ ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯಲು ಮತ್ತು ವಿವಿಧ ವಿಷಯಗಳಲ್ಲಿ ನಿಕಟ ಸಹಕಾರ ಹೊಂದುವ ದೃಷ್ಟಿಯಿಂದ ಸಂಕಷ್ಟದ ಸಮಯದಲ್ಲಿ ಸಾಂಕ್ರಾಮಿಕ ರೋಗವನ್ನು ಎದುರಿಸಲು ಫ್ರಾನ್ಸ್‌ಗೆ ಈಗಾಗಲೇ ಜೀವರಕ್ಷಕ ಔಷಧಿಗಳನ್ನು ಪೂರೈಸಲಾಗಿದೆ.’ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಮೂಲಗಳು ತಿಳಿಸಿವೆ.

ಕೊರೋನಾ ವೈರಸ್ ಸೋಂಕು ನಿಯಂತ್ರಣ ಮತ್ತು ನಿರ್ಮೂಲನೆಗೆ ಭಾರತ ಮತ್ತು ಫ್ರಾನ್ಸ್ ಒಟ್ಟುಗೂಡಿ ಹೋರಾಟ ನಡೆಸಬೇಕಿದೆ. ಮಹಾಮಾರಿ ವಿರುದ್ಧ ಹೋರಾಟಕ್ಕೆ ಭಾರತದ ಜೊತೆಗೆ ಕೈಜೋಡಿಸಲು ಫ್ರಾನ್ಸ್ ಸದಾ ಸಿದ್ಧವಾಗಿರುತ್ತದೆ. ಅದಕ್ಕೆ ಅಗತ್ಯವಾಗಿರುವ ಮೂಲಸೌಕರ್ಯಗಳ ವಿನಿಮಯ ಮಾಡಿಕೊಳ್ಳಲಾಗುವುದು ಎಂದು ಫ್ರಾನ್ಸ್ ರಾಯಭಾರಿ ಎಮ್ಯಾನ್ಯುವಲ್ ಲೆನೈನ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

BBK 13: ಗಾನವಿ ಹೇಳಿಕೆಗೆ ನೊಂದು ಗಗನ್ ತಾಯಿಗೆ ತಾನೇ ಕ್ಷಮೆ ಕೇಳಿ ಕಣ್ಣೀರು ಹಾಕಿದ ಸುದೀಪ್

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!