ದೇಶ

ದೇಶಾದ್ಯಂತ 24 ಗಂಟೆಗಳಲ್ಲಿ 5,28,082 ಕೋವಿಡ್-19 ಪರೀಕ್ಷೆ ನಡೆಸಲಾಗಿದೆ: ಐಸಿಎಂಆರ್

Manjula VN

ನವದೆಹಲಿ: ಕಳೆದ 24 ಗಂಟೆಗಳಲ್ಲಿ ಕೊರೋನಾ ಸೋಂಕಿನ ಕಾರಣಕ್ಕೆ 5,28,082 ಮಂದಿಯ ಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಮಂಗಳವಾರ ಮಾಹಿತಿ ನೀಡಿದೆ. 

ನಿನ್ನೆ ಒಂದೇ ದಿನ ದೇಶಾದ್ಯಂತ 5,28,082 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದ್ದು, ಆ ಮೂಲಕ ದೇಶದಲ್ಲಿ ಈ ವರೆಗೂ ಅಂದರೆ ಜು.27ರವರೆಗೂ 1,73,34,885 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ.

ಈ ನಡುವೆ ದೇಶದಲ್ಲಿ ಸೋಂಕಿ ಪೀಡಿತರ ಪ್ರಮಾಣ ಶೇ.64.23ಕ್ಕೆ ಏರಿಕೆಯಾಗಿದ್ದು, ಗುಣಮುಖರಾದವರ ಪ್ರಮಾಣ ಶೇ.96.6ಕ್ಕೆ ಹೆಚ್ಚಳವಾಗಿದ್ದು. ಹಾಗೂ ಸಾವಿನ ಪ್ರಮಾಣ ಶೇ.3.4ಕ್ಕೆ ತಲುಪಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. 

ಇನ್ನು ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 47,704 ಮಂದಿಯಲ್ಲಿ ವೈರಸ್ ಪತ್ತೆಯಾಗಿದ್ದು, ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 14,83,157ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಂಗಳವಾರ ಮಾಹಿತಿ ನೀಡಿದೆ. 

ಈ ನಡುವೆ ಒಂದೇ ದಿನ 654 ಮಂದಿ ಬಲಿಯಾಗಿದ್ದು, ದೇಶದಲ್ಲಿ ಕೊರೋನಾಗೆ ಸಾವನ್ನಪ್ಪಿದವರ ಸಂಖ್ಯೆ 33,425 ಏರಿಕೆಯಾಗಿದೆ ಎಂದು ವರದಿಗಳು ತಿಳಿಸಿವೆ. 

SCROLL FOR NEXT