ದೇಶ

ಎಲ್ಗರ್ ಪರಿಷತ್ ಪ್ರಕರಣ: ದೆಹಲಿ ವಿವಿ ಪ್ರಾಧ್ಯಾಪಕ ಹನಿ ಬಾಬುಗೆ ಆಗಸ್ಟ್ 4ರವರೆಗೆ ಎನ್ಐಎ ಕಸ್ಟಡಿ

Raghavendra Adiga

ಮುಂಬೈ: ಭೀಮಾ ಕೋರೆಗಾಂವ್ ಎಲ್ಗರ್ ಪರಿಷತ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟ ದೆಹಲಿ ವಿಶ್ವವಿದ್ಯಾಲಯದ (ಡಿಯು) ಸಹಾಯಕ ಪ್ರಾಧ್ಯಾಪಕ ಹನಿ ಬಾಬು ಅವರನ್ನು ಆಗಸ್ಟ್ 4 ರವರೆಗೆ ಎನ್ಐಎ ಕಸ್ಟಡಿಗೆ ಒಪ್ಪಿಸಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಇಂಗ್ಲಿಷ್ ವಿಭಾಗದ ಸಹಾಯಕ ಪ್ರಾಧ್ಯಾಪಕ ಹನಿ ಬಾಬುತಾರೈಲ್ (54) ಅವರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಮಂಗಳವಾರ ಬಂಧಿಸಿದೆ ಬುಧವಾರ ಅವರನ್ನು ಮುಂಬೈನ ವಿಶೇಷ ಎನ್‌ಐಎ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಪ್ರಕರಣದಲ್ಲಿ ಭಾಗಿಯಾಗಿದ್ದಕ್ಕಾಗಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ತನಿಖಾ ಸಂಸ್ಥೆ ನ್ಯಾಯಾಲಯಕ್ಕೆ ತಿಳಿಸಿದೆ.

ಆರೋಪಿಗಳಿಗೆ ಸಿಪಿಐ (ಮಾವೋವಾದಿ) ಪಕ್ಷದೊಂದಿಗೆ ಸಂಬಂಧವಿದೆ ಎಂದು ತನಿಖಾ ಸಂಸ್ಥೆ ಆರೋಪಿಸಿದೆ.ತನಿಖೆಯ ಸಮಯದಲ್ಲಿ, ವಶಪಡಿಸಿಕೊಂಡ ಎಲೆಕ್ಟ್ರಾನಿಕ್ ಆರ್ಟಿಕಲ್ ಗಳಿಂದ ವಿವಿಧ ಪತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ, ಇದು ಪ್ರಕರಣದಲ್ಲಿ ಆತನ ಪಾಲ್ಗೊಳ್ಳುವಿಕೆಯನ್ನು ಸೂಚಿಸುತ್ತದೆ ಎಂದು ಎನ್ಐಎ ತಿಳಿಸಿದೆ

ಕಳೆದ ನಾಲ್ಕೈದು ದಿನಗಳಿಂದ ಹನಿ ಬಾಬು ಅವರನ್ನು ಎನ್‌ಐಎ ವಿಚಾರಣೆ ನಡೆಸುತ್ತಿದೆ ಎಂದು ಆರೋಪಿಗಳ ಪರವಾಗಿ ಹಾಜರಾದ ವಕೀಲರು ವಾದಿಸಿದ್ದು ಅದರಿಂದಾಗಿ ಅವರನ್ನು ಕಸ್ಟಡಿಗೆ ಒಪ್ಪಿಸುವುದು ಅಗತ್ಯವಿಲ್ಲ ಎಂದು ಅವರು ನ್ಯಾಯಾಲಯಕ್ಕೆ ಹೇಳಿದ್ದರು. 

ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಎ ಟಿ ವಾಂಖೆಡೆ, ದಾಖಲೆಯನ್ನು ಪರಿಶೀಲಿಸಿದ ನಂತರ, ಆರೋಪಿಗಳ ವಿರುದ್ಧದ ಆರೋಪಗಳು ಗಂಭೀರ ಸ್ವರೂಪದ್ದಾಗಿರುವುದು ಕಂಡುಬಂದಿದೆ. ಹಾಗಾಗಿ ನ್ಯಾಯಾಲಯವು ಅವನನ್ನು ಏಳು ದಿನಗಳ ಎನ್ಐಎ ಬಂಧನದಲ್ಲಿರಿಸಿದೆ.

SCROLL FOR NEXT