ಸಂಗ್ರಹ ಚಿತ್ರ 
ದೇಶ

ದೇಶಾದ್ಯಂತ ಒಂದೇ ದಿನ 48,513 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆ; ಸೋಂಕಿತರ ಸಂಖ್ಯೆ 15 ಲಕ್ಷ, 34,193 ಮಂದಿ ಸಾವು

ಭಾರತದಲ್ಲಿ ಕೊರೋನಾ ವೈರಸ್ ತನ್ನ ಆರ್ಭಟವನ್ನು ದಿನದಿಂದ ದಿನಕ್ಕೆ ಹೆಚ್ಚಿಸುತ್ತಲೇ ಇದ್ದು, ಒಂದೇ ದಿನ 48,513 ಮಂದಿಯಲ್ಲಿ ಸೋಂಕು ಪತ್ತೆಯಾಗುವುದರೊಂದಿದೆ, ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 15 ಲಕ್ಷ ಗಡಿ ದಾಟಿದೆ. 

ನವದೆಹಲಿ: ಭಾರತದಲ್ಲಿ ಕೊರೋನಾ ವೈರಸ್ ತನ್ನ ಆರ್ಭಟವನ್ನು ದಿನದಿಂದ ದಿನಕ್ಕೆ ಹೆಚ್ಚಿಸುತ್ತಲೇ ಇದ್ದು, ಒಂದೇ ದಿನ 48,513 ಮಂದಿಯಲ್ಲಿ ಸೋಂಕು ಪತ್ತೆಯಾಗುವುದರೊಂದಿದೆ, ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 15 ಲಕ್ಷ ಗಡಿ ದಾಟಿದೆ. 

ಕಳೆದ 24 ಗಂಟೆಗಳಲ್ಲಿ 48,513 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು, ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ  15,31,669ಕ್ಕೆ ಏರಿಕೆಯಾಗಿದೆ. ಇನ್ನು ನಿನ್ನೆ ಒಂದೇ ದಿನ 768 ಮಂದಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 34,193ಕ್ಕೆ ತಲುಪಿದೆ. 

ಇನ್ನು 15,31,669ಕ್ಕೆ ಮಂದಿ ಸೋಂಕಿತರ ಪೈಕಿ 9,88,030 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಇನ್ನೂ ದೇಶದಲ್ಲಿ 5,09,447 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

The total number of COVID19 active cases in India is 5,09,447, discharged/migrated cases 9,88,030 and 34,193 deaths: Ministry of Health https://t.co/A5zewv12fk

ದೇಶಾದ್ಯಂತ 24 ಗಂಟೆಗಳಲ್ಲಿ 4,08,855 ಕೋವಿಡ್-19 ಪರೀಕ್ಷೆ ನಡೆಸಲಾಗಿದೆ: ಐಸಿಎಂಆರ್
ಕಳೆದ 24 ಗಂಟೆಗಳಲ್ಲಿ ಕೊರೋನಾ ಸೋಂಕಿನ ಕಾರಣಕ್ಕೆ 4,08,855 ಮಂದಿಯ ಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಬುಧವಾರ ಮಾಹಿತಿ ನೀಡಿದೆ. 

ನಿನ್ನೆ ಒಂದೇ ದಿನ ದೇಶಾದ್ಯಂತ 4,08,855 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದ್ದು, ಆ ಮೂಲಕ ದೇಶದಲ್ಲಿ ಈ ವರೆಗೂ ಅಂದರೆ ಜು.28ರವರೆಗೂ 1,77,43,740 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಾಳೆ CJPಯ ತಿರಂಗಾ ಮೆರವಣಿಗೆ ನಡೆಯಬೇಕಿದ್ದ ದೆಹಲಿಯ ಸೆಂಟ್ರಲ್ ಪಾರ್ಕ್ ಅನ್ನು 2 ದಿನ ಮುಚ್ಚಿದ NDMC!

ಕನ್ನಡಿಗರು ಕೊಟ್ಟ ದುಡ್ಡಲ್ಲೇ AR Rahman ತಮ್ಮ ಮೊದಲ ಸ್ಟುಡಿಯೋ ಕಟ್ಟಿದ್ದು: ನಟ ಯಶ್

ದೇಶಕ್ಕೆ ಹೇಗೆ ಬೆಂಕಿ ಹಚ್ಚಬೇಕು ಎಂಬುದನ್ನು ಬಾಂಗ್ಲಾದೇಶ ನಮಗೆ ತೋರಿಸಿಕೊಟ್ಟಿದೆ: ನೇಹಾ ಬೋರಾ ಹೇಳಿಕೆಗೆ ಬಿಜೆಪಿ ಆಕ್ರೋಶ!

Ramayana: 'ರಾಮಾಯಣ'ದ ರನ್ ಟೈಮ್ ಮೂರು ಗಂಟೆಗೂ ಹೆಚ್ಚು; ಅಮೆರಿಕದಲ್ಲಿ 'PG-13' ರೇಟಿಂಗ್!

ದೆಹಲಿಯ ರಾಮಲೀಲಾದಲ್ಲಿ ಈ ಬಾರಿ ರಾವಣನ ಜೊತೆಗೆ 30 ಅಡಿ ಎತ್ತರದ ಕಾಕ್ರೋಚ್ ಪ್ರತಿಕೃತಿ ದಹನ!