ಸಂಗ್ರಹ ಚಿತ್ರ 
ದೇಶ

ಮಹಾಮಾರಿ ಕೊರೋನಾ ಹೆಚ್ಚಳ: ತಮಿಳುನಾಡಿನಲ್ಲಿ ಆಗಸ್ಟ್ 31ರವರೆಗೆ ಸಂಪೂರ್ಣ ಲಾಕ್‌ಡೌನ್‌ ವಿಸ್ತರಣೆ

ರಾಜ್ಯದಲ್ಲಿ ಕೋವಿಡ್‌ ಪ್ರಕರಣಗಳು ನಿಯಂತ್ರಣ ಮೀರಿ ಏರಿಕೆಯಾಗುತ್ತಲೇ ಇರುವ ಹಿನ್ನೆಲೆಯಲ್ಲಿ ತಮಿಳುನಾಡು ಸರ್ಕಾರ ಆ.31ರವರೆಗೆ ಲಾಕ್‌ಡೌನ್‌ ವಿಸ್ತರಿಸಿ ಆದೇಶ ಹೊರಡಿಸಿದೆ.

ಚೆನ್ನೈ: ರಾಜ್ಯದಲ್ಲಿ ಕೋವಿಡ್‌ ಪ್ರಕರಣಗಳು ನಿಯಂತ್ರಣ ಮೀರಿ ಏರಿಕೆಯಾಗುತ್ತಲೇ ಇರುವ ಹಿನ್ನೆಲೆಯಲ್ಲಿ ತಮಿಳುನಾಡು ಸರ್ಕಾರ ಆ.31ರವರೆಗೆ ಲಾಕ್‌ಡೌನ್‌ ವಿಸ್ತರಿಸಿ ಆದೇಶ ಹೊರಡಿಸಿದೆ. 

ಈ ಹಿಂದೆ ನೀಡಿದ್ದ ವಿನಾಯ್ತಿ ಮತ್ತು ನಿರ್ಬಂಧಗಳಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲಾಗಿದೆ. ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು ಮತ್ತು ಸಾರ್ವಜನಿಕ ಆರೋಗ್ಯ ತಜ್ಞರ ಅಬಿಪ್ರಾಯಗಳ ಆಧಾರದ ಮೇಲೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಎಡಪ್ಪಾಡಿ ಕೆ.ಪಳನಿಸ್ವಾಮಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇಲ್ಲಿಯವರೆಗೆ ಲಾಕ್‌ಡೌನ್ ಜಾರಿಯಿರುವ ಪ್ರದೇಶಗಳಲ್ಲಿ ಆಗಸ್ಟ್ ಅಂತ್ಯದವರೆಗೆ ಸಂಪೂರ್ಣ ಲಾಕ್‌ಡೌನ್‌ ಇರಲಿದ್ದು, ಭಾನುವಾರಗಳಂದು ಕೂಡ ವಿನಾಯ್ತಿ ಇರುವುದಿಲ್ಲ. ಇತರ ಜಿಲ್ಲೆಗಳಲ್ಲಿ ಸದ್ಯ ಇರುವ ನಿರ್ಬಂಧಗಳೇ ಮುಂದುವರಿಲಿದೆ ಎಂದು ಅವರು ತಿಳಿಸಿದ್ದಾರೆ.

ಜೊತೆಗೆ, ಕೇಂದ್ರ ಸರ್ಕಾರದ ಮಾರ್ಗಸೂಚಿ ಅನುಸಾರ ರಾಜ್ಯಾದ್ಯಂತ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಗುವುದು. ಈ ಸಂದರ್ಭದಲ್ಲಿ ಮಾಸ್ಕ್ ಧರಿಸುವುದು ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕಡ್ಡಾಯ ಎಂದಿದ್ದಾರೆ.

ರಾಜ್ಯದಿಂದ ಹೊರಗೆ ಪ್ರಯಾಣ ಮಾಡುವವರು ಮತ್ತು ಒಳಬರುವವರು ಇ-ಪಾಸ್‌ ಪಡೆಯುವುದು ಕಡ್ಡಾಯ. ಅಂತರಜಿಲ್ಲಾ ಪ್ರಯಾಣಕ್ಕೆ ಕೂಡ ಇದು ಅನ್ವಯವಾಗುತ್ತದೆ ಎಂದು ಸಿಎಂ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

BBK 13: ಗಾನವಿ ಹೇಳಿಕೆಗೆ ನೊಂದು ಗಗನ್ ತಾಯಿಗೆ ತಾನೇ ಕ್ಷಮೆ ಕೇಳಿ ಕಣ್ಣೀರು ಹಾಕಿದ ಸುದೀಪ್

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!