ದೇಶ

ಕೋವಿಡ್-19 ಮುಖ್ಯ ಕಾರ್ಯಕರ್ತರಿಗೆ ವೇತನ ನೀಡುವಲ್ಲಿ ಕರ್ನಾಟಕ ಸೇರಿ 4 ರಾಜ್ಯಗಳು ವಿಫಲ: ಕೇಂದ್ರ ಸರ್ಕಾರ

Sumana Upadhyaya

ನವದೆಹಲಿ: ಕರ್ನಾಟಕ, ಮಹಾರಾಷ್ಟ್ರ, ಪಂಜಾಬ್ ಮತ್ತು ತ್ರಿಪುರಾ ರಾಜ್ಯಗಳು ಕೋವಿಡ್-19 ಆರೋಗ್ಯ ಕಾರ್ಯಕರ್ತರು ಮತ್ತು ವೈದ್ಯರಿಗೆ ಸರಿಯಾದ ಸಮಯಕ್ಕೆ ವೇತನ ಪಾವತಿ ಮಾಡಿಲ್ಲ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ಹೇಳಿದೆ.

ಕೋವಿಡ್-19ನ ಈ ಸಂಕಷ್ಟ ಕಾಲದಲ್ಲಿ ಹಗಲಿರುಳು ಕೊರೋನಾ ಸೋಂಕಿನ ವಿರುದ್ಧ ಮತ್ತು ಸೋಂಕಿತರ ಆರೋಗ್ಯ ಸುಧಾರಿಸಲು ಶ್ರಮಿಸುತ್ತಿರುವ ವೈದ್ಯರು, ದಾದಿಯರು ಮತ್ತು ಆರೋಗ್ಯ ಕಾರ್ಯಕರ್ತರಿಗೆ ಸರಿಯಾದ ಸಮಯಕ್ಕೆ ವೇತನ ನೀಡುವಂತೆ ಅಗತ್ಯ ಕ್ರಮ ವಹಿಸಬೇಕೆಂದು ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಆದೇಶ ನೀಡಿತ್ತು.

ಕೋವಿಡ್-19 ಆರೋಗ್ಯ ಸೇವೆ ಕಾರ್ಯಕರ್ತರಿಗೆ ಸೂಕ್ತ ಸಮಯಕ್ಕೆ ಕಡ್ಡಾಯವಾಗಿ ವೇತನ ಬಿಡುಗಡೆ ಮಾಡಬೇಕೆಂದು ಮತ್ತು ಆದೇಶವನ್ನು ಪಾಲಿಸದಿದ್ದರೆ ವಿಪತ್ತು ನಿರ್ವಹಣೆ ಕಾಯ್ದೆಯಡಿ ಅಪರಾಧವಾಗುತ್ತದೆ ಎಂದು ರಾಜ್ಯ ಸರ್ಕಾರಗಳಿಗೆ ಮಾರ್ಗಸೂಚಿ ಬಿಡುಗಡೆ ಮಾಡುವುದಾಗಿ ಕಳೆದ ತಿಂಗಳು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ತಿಳಿಸಿತ್ತು.

SCROLL FOR NEXT