ಸಂಗ್ರಹ ಚಿತ್ರ 
ದೇಶ

ರಾಜಸ್ಥಾನ ರಾಜಕೀಯ ಬಿಕ್ಕಟ್ಟು; ಜೈಸಲ್ಮೇರ್ ಗೆ ಕೈ ಶಾಸಕರ ಸ್ಥಳಾಂತರ!

ರಾಜಸ್ಥಾನ ರಾಜಕೀಯ ಬಿಕ್ಕಟ್ಟು ಮುಂದುವರೆದಿದ್ದು ಶಾಸಕರ ಕುದುರೆ ವ್ಯಾಪಾರದ ಆರೋಪ ಬಲವಾಗಿ ಕೇಳಿ ಬರುತ್ತಿರುವ ಬೆನ್ನಲ್ಲೇ ಇದೀಗ ಖಾಸಗಿ ಹೊಟೆಲ್ ನಲ್ಲಿ ವಾಸ್ತವ್ಯವಿದ್ದ ಕಾಂಗ್ರೆಸ್ ಶಾಸಕರನ್ನು ಜೈಸಲ್ಮೇರ್ ಗೆ ಸ್ಥಳಾಂತರಿಸಲಾಗುತ್ತಿದೆ ಎಂಬ ಮಾಹಿತಿ ತಿಳಿದುಬಂದಿದೆ.

ಜೈಪುರ: ರಾಜಸ್ಥಾನ ರಾಜಕೀಯ ಬಿಕ್ಕಟ್ಟು ಮುಂದುವರೆದಿದ್ದು ಶಾಸಕರ ಕುದುರೆ ವ್ಯಾಪಾರದ ಆರೋಪ ಬಲವಾಗಿ ಕೇಳಿ ಬರುತ್ತಿರುವ ಬೆನ್ನಲ್ಲೇ ಇದೀಗ ಖಾಸಗಿ ಹೊಟೆಲ್ ನಲ್ಲಿ ವಾಸ್ತವ್ಯವಿದ್ದ ಕಾಂಗ್ರೆಸ್ ಶಾಸಕರನ್ನು ಜೈಸಲ್ಮೇರ್ ಗೆ ಸ್ಥಳಾಂತರಿಸಲಾಗುತ್ತಿದೆ ಎಂಬ ಮಾಹಿತಿ ತಿಳಿದುಬಂದಿದೆ.

ಹೌದು.. ವಿಧಾನಸಭೆ ಅಧಿವೇಶನ ನಡೆಸಲು ರಾಜಸ್ಥಾನ ರಾಜ್ಯಪಾಲ ಕಲ್‌ರಾಜ್‌ ಮಿಶ್ರಾ ಅನುಮತಿ ನೀಡಿರುವ ಬೆನ್ನಲ್ಲೇ ರಾಜಸ್ಥಾನದಲ್ಲಿ ರಾಜಕೀಯ ಚಟುವಟಿಕೆಗಳು ಮತ್ತೆ ಚುರುಕುಗೊಂಡಿವೆ. ಅಂತೆಯೇ ಶಾಸಕರ ಕುದುರೆ ವ್ಯಾಪಾರ ಕೂಡ ಜೋರಾಗಿ ನಡೆದಿದ್ದು, ಈ ಬಗ್ಗೆ ಸ್ವತಃ ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೂಟ್ ಅವರು ಮಾಹಿತಿ ನೀಡಿದ್ದು, ಅಧಿವೇಶನಕ್ಕೆ ಅನುಮತಿ ದೊರೆತ ಬೆನ್ನಲ್ಲೇ ಶಾಸಕರ ಬೆಲೆ ಗಗನಕ್ಕೇರಿದೆ ಎಂದು ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ. 

ಇದೇ ಕಾರಣಕ್ಕೆ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್‌ ಅವರ ನಿಷ್ಠ ಶಾಸಕರನ್ನು ಜೈಪುರ ಹೋಟೆಲ್‌ನಿಂದ ಜೈಸಲ್ಮೇರ್‌ನಲ್ಲಿರುವ ಹೋಟೆಲ್‌ಗೆ ಸ್ಥಳಾಂತರಿಸಲು ಮುಖಂಡರು ಮುಂದಾಗಿದ್ದಾರೆ. ಆದರೆ, ಶಾಸಕರನ್ನು ಸ್ಥಳಾಂತರಿಸಲು ಕಾರಣ ಏನು ಎಂಬುದನ್ನು ಮೂಲಗಳು ಸ್ಪಷ್ಟಪಡಿಸಿಲ್ಲ. ಶಾಸಕರನ್ನು ಸದ್ಯ ಜೈಪುರ–ದೆಹಲಿ ರಾಷ್ಟ್ರೀಯ ಹೆದ್ದಾರಿ ಬಳಿಯ ಐಷಾರಾಮಿ ಹೋಟೆಲ್‌ನಲ್ಲಿ ಇರಿಸಲಾಗಿದೆ. ಅಲ್ಲಿಯೇ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ಗೆಹ್ಲೋಟ್‌ ಅವರು ಶಾಸಕರನ್ನು ಉದ್ದೇಶಿಸಿ ಮಾತನಾಡುತ್ತಾರೆ ಎನ್ನಲಾಗಿದೆ.  ನಂತರ ಎಲ್ಲ ಶಾಸಕರನ್ನೂ ಜೈಸಲ್ಮೇರ್‌ನ ಹೋಟೆಲ್‌ಗೆ ಸ್ಥಳಾಂತರಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

ಸಚಿನ್‌ ಪೈಲಟ್‌ ಹಾಗೂ 18 ಜನ ಶಾಸಕರು ಬಂಡಾಯದ ಬಾವುಟ ಹಾರಿಸಿದ ನಂತರ ರಾಜಕೀಯ ಬಿಕ್ಕಟ್ಟು ಸೃಷ್ಟಿಯಾಯಿತು. ಹೀಗಾಗಿ ಜುಲೈ 13ರಂದು ಶಾಸಕರು ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ಜೊತೆ ರಷ್ಯಾ ಗೌಪ್ಯ ಮಾಹಿತಿ ಹಂಚಿಕೆ: ವಿಶ್ವದಲ್ಲೇ ಅತ್ಯುತ್ತಮ ಗುಪ್ತಚರ ವ್ಯವಸ್ಥೆ ನಮ್ಮದು, ಭಯವಿಲ್ಲ ಎಂದ ಅಮೆರಿಕಾ

LPG Price Hike: ದೇಶದ ನಾಗರಿಕರಿಗೆ ತಟ್ಟಿದ ಬಿಸಿ, ಇರಾನ್ ಯುದ್ಧ ಮಧ್ಯೆ ಎಲ್ ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

ಬಿಹಾರದ ನೂತನ ಸಾರಥಿ ಯಾರು: ದಲಿತ ನಾಯಕನಿಗೆ ಸಿಎಂ ಪಟ್ಟವೋ? ಅಮಿತ್ ಶಾ ಭಂಟನಿಗೆ ಸಿಂಹಾಸನವೋ!

Karnataka Budget 2026-ಬೆಂಗಳೂರು ನಂತರ ರಾಜ್ಯದ ಎರಡನೇ ಐಟಿ ನಗರವಾಗಿ ಮೈಸೂರು ಅಭಿವೃದ್ಧಿ: ಸಿಎಂ ಸಿದ್ದರಾಮಯ್ಯ

ನ್ಯೂಯಾರ್ಕ್ ನಲ್ಲೇ ನಿಮ್ಮ ಬುಡ ಗಟ್ಟಿ ಇಲ್ಲ; ಇನ್ನು ನಮ್ಮ ದೇಶದ ಅಧಿಕಾರ ಬದಲಾಯಿಸ್ತೀರಾ?: ಟ್ರಂಪ್ ಬಗ್ಗೆ ಇರಾನ್ ಅಪಹಾಸ್ಯ!

SCROLL FOR NEXT