ಸಾಂದರ್ಭಿಕ ಚಿತ್ರ 
ದೇಶ

ಆಂಧ್ರ ಪ್ರದೇಶ: ಸಾನಿಟೈಸರ್ ಸೇವಿಸಿ ತಾಯಿ, ಮಗ ಸಾವು

ಕುಡಿಯಲು ಮದ್ಯ ಸಿಗಲಿಲ್ಲ ಎಂಬ ಕಾರಣಕ್ಕೆ ಸಾನಿಟೈಸರ್ ಕುಡಿದು 24 ವರ್ಷದ ಯುವಕ ಹಾಗೂ 52 ವರ್ಷದ ಆತನ ತಾಯಿ ಇಬ್ಬರು ಮೃತಪಟ್ಟಿರುವ ಆಘಾತಕಾರಿ ಘಟನೆ ಆಂಧ್ರ ಪ್ರದೇಶದ ಕಡಪ ಜಿಲ್ಲೆಯಲ್ಲಿ ನಡೆದಿದೆ.

ಕಡಪ: ಕುಡಿಯಲು ಮದ್ಯ ಸಿಗಲಿಲ್ಲ ಎಂಬ ಕಾರಣಕ್ಕೆ ಸಾನಿಟೈಸರ್ ಕುಡಿದು 24 ವರ್ಷದ ಯುವಕ ಹಾಗೂ 52 ವರ್ಷದ ಆತನ ತಾಯಿ ಇಬ್ಬರು ಮೃತಪಟ್ಟಿರುವ ಆಘಾತಕಾರಿ ಘಟನೆ ಆಂಧ್ರ ಪ್ರದೇಶದ ಕಡಪ ಜಿಲ್ಲೆಯಲ್ಲಿ ನಡೆದಿದೆ.

ಕಡಪಾ ಜಿಲ್ಲೆಯ ಚೆನ್ನೂರ್ ಮಂಡಲದ ಯಲ್ಲಮ್ಮ ಗುಡಿ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಮೃತ ಶ್ರೀರಾಮ್ ನಾಯಕ್ ಮತ್ತು ಆತನ ತಾಯಿ ವಿಜಯಲಕ್ಷ್ಮಿ ಕಟ್ಟಡ ಕಾರ್ಮಿಕರಾಗಿದ್ದು, ಮದ್ಯ ಕುಡಿಯುತ್ತಿದ್ದರು. ಅದರಂತೆ ಭಾನುವಾರ ಸಂಜೆ ಕುಡಿಯಲು ಮದ್ಯ ಸಿಗದಿದ್ದಾಗ ಸಾನಿಟೈಸರ್ ಕುಡಿದಿದ್ದಾರೆ ಎಂದು ಚೆನ್ನೂರ್ ಪೊಲೀಸರು ತಿಳಿಸಿದ್ದಾರೆ.

ಸಾನಿಟೈಸರ್ ನಲ್ಲೂ ಆಲ್ಕೋಹಾಲ್ ಇರುತ್ತೆ. ಅದನ್ನು ಕುಡಿದರೂ ಕಿಕ್ ಏರುತ್ತೆ ಎಂದು ಯಾರೋ ಹೇಳಿದ್ದಾರೆ. ಹೀಗಾಗಿ ತಾಯಿ, ಮಗ ಇಬ್ಬರೂ ಸಾನಿಟೈಸರ್ ಸೇವಿಸಿದ್ದಾರೆ. ಬಳಿಕ ಇಬ್ಬರೂ ಪ್ರಜ್ಞೆತಪ್ಪಿ ಬಿದಿದ್ದು, ಅವರನ್ನು ಗಮನಿಸಿದ ನೆರೆಹೊರೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲಿಸರು ಕೂಡಲೇ ಇಬ್ಬರನ್ನು ಕಡಪ ರಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಗಿನ ಜಾವ ಇಬ್ಬರೂ ಮೃತಪಟ್ಟಿದ್ದಾರೆ.

ಸಾನಿಟೈಸರ್ ಹೆಚ್ಚಾಗಿ ಕುಡಿದಿರುವುದರಿಂದ ಇಬ್ಬರೂ ಮೃತಪಟ್ಟಿರುವ ಸಾಧ್ಯತೆ ಇದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT