ಆದೇಶ್ ಕುಮಾರ್ ಗುಪ್ತಾ 
ದೇಶ

ದೆಹಲಿ ಬಿಜೆಪಿ ಅಧ್ಯಕ್ಷರಾಗಿ ಅದೇಶ್ ಕುಮಾರ್ ಗುಪ್ತಾ ನೇಮಕ

ದೆಹಲಿ ಬಿಜೆಪಿ ಘಟಕದ ನೂತನ ಅಧ್ಯಕ್ಷರಾಗಿ ಅದೇಶ್ ಕುಮಾರ್ ಗುಪ್ತಾ ಅವರನ್ನು ಹಾಗೂ ಚತ್ತೀಸ್‌ಗಢ ಬಿಜೆಪಿ ರಾಜ್ಯ ಅಧ್ಯಕ್ಷರನ್ನಾಗಿ ಕೇಂದ್ರ ಮಾಜಿ ಕೇಂದ್ರ ಸಚಿವ ವಿಷ್ಣು ದಿಯೋ ಸಾಯ್‍ ಅವರನ್ನುನೇಮಕ ಮಾಡಲಾಗಿದೆ.

ನವದೆಹಲಿ: ದೆಹಲಿ ಬಿಜೆಪಿ ಘಟಕದ ನೂತನ ಅಧ್ಯಕ್ಷರಾಗಿ ಅದೇಶ್ ಕುಮಾರ್ ಗುಪ್ತಾ ಅವರನ್ನು ಹಾಗೂ ಚತ್ತೀಸ್‌ಗಢ ಬಿಜೆಪಿ ರಾಜ್ಯ ಅಧ್ಯಕ್ಷರನ್ನಾಗಿ ಕೇಂದ್ರ ಮಾಜಿ ಕೇಂದ್ರ ಸಚಿವ ವಿಷ್ಣು ದಿಯೋ ಸಾಯ್‍ ಅವರನ್ನುನೇಮಕ ಮಾಡಲಾಗಿದೆ.

ಪಕ್ಷದ ಅಧ್ಯಕ್ಷ ಜೆ ಪಿ ನಡ್ಡಾ ಮಂಗಳವಾರ ಈ ಎರಡು ನೇಮಕಗಳನ್ನು ಮಾಡಿ ಆದೇಶಿಸಿದ್ದಾರೆ.

ದೆಹಲಿ ಘಟಕದ ಅಧ್ಯಕ್ಷ ಸ್ಥಾನಕ್ಕೆ ನಟ ಮತ್ತು ಶಾಸಕ ಮನೋಜ್ ತಿವಾರಿ ಅವರ ಬದಲಿಗೆ ಉತ್ತರ ದೆಹಲಿ ಮಹಾನಗರ ಪಾಲಿಕೆಯ ಮಾಜಿ ಮೇಯರ್ ಗುಪ್ತಾ ನೇಮಕಗೊಂಡಿದ್ದಾರೆ. 

ಮಣಿಪುರ ಬಿಜೆಪಿಯ ರಾಜ್ಯ ಅಧ್ಯಕ್ಷರಾಗಿ ಪ್ರೊ. ಎಸ್.ಟಿಕೇಂದ್ರ ಸಿಂಗ್‍ ಅವರನ್ನು ನಡ್ಡಾ ನೇಮಕ ಮಾಡಿದ್ದಾರೆ. 

ಚತ್ತೀಸ್‍ ಗಢ ಬಿಜೆಪಿ ಅಧ್ಯಕ್ಷರಾಗಿ ನೇಮಕಗೊಂಡಿರುವ ವಿಷ್ಣು ದಿಯೋ ಸಾಯ್‍ ಅವರು 16ನೇ ಲೋಕಸಭೆಯಲ್ಲಿ ರಾಯಗಢ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸಿದ್ದರು. .ಈ ನೇಮಕಗಳು ತಕ್ಷಣದಿಂದ ಜಾರಿಗೆ ಬರಲಿವೆ ಎಂದು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಹೇಳಿದ್ದಾರೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!

Uorfi Javed: ಮದ್ವೆ ಆಗ್ತೀನೋ ಇಲ್ಲವೋ ಗೊತ್ತಿಲ್ಲ, ಆದ್ರೆ ತಾಯಿ ಆಗ್ತೀನಿ; ಸೀಕ್ರೆಟ್‌ ರಿವೀಲ್ ಮಾಡಿದ ಉರ್ಫಿ ಜಾವೇದ್

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ