ತೆಲಂಗಾಣದ ಸಿಂಗರೇನಿ ಕಲ್ಲಿದ್ದಲು ಗಣಿಯಲ್ಲಿ ಭಾರಿ ಸ್ಫೋಟ: ನಾಲ್ವರ ಸಾವು
ತೆಲಂಗಾಣದ ಸಿಂಗರೇನಿ ಕಲ್ಲಿದ್ದಲು ಗಣಿಯಲ್ಲಿ ಭಾರಿ ಸ್ಫೋಟ ಸಂಭವಿಸಿದೆ. ಸ್ಫೋಟದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ರಾಮಗುಂಡಂ ಬಳಿ ಇರುವ ಕಲ್ಲಿದ್ದಲು ಗಣಿಯಲ್ಲಿ ಸ್ಫೋಟ ಸಂಭವಿಸಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಹೈದರಾಬಾದ್: ತೆಲಂಗಾಣದ ಸಿಂಗರೇನಿ ಕಲ್ಲಿದ್ದಲು ಗಣಿಯಲ್ಲಿ ಭಾರಿ ಸ್ಫೋಟ ಸಂಭವಿಸಿದೆ. ಸ್ಫೋಟದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ರಾಮಗುಂಡಂ ಬಳಿ ಇರುವ ಕಲ್ಲಿದ್ದಲು ಗಣಿಯಲ್ಲಿ ಸ್ಫೋಟ ಸಂಭವಿಸಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಪೆದ್ದಪಳ್ಳಿಯಲ್ಲಿರುವ ಗಣಿ ಇದಾಗಿದೆ. ನಾಲ್ವರ ಶವವನ್ನು ಗಣಿಯಿಂದ ಹೊರಕ್ಕೆ ತೆಗೆಯಲಾಗಿದೆ. ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ.
ಮೃತರು ಬೇರೆ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಗಣಿಯಲ್ಲಿ ಸ್ಫೋಟಗೊಳಿಸುವುದಕ್ಕಾಗಿಯೇ ಅವರನ್ನು ಗುತ್ತಿಗೆ ಆಧಾರದಲ್ಲಿ ಕೆಲಸಕ್ಕೆ ತೆಗೆದುಕೊಂಡಿದ್ದರು. ಮೃತರ ದೇಹವನ್ನು ಹತ್ತಿರದ ಗೋದಾವರಿಖಿನಿ ಆಸ್ಪತ್ರೆಗೆ ಸಾಗಿಸಲಾಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.