ಆಗ್ನೇಯ ದೆಹಲಿಯ ತುಘಲಕಾಬಾದ್ ನಲ್ಲಿ ಬೆಂಕಿ ಅವಘಡ: 120 ಗುಡಿಸಲುಗಳು ಭಸ್ಮ
ಆಗ್ನೇಯ ದೆಹಲಿಯ ತುಘಲಕಾಬಾದ್ ಪ್ರದೇಶದಲ್ಲಿ ಬುಧವಾರ ನಸುಕಿನ ಜಾವ ಅಗ್ನಿ ದುರಂತ ಸಂಭವಿಸಿ 120ಕ್ಕೂ ಹೆಚ್ಚು ಗುಡಿಸಲುಗಳು ಭಸ್ಮವಾಗಿವೆ.
ನವದೆಹಲಿ: ಆಗ್ನೇಯ ದೆಹಲಿಯ ತುಘಲಕಾಬಾದ್ ಪ್ರದೇಶದಲ್ಲಿ ಬುಧವಾರ ನಸುಕಿನ ಜಾವ ಅಗ್ನಿ ದುರಂತ ಸಂಭವಿಸಿ 120ಕ್ಕೂ ಹೆಚ್ಚು ಗುಡಿಸಲುಗಳು ಭಸ್ಮವಾಗಿವೆ.
ತುಘಲಕಾಬಾದ್ ನ ವಾಲ್ಮೀಕಿ ಮೊಹಲ್ಲಾ ಪ್ರದೇಶದಲ್ಲಿ ಈ ದುರಂತ ಸಂಭವಿಸಿದ್ದು, ಅಗ್ನಿ ಹೊತ್ತಿ ಉರಿಯಲಾರಂಭಿಸಿದ ಕೂಡಲೇ ಮಧ್ಯರಾತ್ರಿ 1.30ರ ಹೊತ್ತಿಗೆ 22 ಅಗ್ನಿಶಾಮಕ ಎಂಜಿನ್ ಗಳು ಬಂದು ಬೆಂಕಿಯನ್ನು ನಂದಿಸಿದವು.
ಘಟನೆಯಲ್ಲಿ ಯಾವುದೇ ಸಾವು-ನೋವುಗಳಾಗಿಲ್ಲ. ಕೆಲ ದಿನಗಳ ಹಿಂದೆ ಕೂಡ ಇದೇ ಪ್ರದೇಶದಲ್ಲಿ ಬೆಂಕಿ ಹತ್ತಿ ಉರಿತು 250ಕ್ಕೂ ಹೆಚ್ಚು ಗುಡಿಸಲುಗಳು ಭಸ್ಮವಾಗಿದ್ದವು.