ಸ್ಮೃತಿ ಇರಾನಿ 
ದೇಶ

ವಿಶ್ವದರ್ಜೆಯ ಉತ್ಪನ್ನಗಳನ್ನು ತಯಾರಿಸುವ ಸಾಮರ್ಥ್ಯ ಭಾರತಕ್ಕಿದೆ: ಸ್ಮೃತಿ ಇರಾನಿ

ಸ್ವದೇಶಿ ಉತ್ಪನ್ನಗಳನ್ನು ಹೆಚ್ಚೆಚ್ಚು ಬಳಸಿ, ವಿಶ್ವದರ್ಜೆಯ ವಸ್ತುಗಳನ್ನು ಉತ್ಪಾದನೆ ಮಾಡಿ ಸ್ವಾವಲಂಬಿಗಳಾಗೋಣ ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡುವುದರ ಮಧ್ಯೆ ಅವರ ಸಂಪುಟ ಸಚಿವೆ ಕೇಂದ್ರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಸ್ಮೃತಿ ಇರಾನಿ ಕೂಡ ಅದೇ ರೀತಿಯ ಮಾತುಗಳನ್ನಾಡಿದ್ದಾರೆ.

ನವದೆಹಲಿ: ಸ್ವದೇಶಿ ಉತ್ಪನ್ನಗಳನ್ನು ಹೆಚ್ಚೆಚ್ಚು ಬಳಸಿ, ವಿಶ್ವದರ್ಜೆಯ ವಸ್ತುಗಳನ್ನು ಉತ್ಪಾದನೆ ಮಾಡಿ ಸ್ವಾವಲಂಬಿಗಳಾಗೋಣ ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡುವುದರ ಮಧ್ಯೆ ಅವರ ಸಂಪುಟ ಸಚಿವೆ ಕೇಂದ್ರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಸ್ಮೃತಿ ಇರಾನಿ ಕೂಡ ಅದೇ ರೀತಿಯ ಮಾತುಗಳನ್ನಾಡಿದ್ದಾರೆ. ಸ್ಪರ್ಧಾತ್ಮಕ ಬೆಲೆಯಲ್ಲಿ ವಿಶ್ವ ಗುಣಮಟ್ಟದ ಉತ್ಪನ್ನಗಳನ್ನು ತಯಾರಿಸುವ ಸಾಮರ್ಥ್ಯ ನಮಗಿದೆ ಎಂದು ಹೇಳಿದ್ದಾರೆ.

ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಯ ಸಂಪಾದಕೀಯ ನಿರ್ದೇಶಕ ಪ್ರಭು ಚಾವ್ಲಾ ಜೊತೆಗೆ ಮಾತನಾಡಿದ ಅವರು, ಹಲವು ವಿಷಯಗಳನ್ನು ಹಂಚಿಕೊಂಡಿದ್ದಾರೆ. ಅವರ ಸಂದರ್ಶನದ ಆಯ್ದ ಭಾಗ ಇಲ್ಲಿದೆ:

ಕೊರೋನಾ ಲಾಕ್ ಡೌನ್ ಸಮಯದಲ್ಲಿ ಸಮಾಜದ ವಿವಿಧ ವರ್ಗಗಳ ಮಹಿಳೆಯರು ತೀವ್ರ ಸಂಕಷ್ಟ ಅನುಭವಿಸಿದ್ದಾರೆ. ಕಳೆದ ಎರಡು ತಿಂಗಳಲ್ಲಿ ನೀವು ಏನೇನು ಕ್ರಮ ಕೈಗೊಂಡಿದ್ದೀರಿ?ಕೌಟುಂಬಿಕ ದೌರ್ಜನ್ಯ ಮಹಿಳೆಯರು ಅನುಭವಿಸುತ್ತಿರುವ ಕಷ್ಟಗಳಲ್ಲೊಂದು, ಅದಕ್ಕೆ ಸರ್ಕಾರದ ಕ್ರಮಗಳೇನು?
-ದೇಶದಲ್ಲಿ ಲಾಕ್ ಡೌನ್ ಇದ್ದರೂ ಕೂಡ ನಮ್ಮ ಇಲಾಖೆಯಿಂದ ಮಹಿಳೆಯರಿಗೆ ಸಹಾಯ ಮಾಡುವ ಒಂದು ಬಿಕ್ಕಟ್ಟು ನಿರ್ವಹಣಾ ಕೇಂದ್ರವಿದ್ದು, ಅದು ಕಾರ್ಯನಿರ್ವಹಿಸುತ್ತಲೇ ಇದೆ. ನಾವು ಪ್ರತಿ ಕೇಂದ್ರವನ್ನು ತಲುಪಿದೆವು. ದೇಶಾದ್ಯಂತ ಇರುವ ಮಹಿಳೆಯರು ಮತ್ತು ಮಕ್ಕಳ ಆರೋಗ್ಯ ಕೇಂದ್ರಗಳಿಗೆ ತಲುಪಿ ಅವರ ಆರೈಕೆ ಮತ್ತು ಸುರಕ್ಷತೆಗೆ ಗಮನ ನೀಡಲಾಗಿದೆ. ಅಗತ್ಯ ಸಾಮಗ್ರಿಗಳು ಸಿಗುವಂತೆ ಸಹ ನೋಡಿಕೊಳ್ಳಲಾಗುತ್ತಿದೆ.

ಅಂಗನವಾಡಿಗಳಲ್ಲಿ ಕಾರ್ಯಚಟುವಟಿಕೆಗಳು ನಿರಂತರವಾಗಿ ಸಾಗುತ್ತಿರುತ್ತದೆ. ಅಂಗನವಾಡಿ ಲಾಕ್ ಡೌನ್ ಸಮಯದಲ್ಲಿ ಮುಚ್ಚಿದ್ದಾಗಲೂ ಕೂಡ ಮನೆಗೆ ರೇಷನ್ ಗಳನ್ನು ತಲುಪಿಸಲಾಗುತ್ತಿತ್ತು. ಲಾಕ್ ಡೌನ್ ಸಮಯದಲ್ಲಿ 9 ಕೋಟಿ ಮಹಿಳೆಯರ ಮನೆಬಾಗಿಲಿಗೆ ರೇಷನ್ ತಲುಪಿಸಲಾಗಿದೆ.

ಅಂಗನವಾಡಿ ಆಶಾ ಕಾರ್ಯಕರ್ತೆಯರ ಮೇಲೆ ಹಲ್ಲೆ ಪ್ರಕರಣ ಬಗ್ಗೆ ಏನು ಹೇಳುತ್ತೀರಿ?
-ಕಾನೂನು, ಸುವ್ಯವಸ್ಥೆ ಮುರಿದರೆ ಸರ್ಕಾರ ಖಂಡಿತವಾಗಿಯೂ ಸಹಿಸುವುದಿಲ್ಲ. ಕೊರೋನಾ ವಾರಿಯರ್ಸ್ ಗಳ ರಕ್ಷಣೆಗೆ ಸಚಿವ ಸಂಪುಟ ತೀರ್ಮಾನಗಳನ್ನು ತೆಗೆದುಕೊಂಡಿದೆ. ಸಾರ್ವಜನಿಕರು ಕೂಡ ಹಲ್ಲೆಗಳನ್ನು ಖಂಡಿಸಿದ್ದಾರೆ.

ಮಕ್ಕಳು ಮತ್ತು ಮಹಿಳೆಯರ ಮೇಲಿನ ದೌರ್ಜನ್ಯ ಹೆಚ್ಚಾಗುತ್ತಿದೆಯಲ್ಲವೇ?
-ಕೋವಿಡ್-19 ಬಂದು ಲಾಕ್ ಡೌನ್ ಹೇರಿಕೆಯಾದಾಗ ಶೇಕಡಾ 80ರಷ್ಟು ಮಹಿಳೆಯರ ಮೇಲೆ ದೌರ್ಜನ್ಯ, ಕೌಟುಂಬಿಕ ಹಲ್ಲೆಗಳು ಜಾಸ್ತಿಯಾಗುತ್ತಿವೆ ಎಂಬ ವರದಿಗಳು ಅಂತಾರಾಷ್ಟ್ರೀಯ ಸಂಸ್ಥೆಗಳಿಂದ ಬಂದವು. ಈ ಬಗ್ಗೆ ಸರಿಯಾದ ನಿರ್ದಿಷ್ಟ ಅಂಕಿಅಂಶ ಕೇಳಿದಾಗ ಇದು ಊಹೆ ಎಂಬುದು ಗೊತ್ತಾಯಿತು. ನಾವು ಪತ್ತೆಹಚ್ಚಿ ಕೇಳಿದಾಗ ಕೌಟುಂಬಿಕ ದೌರ್ಜನ್ಯ ಕಡಿಮೆಯಾಗಿದೆ ಎಂದು ಗೊತ್ತಾಯಿತು. ಈ ಬಗ್ಗೆ ಸಾಮಾನ್ಯ ಹೇಳಿಕೆ ನೀಡುವುದು ತಪ್ಪಾಗುತ್ತದೆ.

ಆತ್ಮನಿರ್ಭಾರ್ ಭಾರತ್ ನಲ್ಲಿ ನಿಮ್ಮ ಸಾಧನೆಯೇನು?

-ನಾವು 580 ರಫ್ತು-ಆಮದುಗಳ ಬಗ್ಗೆ ಅಧ್ಯಯನ ಮಾಡಿ ಕಂದಾಯ ಇಲಾಖೆಗೆ ಎಚ್ಚರಿಕೆ ನೀಡಿ ಆಮದು ಸುಂಕವನ್ನು ಹೆಚ್ಚಿಸುವಂತೆ ಹೇಳಿದ್ದೇವೆ. ಕೋವಿಡ್-19 ಹಿನ್ನೆಲೆಯಲ್ಲಿ ಸ್ಥಳೀಯರ ಉದ್ಯಮವನ್ನು ಹೇಗೆ ವಿಸ್ತರಿಸಬಹುದು ಎಂದು ನೋಡುತ್ತಿದ್ದೇವೆ. ಸ್ವಸಹಾಯ ಗುಂಪುಗಳೊಂದಿಗೆ ಸಮನ್ವಯ ಸಾಧಿಸಿ ಮುಖಗವಸುಗಳನ್ನು ತಯಾರಿಸುತ್ತೇವೆ. ಟೆಕ್ಸ್ಟೈಲ್ ಸಚಿವಾಲಯದ ಬಗ್ಗೆ ಹಣಕಾಸು ಇಲಾಖೆಯೊಂದಿಗೆ ಚರ್ಚೆ ನಡೆಸುತ್ತಿದ್ದೇನೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್