ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ರಜೌರಿಯಲ್ಲಿ ಗುಂಡಿನ ಚಕಮಕಿ: ಓರ್ವ ಭಯೋತ್ಪಾದಕನನ್ನು ಹೊಡೆದುರುಳಿಸಿದ ಭಾರತೀಯ ಸೇನೆ

ಜಮ್ಮು ಮತ್ತು ಕಾಶ್ಮೀರದ ಗಡಿ ಜಿಲ್ಲೆಯಾದ ರಜೌರಿಯ ಕಲಕೋಟೆ ಪ್ರದೇಶದಲ್ಲಿ ಗುರುವಾರ ನಡೆದ ಗುಂಡಿನ ಚಕಮಕಿಯಲ್ಲಿ ಭದ್ರತಾ ಪಡೆಗಳು ಓರ್ವ ಭಯೋತ್ಪಾದಕನನ್ನು ಹತ್ಯೆ ಮಾಡಿವೆ.

ಭಾರತೀಯ ಸೇನೆ
Vishwanath S
Updated On : 4 Jun 2020, 10:47 pm

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಗಡಿ ಜಿಲ್ಲೆಯಾದ ರಜೌರಿಯ ಕಲಕೋಟೆ ಪ್ರದೇಶದಲ್ಲಿ ಗುರುವಾರ ನಡೆದ ಗುಂಡಿನ ಚಕಮಕಿಯಲ್ಲಿ ಭದ್ರತಾ ಪಡೆಗಳು ಓರ್ವ ಭಯೋತ್ಪಾದಕನನ್ನು ಹತ್ಯೆ ಮಾಡಿವೆ.

ಕಲಕೋಟೆಯ ಪಂಜಾ ಮೆಹಾರಿ ಗ್ರಾಮದಲ್ಲಿ ಮುಂಜಾನೆ ಸೇನೆ, ಜಮ್ಮು-ಕಾಶ್ಮೀರ ಪೊಲೀಸ್ ಮತ್ತು ಅರೆಸೇನಾ ಪಡೆಗಳು ಜಂಟಿಯಾಗಿ ಶೋಧ ಕಾರ್ಯಾಚರಣೆ ಆರಂಭಿಸಿದ್ದವು ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಶೋಧ ಕಾರ್ಯಾಚರಣೆ ವೇಳೆ ಜಂಟಿ ತಂಡಕ್ಕೆ ಮೂರ್ನಾಲ್ಕು ಭಯೋತ್ಪಾದಕರ ಗುಂಪು ಎದುರಾಗಿದ್ದು, ಈ ವೇಳೆ ಪರಸ್ಪರ ಗುಂಡಿನ ಚಕಮಕಿ ನಡೆದಿದೆ ಎಂದು ಮೂಲಗಳು ತಿಳಿಸಿವೆ.

Advertisement

Advertisement

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement