ದೇಶ

ಮಹಾತ್ಮಾ ಗಾಂಧಿ ಪ್ರತಿಮೆ ಅಪವಿತ್ರ: ಕ್ಷಮೆಯಾಚಿಸಿದ ಅಮೆರಿಕ

Lingaraj Badiger

ನವದೆಹಲಿ: ಅಮೆರಿಕದ ವಾಷಿಂಗ್ಟನ್ ನಲ್ಲಿನ ಭಾರತೀಯ ರಾಯಭಾರಿ ಕಚೇರಿ ಎದುರು ಇರುವ ರಾಷ್ಟ್ರಪಿತ ಮಹಾತ್ಮಾ ಗಾಂಧಿ ಅವರ ಪ್ರತಿಮೆಯನ್ನು ಅಪವಿತ್ರಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತಕ್ಕೆ ಅಮೆರಿಕದ ರಾಯಭಾರಿ ಕೆನ್ ಜೂಸ್ಟರ್ ಗುರುವಾರ ಕ್ಷಮೆಯಾಚಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, "ವಾಷಿಂಗ್ಟನ್ ಡಿ.ಸಿಯಲ್ಲಿ ಗಾಂಧಿ ಪ್ರತಿಮೆಯನ್ನು ಅಪವಿತ್ರಗಳಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಷಮೆಯಾಚಿಸುತ್ತೇನೆ. ನಾವು ಯಾವುದೇ ಬಗೆಯ ಪೂರ್ವಾಗ್ರಹ ಭಾವನೆ ಮತ್ತು ತಾರತಮ್ಯದ ಭಾವನೆಗೆ ವಿರುದ್ಧವಾಗಿದ್ದೇವೆ" ಎಂದಿದ್ದಾರೆ.

ವರದಿಗಳ ಪ್ರಕಾರ, ಕಳೆದೆರಡು ದಿನಗಳಲ್ಲಿ ಅಮೆರಿಕದಲ್ಲಿ ನಡೆದ ಗಲಭೆಯಲ್ಲಿ ಗಾಂಧಿ ಪ್ರತಿಮೆಯನ್ನು ಅಪವಿತ್ರಗೊಳಿಸಲಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಮೇ 25ರಂದು ಅಮೆರಿಕದ ಜಾರ್ಜ್ ಫ್ಲಾಯ್ಡ್ ಎಂಬ ವ್ಯಕ್ತಿ ಪೊಲೀಸ್ ಕಸ್ಟಡಿಯಲ್ಲಿ ಮೃತಪಟ್ಟ ಹಿನ್ನೆಲೆಯಲ್ಲಿ ಗಲಭೆ ಬುಗಿಲೆದ್ದಿತ್ತು.

SCROLL FOR NEXT