ಒಂದೇ ದಿನ 9 ಸಾವಿರಕ್ಕೂ ಹೆಚ್ಚು ಕೊರೋನಾ ಸೋಂಕು ಪತ್ತೆ, ಇಟಲಿ ಹಿಂದಿಕ್ಕಿ 6ನೇ ಸ್ಥಾನಕ್ಕೆ ಜಿಗಿದ ಭಾರತ!
ದಿನದಿಂದ ದಿನಕ್ಕೆ ಭಾರತದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು ಇಟಲಿಯನ್ನು ಹಿಂದಿಕ್ಕಿದ ಭಾರತ ಇದೀಗ 6ನೇ ಸ್ಥಾನಕ್ಕೆ ಜಿಗಿದಿದೆ.
ನವದೆಹಲಿ: ದಿನದಿಂದ ದಿನಕ್ಕೆ ಭಾರತದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು ಇಟಲಿಯನ್ನು ಹಿಂದಿಕ್ಕಿದ ಭಾರತ ಇದೀಗ 6ನೇ ಸ್ಥಾನಕ್ಕೆ ಜಿಗಿದಿದೆ.
ಭಾರತದಲ್ಲಿ ಇಂದು ಒಂದೇ ದಿನ 9 ಸಾವಿರಕ್ಕೂ ಹೆಚ್ಚು ಮಂದಿ ಸೋಂಕಿಗೆ ತುತ್ತಾಗಿದ್ದಾರೆ. ಈ ಮೂಲಕ ಸೋಂಕಿತರ ಸಂಖ್ಯೆ 2.36 ಲಕ್ಷ ದಾಟಿದೆ. ಇನ್ನು ದೇಶದಲ್ಲಿ ಇಂದು 278 ಮಂದಿ ಮೃತಪಟ್ಟಿದ್ದು ಸಾವಿನ ಸಂಖ್ಯೆ 6,641ಕ್ಕೆ ಏರಿಕೆಯಾಗಿದೆ.
ಸೋಂಕಿತರ ಸಂಖ್ಯೆಯಲ್ಲಿ ಭಾರತ ಇಟಲಿಯನ್ನು ಹಿಂದಿಕ್ಕಿದೆ. ಇಟಲಿಯಲ್ಲಿ ಆರಂಭದಲ್ಲಿ ಮೃರಣಮೃದಂಗ ಮುಂದುವರೆದಿತ್ತು. ಇಲ್ಲಿಯವರೆಗೂ ಬರೋಬ್ಬರಿ 34 ಸಾವಿರ ಮಂದಿ ಸಾವಿಗೀಡಾಗಿದ್ದಾರೆ. ಇನ್ನು 2.34 ಲಕ್ಷ ಮಂದಿ ಸೋಂಕಿಗೆ ತುತ್ತಾಗಿದ್ದಾರೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.