ದೇಶ

ದೇಶದಲ್ಲಿ ಒಂದೇ ದಿನ 9,887 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆ, ಸೋಂಕಿತರ ಸಂಖ್ಯೆ 2.36 ಲಕ್ಷಕ್ಕೆ ಏರಿಕೆ

Manjula VN

ನವದೆಹಲಿ: ದೇಶದಲ್ಲಿ ಕೊರೋನಾ ಸ್ಫೋಟಗೊಂಡಿದ್ದು, ಕೇವಲ ಒಂದೇ ದಿನ ಬರೋಬ್ಬರಿ 9,887 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ಭಾರತದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 2.36 ಲಕ್ಷಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಶುಕ್ರವಾರ ಮಾಹಿತಿ ನೀಡಿದೆ. 

ಲಾಕ್'ಡೌನ್ ಸಡಿಲಗೊಂಡು ಜನಜೀವನ ಬಹುತೇಕ ಸಹಜಸ್ಥಿತಿಯತ್ತ ಮರಳುತ್ತಿರುವಾಗಲೇ ಕೊರೋನಾ ಅಬ್ಬರ ಕೂಡ ದೇಶದಲ್ಲಿ ತೀವ್ರಗೊಳ್ಳುತ್ತಿದೆ. ಒಂದೇ ದಿನ 9,887 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಒಟ್ಟು ಸೋಂಕಿತರ ಸಂಖ್ಯೆ 2,36,657ಕ್ಕೆ ಏರಿಕೆಯಾಗಿದೆ. ಅಲ್ಲದೆ, ಕೇವಲ 24 ಗಂಟೆಗಳಲ್ಲಿ 294 ಮಂದಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ಕೂಡ 6642ಕ್ಕೆ ತಲುಪಿದೆ. 

ಒಂದೇ ದಿನ ಇಷ್ಟೊಂದು ಸಂಖ್ಯೆಯ ಸೋಂಕು ಹಾಗೂ ಸಾವು ವರದಿಯಾಗಿರುವುದು ಇದೇ ಮೊದಲಾಗಿದ್ದು, ಹೀಗಾಗಿ ಕೊರೋನಾ ತನ್ನ ಗರಿಷ್ಟ ಮಟ್ಟದತ್ತ ಭಾರತದಲ್ಲಿ ದಾಪುಗಾಲಿಡುತ್ತಿದೆಯೇ ಎಂಬ ಅನುಮಾನಗಳು ಮೂಡತೊಡಗಿವೆ. 

2,36,657 ಮಂದಿ ಸೋಂಕಿತರ ಪೈಕಿ ಈವರೆಗೆ 1,14, 073 ಮಂದಿ ಗುಣಮುಖರಾಗಿದ್ದು, ಪ್ರಸ್ತುತ ದೇಶದಲ್ಲಿ ಇನ್ನೂ 115942 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆಂದು ತಿಳಿದುಬಂದಿದೆ. 

SCROLL FOR NEXT