ಸಾಂದರ್ಭಿಕ ಚಿತ್ರ 
ದೇಶ

ಕೋವಿಡ್-19 ಐಸಿಯುಗೆ ಗರಿಷ್ಠ 15 ಸಾವಿರ ರೂ.: ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ದರ ನಿಗದಿಪಡಿಸಿದ ತಮಿಳುನಾಡು!

ಕೋವಿಡ್- 19 ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗಳಲ್ಲಿನ ದರಗಳನ್ನು ತಮಿಳುನಾಡು ಸರ್ಕಾರ ಶನಿವಾರ ನಿಗದಿಪಡಿಸಿದೆ. ಸರ್ಕಾರದ ಆದೇಶದ ಪ್ರಕಾರ ಸಾಮಾನ್ಯ ವಾರ್ಡ್ ಗಳಿಗಾಗಿ ಗ್ರೇಡ್ 1 ಮತ್ತು ಗ್ರೇಡ್ 2 ಆಸ್ಪತ್ರೆಗಳು ಗರಿಷ್ಠ 7. 500  ಮತ್ತು ಗ್ರೇಡ್ 3 ಮತ್ತು 4 ಆಸ್ಪತ್ರೆಗಳು 5 ಸಾವಿರ ರೂಪಾಯಿ ದರ ವಿಧಿಸಬಹುದಾಗಿದೆ.

ಚೆನ್ನೈ: ಕೋವಿಡ್- 19 ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗಳಲ್ಲಿನ ದರಗಳನ್ನು ತಮಿಳುನಾಡು ಸರ್ಕಾರ ಶನಿವಾರ ನಿಗದಿಪಡಿಸಿದೆ. ಸರ್ಕಾರದ ಆದೇಶದ ಪ್ರಕಾರ ಸಾಮಾನ್ಯ ವಾರ್ಡ್ ಗಳಿಗಾಗಿ ಗ್ರೇಡ್ 1 ಮತ್ತು ಗ್ರೇಡ್ 2 ಆಸ್ಪತ್ರೆಗಳು ಗರಿಷ್ಠ 7. 500  ಮತ್ತು ಗ್ರೇಡ್ 3 ಮತ್ತು 4 ಆಸ್ಪತ್ರೆಗಳು 5 ಸಾವಿರ ರೂಪಾಯಿ ದರ ವಿಧಿಸಬಹುದಾಗಿದೆ.

ಐಸಿಯುನಲ್ಲಿ ದಾಖಲಾಗಲು ಗ್ರೇಡ್ 1,2,3,4 ಸೇರಿದಂತೆ ಎಲ್ಲಾ ಆಸ್ಪತ್ರೆಗಳಲ್ಲಿ ಗರಿಷ್ಠ 15 ಸಾವಿರ ರೂ. ನಿಗದಿಪಡಿಸಲಾಗಿದೆ. ಇದಕ್ಕಿಂತಲೂ ಹೆಚ್ಚಿನ ದರವನ್ನು ವಿಧಿಸದಂತೆ ಖಾಸಗಿ ಆಸ್ಪತ್ರೆಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಖಾಸಗಿ ಆಸ್ಪತ್ರೆಗಳಿಂದ ರೋಗಿಗಳ ಪಲಾಯನ ಕುರಿತಂತೆ ಮಾಧ್ಯಮಗಳ ವರದಿ ಹಾಗೂ ಭಾರತೀಯ ವೈದ್ಯಕೀಯ ಅಸೋಸಿಯೇಷನ್ ರಾಜ್ಯ ಶಾಖೆಯ ಮನವಿ ಆಧಾರದ ಮೇಲೆ ಈ ನಿರ್ಧಾರ ಕೈಗೊಳ್ಳಲಾಗಿದೆ. 

ಸಾಂಕ್ರಾಮಿಕ ರೋಗದ ಸಂದರ್ಭದಲ್ಲಿ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳು ಜೊತೆಯಾಗಿ ಕಾರ್ಯನಿರ್ವಹಿಸುವಂತೆ ಸರ್ಕಾರದ ಆದೇಶದಲ್ಲಿ ತಿಳಿಸಲಾಗಿದೆ. ಈ ಹಿಂದೆ, ಖಾಸಗಿ ಆಸ್ಪತ್ರೆಗಳಲ್ಲಿನ ಕೋವಿಡ್-19 ರೋಗಿಗಳ ಚಿಕಿತ್ಸೆ ಮುಖ್ಯಮಂತ್ರಿಗಳ ಆರೋಗ್ಯ ವಿಮಾ ಯೋಜನೆಯಡಿಯಲ್ಲಿತ್ತು. 

ತಮಿಳುನಾಡು ರಾಜ್ಯದಾದ್ಯಂತ ಸರ್ಕಾರಿ ಆಸ್ಪತ್ರೆಗಳಲ್ಲಿ ಕೋವಿಡ್-19 ರೋಗಿಗಳಿಗೆ ಉಚಿತವಾಗಿ ಚಿಕಿತ್ಸೆ ನೀಡಲಾಗುತ್ತಿದೆ. ಅಲ್ಲದೇ ವಿಶೇಷವಾಗಿ ಕೋವಿಡ್-19 ಕೇರ್ ಸೆಂಟರ್ ಗಳನ್ನು ಸ್ಥಾಪಿಸಲಾಗಿದೆ. 

ಮುಖ್ಯಮಂತ್ರಿಗಳ ಆರೋಗ್ಯ ವಿಮಾ ಯೋಜನೆಯಡಿ ಈಗಾಗಲೇ ನೋಂದಾಯಿಸಿರುವ ಮತ್ತು ಅರ್ಹ ಕುಟುಂಬಗಳಿಗೂ ಈಗ ಘೋಷಿಸಲಾಗಿರುವಂತೆ ಚಿಕಿತ್ಸೆ ದೊರೆಯಲಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ತುಳು ಭಾಷೆಗೆ ಸಿಕ್ತು ಅಧಿಕೃತ ಸ್ಥಾನಮಾನ: ಕರ್ನಾಟಕದ 2ನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಘೋಷಣೆ, ಕರಾವಳಿಗೆ ಹೊಸ ಟೂರಿಸಂ ನೀತಿ!

‘ಪ್ರಜಾಪ್ರಭುತ್ವದ ಕರಾಳ ದಿನ’, 'ತಲೆ ಬಾಗಲ್ಲ, ಯಾರಿಗೂ ಶರಣಾಗಲ್ಲ'; ಮಮತಾ ಬ್ಯಾನರ್ಜಿ ಕೆಂಡಾಮಂಡಲ

ಪ್ರಧಾನಿ ಮೋದಿಗೆ UAE ಅಧ್ಯಕ್ಷ ನಹ್ಯಾನ್ ದೂರವಾಣಿ ಕರೆ: ಪಶ್ಚಿಮ ಏಷ್ಯಾದಲ್ಲಿನ ಬೆಳವಣಿಗೆ, ಕಾರ್ಯತಂತ್ರದ ಪಾಲುದಾರಿಕೆ ಕುರಿತು ಚರ್ಚೆ!

ದೀದಿ ಬಣಕ್ಕೆ ಫುಟ್‌ಬಾಲ್, ಬಂಡಾಯಗಾರರಿಗೆ ಲಕೋಟೆ: ಟಿಎಂಸಿ ಚಿಹ್ನೆ ಫ್ರೀಜ್ ಬೆನ್ನಲ್ಲೇ ಚುನಾವಣಾ ಆಯೋಗದಿಂದ ಮಹತ್ವದ ಆದೇಶ!

ಬಾಲಿವುಡ್ ನಟಿ ಕತ್ರೀನಾ ಕೈಫ್ ಬಾಡಿ ಶೇಮಿಂಗ್: ಟ್ರೋಲ್ ಮಾಡುವವರ ವಿರುದ್ಧ ನಟಿ ರಮ್ಯಾ ಕಿಡಿ!