ನವಜೋತ್ ಸಿಧು 
ದೇಶ

ಕಾಂಗ್ರೆಸ್ ನಲ್ಲಿ ನಿರ್ಲಕ್ಷ್ಯ: ನವಜೋತ್ ಸಿಧು ಎಎಪಿ ಸೇರ್ಪಡೆಗೆ ಪ್ರಶಾಂತ್ ಕಿಶೋರ್ ಮಧ್ಯಸ್ಥಿಕೆ? 

ಮಾಜಿ ಕ್ರಿಕೆಟಿಗ ಹಾಗೂ ರಾಜಕಾರಣಿ ನವಜೋತ್ ಸಿಂಗ್  ಸಿಧು ಅರವಿಂದ್ ಕೇಜ್ರಿವಾಲ್ ಅವರೊಂದಿಗೆ ಮಾತುಕತೆ ನಡೆಸಿದ್ದು, ಆಮ್ ಆದ್ಮಿ ಪಕ್ಷ ಸೇರಲಿದ್ದಾರೆ ಎಂಬಂತಹ ಮಾತುಗಳು ಹರಿದಾಡುತ್ತಿವೆ.

ನವದೆಹಲಿ: ಮಾಜಿ ಕ್ರಿಕೆಟಿಗ ಹಾಗೂ ರಾಜಕಾರಣಿ ನವಜೋತ್ ಸಿಂಗ್  ಸಿಧು ಅರವಿಂದ್ ಕೇಜ್ರಿವಾಲ್ ಅವರೊಂದಿಗೆ ಮಾತುಕತೆ ನಡೆಸಿದ್ದು, ಆಮ್ ಆದ್ಮಿ ಪಕ್ಷ ಸೇರಲಿದ್ದಾರೆ ಎಂಬಂತಹ ಮಾತುಗಳು ಹರಿದಾಡುತ್ತಿವೆ.

ಆದರೆ, ಇಂತಹ ಹೇಳಿಕೆಗಳನ್ನು ಅಲ್ಲಗಳೆದಿರುವ ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್,  ಅವರೊಡನೆ ಯಾವುದೇ ಭಿನ್ನಾಭಿಪ್ರಾಯವಿಲ್ಲ, ಪಕ್ಷದಲ್ಲಿಯೇ ಮುಂದುವರೆಯಲಿದ್ದಾರೆ ಎಂದು ತಿಳಿಸಿದ್ದಾರೆ.

ನವಜೋತ್ ಸಿಧು, ಅರವಿಂದ್ ಕೇಜ್ರಿವಾಲ್ ಹಾಗೂ ರಾಜಕೀಯ ತಜ್ಞ ಪ್ರಶಾಂತ್ ಕಿಶೋರ್ ಮಾತುಕತೆ ನಡೆಸಿದ್ದಾರೆ ಎಂದು ನಂಬಲಾಗಿರುವ ವ್ಯಕ್ತಿಯೊಂದಿಗೆ ಇದನ್ನು ಖಚಿತಪಡಿಸಿಕೊಂಡಿರುವುದಾಗಿ ಅಮರೀಂದರ್ ಸಿಂಗ್ ತಿಳಿಸಿದ್ದಾರೆ. 

ನವಜೋತ್ ಸಿಧು ಪಕ್ಷದ ಒಂದು  ಭಾಗವಾಗಿದ್ದಾರೆ. ಸಿಧು ಅವರನ್ನು ಎಎಪಿಗೆ ಸೇರುವಂತೆ ಪ್ರಶಾಂತ್ ಕಿಶೋರ್ ಪ್ರಚೋದಿಸಿದ್ದಾರೆ ಎಂಬುದು ನಿಜವಲ್ಲ, ಪ್ರಶಾಂತ್ ಕಿಶೋರ್ ಅವರೇ ಇದನ್ನು ತಮಗೆ ತಿಳಿಸಿದ್ದಾರೆ ಎಂದು ಪಂಜಾಬ್ ಮುಖ್ಯಮಂತ್ರಿ ತಿಳಿಸಿದ್ದಾರೆ. 

2017ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವುನಲ್ಲಿ ಕಿಶೋರ್ ಪ್ರಮುಖ ಪಾತ್ರ ನಿರ್ವಹಿಸಿದ್ದಾರೆ. ನಾವಿಬ್ಬರು ಸ್ನೇಹಿತರೂ, ನಮ್ಮ ಶಾಸಕರು ಚುನಾವಣೆ ಕಾರ್ಯತಂತ್ರ ಕುರಿತಂತೆ ಅವರ ಬಳಿ ಸಲಹೆ ಪಡೆಯುತ್ತಾರೆ. ಸಂತೋಷದಿಂದ ಬಂದು ಸಹಾಯ ಮಾಡುವುದಾಗಿ ಕಿಶೋರ್ ಹೇಳಿದ್ದಾರೆ ಅಮರೀಂದರ್ ಸಿಂಗ್ ಹೇಳಿದ್ದಾರೆ. 

ಒಂದು ವರ್ಷದಿಂದಲೂ ಕಾಂಗ್ರೆಸ್ ಪಕ್ಷದ ಬಗ್ಗೆ ಅಸಮಾಧಾನಗೊಂಡಿರುವ ಸಿಧು, ಇತ್ತೀಚಿಗೆ ಕಾಂಗ್ರೆಸ್ ಚಟುವಟಿಕೆಗಳಲ್ಲಿ ಕಾಣಿಸಿಕೊಳ್ಳುತ್ತಿಲ್ಲ, ಎಎಪಿಯೊಂದಿಗೆ ಮಾತುಕತೆ ನಡೆಸಿದ್ದಾರೆ ಎಂಬಂತಹ ಊಹಾಪೋಹಗಳು ಹರಿದಾಡುತ್ತಿವೆ. ಸಿಧು ಎಎಪಿ ಸೇರುವಂತೆ ಪ್ರಶಾಂತ್ ಕಿಶೋರ್ ಪ್ರೇರೆಪಿಸಿದ್ದಾರೆ ಎಂಬಂತಹ ವರದಿಗಳು ತಿಳಿಸಿವೆ. ಮತ್ತೊಂದೆಡೆ ಸಿಧು ಎಎಪಿಗೆ ಬರುವುದಾದರೆ ಸ್ವಾಗತಿಸುವುದಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸುದ್ದಿಸಂಸ್ಥೆಯೊಂದಕ್ಕೆ ತಿಳಿಸಿದ್ದಾರೆ. 

2016ರಲ್ಲಿ ಬಿಜೆಪಿ ತೊರೆದು ಸಿಧು ಕಾಂಗ್ರೆಸ್ ಸೇರ್ಪಡೆಯಾಗಿದ್ದರು. ಆದರೆ, ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಹಾಗೂ ಸಿಧು ನಡುವಿನ ಮನಸ್ತಾಪದ ಕಾರಣದಿಂದಾಗಿ  ಕಳೆದ ವರ್ಷ ಸಚಿವ ಸ್ಥಾನವನ್ನು ಕೂಡಾ ಕಳೆದುಕೊಳ್ಳಬೇಕಾಯಿತು.  ಖ್ಯಾತ  ಕ್ರಿಕೆಟ್ ನಿರೂಪಕರಾಗಿರುವ ಸಿಧು  ಕಾಂಗ್ರೆಸ್  ಸ್ಟಾರ್ ಪ್ರಚಾರಕರಲ್ಲಿ ಹೆಸರಿಸಲ್ಪಟ್ಟಿದ್ದರೂ ಸಹ ಹರಿಯಾಣ ಮತ್ತು ದೆಹಲಿಯಲ್ಲಿ ಚುನಾವಣಾ ಪ್ರಚಾರ ನಡೆಸಿರಲಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡ್ರಗ್ಸ್ ಸೇವನೆ ದೃಢ: ಫುಕೆಟ್- ದೆಹಲಿ ಏರ್ ಇಂಡಿಯಾ ವಿಮಾನದ ಮುಖ್ಯ ಪೈಲಟ್ ವಜಾ!

Video: 'ಪೊಲೀಸರು ಬುದ್ದಿ ಕಲಿಸಿದ್ದಾರೆ, ತಪ್ಪನ್ನ ಕ್ಷಮಿಸಲ್ಲ'; ಮಗ ಸಾಮ್ರಾಟ್‌ ಬಗ್ಗೆ ಕೊನೆಗೂ ಮೌನ ಮುರಿದ ನಟ Duniya Vijay

‘ಹೂತುಹಾಕಬೇಕು ಎನ್ನುವವರಲ್ಲ ನಾವು’.. ‘ಮಹಿಳೆಯರಿಗೆ ಶಿಕ್ಷಣ, ಅವಕಾಶ ನೀಡುತ್ತಿದ್ದೇವೆ’: ‘ಮನೆಯಲ್ಲೇ ಇರಬೇಕು’ ಹೇಳಿಕೆಗೆ ಮುಸ್ಲಿಂ ಧರ್ಮಗುರು ಸ್ಪಷ್ಟನೆ, Video

ಜಮ್ಮು-ಕಾಶ್ಮೀರ: ಬುಡ್ಗಾಮ್‌ ಎನ್ ಕೌಂಟರ್ ನಲ್ಲಿ ಉಗ್ರನ ಹತ್ಯೆ; AK ರೈಫಲ್ ಮತ್ತಿತರ ಶಸ್ತ್ರಾಸ್ತ್ರಗಳು ವಶ!

Mysuru Dasara: 'ಯುವ ದಸರಾ' ಉದ್ಘಾಟನೆಗೆ ಖ್ಯಾತ ನೃತ್ಯ ನಿರ್ದೇಶಕ ಪ್ರಭುದೇವಗೆ ಆಹ್ವಾನ!