ಕೊರೋನಾ ವೈರಸ್: ಚೀನಾ ಹಿಂದಿಕ್ಕಿದ ಮಹಾರಾಷ್ಟ್ರ, ಸೋಂಕಿತರ ಸಂಖ್ಯೆ 85,975ಕ್ಕೆ ಏರಿಕೆ
ಮಾರಕ ಕೊರೋನಾ ವೈರಸ್ ದಾಳಿಗೆ ತುತ್ತಾಗಿರುವ ಮಹಾರಾಷ್ಟ್ರ ರಾಜ್ಯ ಇದೀಗ ಕೊರೋನಾ ವೈರಸ್ ಸೋಂಕಿತರ ಸಂಖ್ಯೆಯಲ್ಲಿ ಚೀನಾ ದೇಶವನ್ನೇ ಹಿಂದಿಕ್ಕಿದ್ದು, ಇಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 85,975ಕ್ಕೆ ಏರಿಕೆಯಾಗಿದೆ.
ಮುಂಬೈ: ಮಾರಕ ಕೊರೋನಾ ವೈರಸ್ ದಾಳಿಗೆ ತುತ್ತಾಗಿರುವ ಮಹಾರಾಷ್ಟ್ರ ರಾಜ್ಯ ಇದೀಗ ಕೊರೋನಾ ವೈರಸ್ ಸೋಂಕಿತರ ಸಂಖ್ಯೆಯಲ್ಲಿ ಚೀನಾ ದೇಶವನ್ನೇ ಹಿಂದಿಕ್ಕಿದ್ದು, ಇಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 85,975ಕ್ಕೆ ಏರಿಕೆಯಾಗಿದೆ.
ಭಾನುವಾರ ಒಂದೇ ದಿನ ಮಹಾರಾಷ್ಟ್ರದಲ್ಲಿ 3,007 ಹೊಸ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಮೂಲಕ ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 85,975ಕ್ಕೆ ಏರಿಕೆಯಾಗಿದೆ. ಚೀನಾದ ಒಟ್ಟಾರೆ ಸೋಂಕಿತರ ಸಂಖ್ಯೆ 83,036 ಆಗಿದ್ದು, ಇದೀಗ ಮಹಾರಾಷ್ಟ್ರ ರಾಜ್ಯ ಸೋಂಕಿತರ ಸಂಖ್ಯೆಯಲ್ಲಿ ಚೀನಾವನ್ನೇ ಹಿಂದಿಕ್ಕಿದೆ.
ಇನ್ನು ಮಹಾರಾಷ್ಟ್ರದಲ್ಲಿ ಇಂದು 91 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ಮಹಾರಾಷ್ಟ್ರದಲ್ಲಿ ಕೊರೋನಾ ವೈರಸ್ ಗೆ ಬಲಿಯಾದವರ ಸಂಖ್ಯೆ 3060ಕ್ಕೆ ಏರಿಕೆಯಾಗಿದೆ. ಆರೋಗ್ಯ ಇಲಾಖೆ ನೀಡಿರುವ ಮಾಹಿತಿ ಅನ್ವಯ ಮಹಾರಾಷ್ಟ್ರದಲ್ಲಿ ಈ ವರೆಗೂ 5,51,647 ಮಂದಿಯನ್ನು ಕೊರೋನಾ ವೈರಸ್ ಪರೀಕ್ಷೆಗೊಳಪಡಿಸಿದ್ದು, ಈ ಪೈಕಿ 39,314 ಸೋಂಕಿತರು ಗುಣಮುಖರಾಗಿದ್ದಾರೆ. ಅಂತೆಯೇ 43,591 ಸೋಂಕಿತರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.