ದೆಹಲಿಯಲ್ಲಿ ಕೊರೋನಾ ಆರ್ಭಟ; ಮತ್ತೆ 1,007 ಹೊಸ ಪಾಸಿಟಿವ್ ಪ್ರಕರಣ ಪತ್ತೆ, ಸೋಂಕಿತರ ಸಂಖ್ಯೆ 29,943ಕ್ಕೆ ಏರಿಕೆ
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಾರಕ ಕೊರೋನಾ ವೈರಸ್ ಆರ್ಭಟ ಮುಂದುವರೆದಿದ್ದು, ಇಂದೂ ಕೂಡ ದೆಹಲಿಯಲ್ಲಿ 1 ಸಾವಿರಕ್ಕೂ ಅಧಿಕ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಾರಕ ಕೊರೋನಾ ವೈರಸ್ ಆರ್ಭಟ ಮುಂದುವರೆದಿದ್ದು, ಇಂದೂ ಕೂಡ ದೆಹಲಿಯಲ್ಲಿ 1 ಸಾವಿರಕ್ಕೂ ಅಧಿಕ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.
ದೆಹಲಿಯಲ್ಲಿ ಇಂದು ಒಂದೇ ದಿನ 1,007 ಹೊಸ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಮೂಲಕ ದೆಹಲಿಯಲ್ಲಿ ಸೋಂಕಿತರ ಸಂಖ್ಯೆ 29,943ಕ್ಕೆ ಏರಿಕೆಯಾಗಿದೆ. ಈ ಪೈಕಿ ಇಂದು ಒಂದೇ ದಿನ 358 ಮಂದಿ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು, ಆ ಮೂಲಕ 11,357 ಮಂದಿ ಸೋಂಕಿತರು ಗುಣಮುಖರಾಗಿದ್ದು, 17,712 ಸೋಂಕಿತರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ದೆಹಲಿಯಲ್ಲಿ ಈ ವರೆಗೂ 874 ಸೋಂಕಿತರು ಸಾವನ್ನಪ್ಪಿದ್ದಾರೆ. ದೆಹಲಿಯಲ್ಲಿ ಕಂಟೈನ್ ಮೆಂಟ್ ಝೋನ್ ಗಳ ಸಂಖ್ಯೆ ಕೂಡ 183 ಕ್ಕೆ ಏರಿಕೆಯಾಗಿದೆ.