ದೇಶದಲ್ಲಿ ಒಂದೇ ದಿನ 9,983 ಕೊರೋನಾ ಪ್ರಕರಣ ಪತ್ತೆ; ಸೋಂಕಿತರ ಸಂಖ್ಯೆ 2.56 ಲಕ್ಷಕ್ಕೆ ಏರಿಕೆ; 7,135 ಮಂದಿ ಸಾವು
ಭಾರತದಲ್ಲಿ ಕೊರೋನಾ ರೌದ್ರನರ್ತನ ಮುಂದುವರೆದಿದ್ದು, ಕೇವಲ ಒಂದೇ ದಿನದಲ್ಲಿ 9,983 ಮಂದಿಯಲ್ಲಿ ಹೊಸದಾಗಿ ವೈರಸ್ ಪತ್ತೆಯಾಗಿದೆ. ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,56,611 ಲಕ್ಷಕ್ಕೇರಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೋಮವಾರ ಮಾಹಿತಿ ನೀಡಿದೆ.
ನವದೆಹಲಿ: ಭಾರತದಲ್ಲಿ ಕೊರೋನಾ ರೌದ್ರನರ್ತನ ಮುಂದುವರೆದಿದ್ದು, ಕೇವಲ ಒಂದೇ ದಿನದಲ್ಲಿ 9,983 ಮಂದಿಯಲ್ಲಿ ಹೊಸದಾಗಿ ವೈರಸ್ ಪತ್ತೆಯಾಗಿದೆ. ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,56,611 ಲಕ್ಷಕ್ಕೇರಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೋಮವಾರ ಮಾಹಿತಿ ನೀಡಿದೆ.
ಈ ನಡುವೆ ದೇಶದಲ್ಲಿ ಮಹಾಮಾರಿ ವೈರಸ್'ಗೆ ಕಳೆದ 24 ಗಂಟೆಗಳಲ್ಲಿ 206 ಮಂದಿ ಬಲಿಯಾಗಿದ್ದು, ಸಾವಿನ ಸಂಖ್ಯೆ ಕೂಡ 7,135ಕ್ಕೆ ತಲುಪಿದೆ.
ಈ ನಡುವೆ ಈ ವರೆಗೂ ಒಟ್ಟು 1,24,095 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಇನ್ನೂ ದೇಶದಲ್ಲಿ 1,25,381 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆಂದು ತಿಳಿದುಬಂದಿದೆ.
ಉಳಿದಂತೆ ತಮಿಳುನಾಡಿನಲ್ಲಿ ಮತ್ತೆ 1515 ಹೊಸ ಕೊರೋನಾ ಪ್ರಕರಣಗಳು ದೃಢವಾಗಿದ್ದು, ಸೋಂಕಿತರ ಸಂಖ್ಯೆ 31,684ಕ್ಕೆ ತಲುಪಿದೆ. ದೆಹಲಿಯಲ್ಲಿ 1282, ಜಮ್ಮು ಮತ್ತು ಕಾಶ್ಮೀರದಲ್ಲಿ 620, ಹರಿಯಾಣದಲ್ಲಿ 496, ಗುಜರಾತ್ ನಲ್ಲಿ 480, ಪಶ್ಚಿಮ ಬಂಗಾಳದಲ್ಲಿ 449 ಪ್ರಕರಣಗಳು ದಾಖಲಾಗಿವೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.