ದೆಹಲಿ ಸಿಎಂಗೂ ಕೊರೋನಾ ಲಕ್ಷಣ: ಸೆಲ್ಫ್ ಐಸೋಲೇಷನ್'ನಲ್ಲಿ ಕೇಜ್ರಿವಾಲ್, ಎಲ್ಲಾ ಕಾರ್ಯಕ್ರಮಗಳ ರದ್ದು!
ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಲ್ಲಿ ಮಹಾಮಾರಿ ಕೊರೋನಾ ವೈರಸ್ ಲಕ್ಷಣಗಳು ಕಂಡು ಬಂದಿದೆ ಎಂದು ಹೇಳಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಪಡಿಸಿರುವ ಕೇಜ್ರಿವಾಲ್ ಅವರು ಸೆಲ್ಫ್ ಐಸೋಲೇಷನ್ ನಲ್ಲಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ.
ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಲ್ಲಿ ಮಹಾಮಾರಿ ಕೊರೋನಾ ವೈರಸ್ ಲಕ್ಷಣಗಳು ಕಂಡು ಬಂದಿದೆ ಎಂದು ಹೇಳಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಪಡಿಸಿರುವ ಕೇಜ್ರಿವಾಲ್ ಅವರು ಸೆಲ್ಫ್ ಐಸೋಲೇಷನ್ ನಲ್ಲಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ.
ಭಾನುವಾರ ಮಧ್ಯಾಹ್ನದ ವೇಳೆ ಕೇಜ್ರಿವಾಲ್ ಅವರಲ್ಲಿ ಜ್ವರ, ಗಂಟಲು ಕೆರೆತದಂತಹ ಕೊರೋನಾ ಲಕ್ಷಣಗಳು ಕಂಡು ಬಂದ ಹಿನ್ನೆಲೆಯಲ್ಲಿ ಎಲ್ಲಾ ಸರ್ಕಾರಿ ಕಾರ್ಯಕ್ರಮಗಳನ್ನು ರದ್ದುಪಡಿಸಿ, ಐಸೋಲೇಷನ್ ನಲ್ಲಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.
ವೈರಸ್ ಲಕ್ಷಣಗಳು ಕಂಡು ಬಂದ ಹಿನ್ನೆಲೆಯಲ್ಲಿ ನಾಳೆ ಕೇಜ್ರಿವಾಲ್ ಅವರಿಗೆ ಕೊರೋನಾ ಪರೀಕ್ಷೆ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.