ಮೊನಿಕಾ ಕಪಿಲ್ ಮೊಹ್ತಾ 
ದೇಶ

ಮೊನಿಕಾ ಕಪಿಲ್ ಮೊಹ್ತಾ ಸ್ವಿಟ್ಜರ್ಲೆಂಡ್ ನ ಭಾರತದ ಮುಂದಿನ ರಾಯಭಾರಿಯಾಗಿ ನೇಮಕ

ಸ್ವಿಟ್ಜರ್ಲೆಂಡ್ ನ ಭಾರತದ ಮುಂದಿನ ರಾಯಭಾರಿಯಾಗಿ ಮೊನಿಕಾ ಕಪಿಲ್ ಮೊಹ್ತಾ ನೇಮಕಗೊಂಡಿದ್ದಾರೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯ ಸೋಮವಾರ ಈ ವಿಷಯವನ್ನು ಪ್ರಕಟಿಸಿದೆ.

ನವದೆಹಲಿ: ಸ್ವಿಟ್ಜರ್ಲೆಂಡ್ ನ ಭಾರತದ ಮುಂದಿನ ರಾಯಭಾರಿಯಾಗಿ ಮೊನಿಕಾ ಕಪಿಲ್ ಮೊಹ್ತಾ ನೇಮಕಗೊಂಡಿದ್ದಾರೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯ ಸೋಮವಾರ ಈ ವಿಷಯವನ್ನು ಪ್ರಕಟಿಸಿದೆ.

ಭಾರತೀಯ ವಿದೇಶಾಂಗ ಸೇವೆಯ 1985ರ ಬ್ಯಾಚಿನ ಅಧಿಕಾರಿಯಾಗಿರುವ ಮೊನಿಕಾ ಪ್ರಸ್ತುತ ಸ್ವಿಡನ್ ದೇಶದ ಭಾರತೀಯ ರಾಯಭಾರಿಯಾಗಿದ್ದಾರೆ. ಶೀಘ್ರದಲ್ಲಿಯೇ ಅವರು ಸ್ವಿಟ್ಜರ್ಲೆಂಡ್ ನ ಭಾರತದ ಮುಂದಿನ ರಾಯಭಾರಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.

ಮೊನಿಕಾ ಜುಲೈ 2011ರಿಂದ ಜನವರಿ 2015ರವರೆಗೂ ಪೋಲ್ಯಾಂಡ್ ಮತ್ತು ಲಿಥುವೇನಿಯಾದ ಭಾರತದ ರಾಯಭಾರಿಯಾಗಿ ಸೇವೆ ಸಲ್ಲಿಸಿದ್ದಾರೆ. ಅಲ್ಲದೇ ನೆಹರು ಕೇಂದ್ರದ ನಿರ್ದೇಶಕಿಯಾಗಿಯೂ ಕಾರ್ಯನಿರ್ವಹಿಸಿದ್ದಾರೆ. ದಕ್ಷಿಣ ವಿಭಾಗದ ಹೆಚ್ಚುವರಿ ಕಾರ್ಯದರ್ಶಿ, ಜಂಟಿ ಕಾರ್ಯದರ್ಶಿ, ಪಾಕಿಸ್ತಾನ, ಗಲ್ಫ್, ವಿಶ್ವಸಂಸ್ಥೆಯ ನಿರ್ದೇಶಕಿಯಾಗಿ ಸೇವೆ ಸಲ್ಲಿಸಿದ್ದಾರೆ. ಫ್ರಾನ್ಸ್, ನೇಪಾಳ, ಥೈಲ್ಯಾಂಡ್ ದೇಶಗಳ ಭಾರತೀಯ ರಾಯಭಾರಿ ಕಚೇರಿಯಲ್ಲಿಯೂ ಮೊನಿಕಾ ಕಾರ್ಯನಿರ್ವಹಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT