ರಮೇಶ್ ನಿಶಾಂಕ್ ಪೋಖ್ರಿಯಾಲ್ 
ದೇಶ

ಶಾಲೆ-ಕಾಲೇಜುಗಳ ಪುನಾರಂಭ ವದಂತಿ; ಅಗಸ್ಟ್ ನಂತರವೇ ಪುನರಾರಂಭ: ಕೇಂದ್ರ ಮಾನವ ಸಂಪನ್ಮೂಲ ಸಚಿವರ ಸ್ಪಷ್ಟನೆ

ದೇಶದಾದ್ಯಂತ ಕೊರೊನಾ ವೈರಸ್ ಸೋಂಕು ಹರಡುತ್ತಿರುವ ನಡುವಲ್ಲೇ ಶಾಲೆಗಳ ಆರಂಭದ ಕುರಿತು ಗೊಂದಲಗಳು ಏರ್ಪಟ್ಟಿದೆ. ಈ ನಡುವಲ್ಲೇ ಶಾಲೆ, ಕಾಲೇಜುಗಳು ಅಗಸ್ಟ್ ಬಳಿಕಷ್ಟೇ ಪುನರಾರಂಭಗೊಳ್ಳಲಿದೆ ಎಂದು ಕೇಂದ್ರ ಮಾನವ ಸಂಪನ್ಮೂಲ ಸಚಿವ ರಮೇಶ್ ನಿಶಾಂಕ್ ಪೋಖ್ರಿಯಾಲ್ ಸ್ಪಷ್ಟಪಡಿಸಿದ್ದಾರೆ.

ನವದೆಹಲಿ: ದೇಶದಾದ್ಯಂತ ಕೊರೊನಾ ವೈರಸ್ ಸೋಂಕು ಹರಡುತ್ತಿರುವ ನಡುವಲ್ಲೇ ಶಾಲೆಗಳ ಆರಂಭದ ಕುರಿತು ಗೊಂದಲಗಳು ಏರ್ಪಟ್ಟಿದೆ. ಈ ನಡುವಲ್ಲೇ ಶಾಲೆ, ಕಾಲೇಜುಗಳು ಅಗಸ್ಟ್  ಬಳಿಕಷ್ಟೇ ಪುನರಾರಂಭಗೊಳ್ಳಲಿದೆ ಎಂದು ಕೇಂದ್ರ ಮಾನವ ಸಂಪನ್ಮೂಲ ಸಚಿವ ರಮೇಶ್ ನಿಶಾಂಕ್ ಪೋಖ್ರಿಯಾಲ್ ಸ್ಪಷ್ಟಪಡಿಸಿದ್ದಾರೆ.

ಶಾಲೆ ಕಾಲೇಜುಗಳು ಪುನಾರಂಭಕ್ಕೆ ಸಿದ್ಧತೆ ಮಾಡಿಕೊಳುತ್ತಿದ್ದು,  ಜುಲೈನಿಂದ ಶಾಲೆ ಕಾಲೇಜುಗಳು ಶೇಕಡಾ 30% ಹಾಜರಾತಿಯೊಂದಿಗೆ ಬೆಳಗ್ಗೆ ಮತ್ತು ಸಂಜೆಯ ಕ್ಲಾಸ್‍ಗಳು ಆರಂಭವಾಗಲಿದೆ. ಅಲ್ಲದೇ ಹಸಿರು ಕಿತ್ತಳೆ ವಲಯದಲ್ಲಿ ಪೂರ್ಣ ಪ್ರಮಾಣದಲ್ಲಿ ಶಾಲೆಗಳು ಶುರುವಾಗಲಿದೆ. ರಾಜ್ಯ ಸರ್ಕಾರ ಇದಕ್ಕೆ ಅನುಮತಿ ನೀಡಲಿದೆ ಎನ್ನುವ ಮಾತುಗಳು
ಕೇಳಿ ಬಂದಿತ್ತು. ಆದರೆ ಶಾಲೆ ಕಾಲೇಜುಗಳನ್ನು ಆರಂಭಿಸಲು ಕೇಂದ್ರ ಸರ್ಕಾರ ಸದ್ಯ ಅನುಮತಿ ನೀಡುವುದಿಲ್ಲ ಎಂದು ಸಚಿವರು ಸ್ಪಷ್ಟ ಪಡಿಸಿದ್ದಾರೆ.

ಅಲ್ಲದೇ ದೇಶದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಹೀಗಾಗಿ ಆಗಸ್ಟ್ ಬಳಿಕವೇ ಶಾಲೆ ಕಾಲೇಜುಗಳನ್ನು ಆರಂಭಿಸಲು ಸರ್ಕಾರ ಚಿಂತಿಸಿದೆ. ಸಿಬಿಎಸ್‍ಸಿ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಎಸ್‍ಎಸ್‍ಎಲ್‍ಸಿ ಪಿಯುಸಿ ಹಾಗೂ ಡಿಪ್ಲೋಮಾ, ಪದವಿ ಪರೀಕ್ಷೆಗಳು ಬಾಕಿ ಉಳಿದುಕೊಂಡಿದ್ದು ಆಗಸ್ಟ್ ಅಂತ್ಯದ ವೇಳೆಗೆ ಪರೀಕ್ಷೆ  ನಡೆಸಿ ಫಲಿತಾಂಶ ನೀಡುವ ಪ್ರಯತ್ನ ಮಾಡಲಿದ್ದೇವೆ. ಆಗಸ್ಟ್ ಬಳಿಕ ಪರಿಸ್ಥಿತಿ ಅನುಸರಿಸಿ ಶಾಲೆ ಕಾಲೇಜುಗಳನ್ನು ಆರಂಭಿಸುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ

SIR ವಿರುದ್ಧ 'ಚುನಾವಣಾ ಆಯೋಗ ಚಲೋ' ಘೋಷಿಸಿದ ಪ್ರಕಾಶ್ ರಾಜ್; ಆಯುಕ್ತರ ರಾಜೀನಾಮೆಗೆ ಆಗ್ರಹ

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!

ಬೆಂಗಳೂರು: ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ, ಹೇರ್ ಸ್ಟೈಲಿಸ್ಟ್ ಸಾವು; Video