ವಿಮಾನ ಪತನ 
ದೇಶ

ವಿಮಾನ ಪತನ: ಟ್ರೈನಿ ಪೈಲಟ್, ಮಾರ್ಗದರ್ಶಕ ಸಾವು

ಎರಡು ಆಸನಗಳ ವಿಮಾನವೊಂದು ಒಡಿಶಾ ರಾಜ್ಯದ ಧೆಂಕನಲ್ ಜಿಲ್ಲೆಯ ಬಳಿ ಅಪಘಾತಕ್ಕೀಡಾಗಿ ಟ್ರೈನಿ ಪೈಲಟ್ ಹಾಗೂ  ಆಕೆಗೆ ತರಬೇತಿ ನೀಡುತ್ತಿದ್ದ ಮಾರ್ಗದಶಕರೊಬ್ಬರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ

ಒಡಿಶಾ: ಎರಡು ಆಸನಗಳ ವಿಮಾನವೊಂದು ಒಡಿಶಾ ರಾಜ್ಯದ ಧೆಂಕನಲ್ ಜಿಲ್ಲೆಯ ಬಳಿ ಅಪಘಾತಕ್ಕೀಡಾಗಿ ಟ್ರೈನಿ ಪೈಲಟ್ ಹಾಗೂ  ಆಕೆಗೆ ತರಬೇತಿ ನೀಡುತ್ತಿದ್ದ ಮಾರ್ಗದಶಕರೊಬ್ಬರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಜಿಲ್ಲೆಯ ಬಿರಸಲದಲ್ಲಿರುವ ಸರ್ಕಾರಿ ವಾಯುಯಾನ ತರಬೇತಿ ಸಂಸ್ಥೆಯಲ್ಲಿ ಟಾರ್ಮ್ಯಾಕ್‌ನಲ್ಲಿ ತರಬೇತುದಾರ ವಿಮಾನ ಅಪಘಾತಕ್ಕೀಡಾಗಿದೆ ಎಂದು ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಬಿಕೆ ನಾಯಕ್ ತಿಳಿಸಿದ್ದಾರೆ. 

ಇಬ್ಬರನ್ನು ಕಾಮಕ್ಯನಗರ ಸಮೀಪದ ಆಸ್ಪತ್ರೆಯೊಂದಕ್ಕೆ ಕರೆದೊಯ್ಯಲಾಗಿದ್ದು, ಅವರು ಅಲ್ಲಿ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಹಿರಿಯ ಪೊಲೀಸ್ ಹಾಗೂ ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದು, ಅಪಘಾತದ ಬಗ್ಗೆ ತನಿಖೆಗೆ ಆದೇಶಿಸಿದ್ದಾರೆ. 

ತಾಂತ್ರಿಕ ದೋಷದಿಂದ ಈ ಅಪಘಾತ ಸಂಭವಿಸಿರುವುದಾಗಿ ಅಧಿಕಾರಿಗಳು ಹೇಳಿದ್ದಾರೆ. ತರಬೇತಿ ನೀಡುತ್ತಿದ್ದ ಮಾರ್ಗದರ್ಶಕರು ಪುರುಷರಾಗಿದ್ದು, ಅವರ ಗುರುತನ್ನು ಕಂಡುಹಿಡಿಯಲಾಗುತ್ತಿದೆ ಎಂದು ಕಾಮಕ್ಯನಗರ ಠಾಣೆ ಉಸ್ತುವಾರಿ ಇನ್ಸ್ ಪೆಕ್ಟರ್ ಎ ದಾಲುವಾ ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel