ದೇಶ

ಬಿಜೆಪಿ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ, ಅವರ ತಾಯಿಗೆ ಕೊರೋನಾ ಪಾಸಿಟಿವ್, ಆಸ್ಪತ್ರೆಗೆ ದಾಖಲು

Lingaraj Badiger

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಾಮಾರಿ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿದ್ದು, ಈಗ ಬಿಜೆಪಿ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ ಹಾಗೂ ಅವರ ತಾಯಿ ಮಾಧವಿ ರಾಜೆ ಸಿಂಧಿಯಾ ಅವರಿಗೆ ಕೊವಿಡ್-19 ಪಾಸಿಟಿವ್ ದೃಢಪಟ್ಟಿದೆ.

ಕೊರೋನಾ ಲಕ್ಷಣಗಲು ಕಂಡುಬಂದ ಹಿನ್ನೆಲೆಯಲ್ಲಿ ಸಿಂಧಿಯಾ ಹಾಗೂ ಅವರ ತಾಯಿಯನ್ನು ಕೊವಿಡ್-19 ಪರೀಕ್ಷೆಗೆ ಒಳಪಡಿಸಲಾಗಿದ್ದು, ಈಗ ಪಾಸಿಟಿವ್ ಬಂದಿದೆ ಎಂದು ವರದಿಗಳು ತಿಳಿಸಿವೆ.

ಪಾಸಿಟಿವ್ ಬಂದ ನಂತರ ಜ್ಯೋತಿರಾದಿತ್ಯ ಸಿಂಧಿಯಾ ಹಾಗೂ ಅವರ ತಾಯಿಯನ್ನು ದೆಹಲಿಯ ಮ್ಯಾಕ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಮಧ್ಯೆ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೂ ಕೊರೋನಾ ಲಕ್ಷಣಗಲು ಕಾಣಿಸಿಕೊಂಡಿದ್ದು, ಅವರನ್ನು ಕೊವಿಡ್-19 ಪರೀಕ್ಷೆಗೆ ಒಳಪಡಿಸಲಾಗಿದೆ. ಆದರೆ ವರದಿ ಇನ್ನೂ ಬಂದಿಲ್ಲ.

SCROLL FOR NEXT