ಕೊರೋನಾ ನಿಯಂತ್ರಣಕ್ಕೆ ಕಠಿಣ ಕ್ರಮ: ಕರ್ನಾಟಕ, ಉತ್ತರಪ್ರದೇಶ ಕೊಂಡಾಡಿದ ರಾಜನಾಥ್ ಸಿಂಗ್
ಕೊರೋನಾ ನಿಯಂತ್ರಿಸುವಲ್ಲಿ ಕಠಿಣ ಕ್ರಮಗಳನ್ನು ಕೈಗೊಂಡಿರುವ ಕರ್ನಾಟಕ ಹಾಗೂ ಉತ್ತರಪ್ರದೇಶ ರಾಜ್ಯಗಳನ್ನು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಕೊಂಡಾಡಿದ್ದಾರೆ.
ನವದೆಹಲಿ: ಕೊರೋನಾ ನಿಯಂತ್ರಿಸುವಲ್ಲಿ ಕಠಿಣ ಕ್ರಮಗಳನ್ನು ಕೈಗೊಂಡಿರುವ ಕರ್ನಾಟಕ ಹಾಗೂ ಉತ್ತರಪ್ರದೇಶ ರಾಜ್ಯಗಳನ್ನು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಕೊಂಡಾಡಿದ್ದಾರೆ.
ಮಹಾರಾಷ್ಟ್ರದಲ್ಲಿ ನಡೆದ ರ್ಯಾಲಿಯೊಂದರಲ್ಲಿ ಮಾತನಾಡಿರು ಅವರು, ಕೊರೋನಾ ವಿಚಾರದಲ್ಲಿ ಕರ್ನಾಟಕ, ಉತ್ತರಪ್ರದೇಶ ಸರ್ಕಾರಗಳಿಂದ ಮಹಾರಾಷ್ಟ್ರ ಮುಖ್ಯಮಂತ್ರಿಗಳು ಸಾಕಷ್ಟು ಕಲಿಯಬೇಕಿದೆ ಎಂದು ಸಲಹೆ ನೀಡಿದ್ದಾರೆ.
ಕೊರೋನಾ ಪರಿಸ್ಥಿತಿ ನಿಭಾಯಿಸುವಲ್ಲಿ ಮಹಾರಾಷ್ಟ್ರ ಸರ್ಕಾರ ವಿಫಲವಾಗಿದ್ದು, ಬಿಜೆಪಿ ಆಡಳಿತ ನಡೆಸುತ್ತಿರುವ ಉತ್ತರಪ್ರದೇಶ ಹಾಗೂ ಕರ್ನಾಟಕದಿಂದ ಠಾಕ್ರೆ ಸಾಕಷ್ಟು ಕಲಿಯಬೇಕಿದೆ ಎಂದು ತಿಳಿಸಿದ್ದಾರೆ. ಅಲ್ಲದೆ, ಕೊರೋನಾ ವಿರುದ್ಧ ಹೋರಾಡಲು ಕೇಂದ್ರ ಸರ್ಕಾರ ಮಹಾರಾಷ್ಟ್ರಗೆ ಎಲ್ಲಾ ರೀತಿಯ ಸಹಾಯ ಮಾಡಲಿದೆ ಎಂದು ಭರವಸೆ ನೀಡಿದ್ದಾರೆ.