ಅರ್ನಬ್ ಗೋಸ್ವಾಮಿ 
ದೇಶ

ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗುವಂತೆ ಅರ್ನಬ್ ಗೋಸ್ವಾಮಿಗೆ ಬಾಂಬೆ ಹೈಕೋರ್ಟ್ ಆದೇಶ

ಧಾರ್ಮಿಕ ಭಾವನೆಗೆ ಧಕ್ಕೆ ತಂದ ಆರೋಪ ಎದುರಿಸುತ್ತಿರುವ ರಿಪಬ್ಲಿಕ್ ಟಿವಿ ಮುಖ್ಯ ಸಂಪಾದಕ ಅರ್ನಬ್ ಗೋಸ್ವಾಮಿ ಅವರಿಗೆ ಪೊಲೀಸ್ ವಿಚಾರಣೆಯಿಂದ ವಿನಾಯಿತಿ ನೀಡಲು ಬಾಂಬೆ ಹೈಕೋರ್ಟ್ ನಿರಾಕರಿಸಿದ್ದು, ವಿಚಾರಣೆಗೆ ಹಾಜರಾಗುವಂತೆ ಮಂಗಳವಾರ ಸೂಚಿಸಿದೆ.

ಮುಂಬೈ: ಧಾರ್ಮಿಕ ಭಾವನೆಗೆ ಧಕ್ಕೆ ತಂದ ಆರೋಪ ಎದುರಿಸುತ್ತಿರುವ ರಿಪಬ್ಲಿಕ್ ಟಿವಿ ಮುಖ್ಯ ಸಂಪಾದಕ ಅರ್ನಬ್ ಗೋಸ್ವಾಮಿ ಅವರಿಗೆ ಪೊಲೀಸ್ ವಿಚಾರಣೆಯಿಂದ ವಿನಾಯಿತಿ ನೀಡಲು ಬಾಂಬೆ ಹೈಕೋರ್ಟ್ ನಿರಾಕರಿಸಿದ್ದು, ವಿಚಾರಣೆಗೆ ಹಾಜರಾಗುವಂತೆ ಮಂಗಳವಾರ ಸೂಚಿಸಿದೆ.

ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ ಗಳನ್ನು ರದ್ದುಗೊಳಿಸುವಂತೆ ಕೋರಿ ಪತ್ರಕರ್ತ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಉಜ್ಜಲ್ ಭುಯಾನ್ ಮತ್ತು ರಿಯಾಜ್ ಚಾಗ್ಲಾ ಅವರನ್ನೊಳಗೊಂಡ ವಿಭಾಗೀಯ ಪೀಠ ಬುಧವಾರ ಪೊಲೀಸರ ಮುಂದೆ ಹಾಜರಾಗುವಂತೆ ಆರೋಪಿಗೆ ಸೂಚಿಸಿದೆ.

ಮುಂಬೈನ ಬಾಂದ್ರಾದಲ್ಲಿರುವ ಮಸೀದಿಯೊಂದರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಅರ್ನಬ್ ಗೋಸ್ವಾಮಿ ವಿರುದ್ಧ ಮುಂಬೈ ಹಾಗೂ ನಾಗ್ಪುರದಲ್ಲಿ ಎರಡು ಎಫ್ಐಆರ್ ಗಳನ್ನು ದಾಖಲಿಸಲಾಗಿದೆ.

ಈ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಮುಂಬೈ ಪೊಲೀಸರು ಅರ್ನಬ್ ಗೋಸ್ವಾಮಿಗೆ ಸೂಚಿಸಿದ್ದರು. ಆದರೆ ವಿಚಾರಣೆಯಿಂದ ವಿನಾಯಿತಿ ನೀಡುವಂತೆ ಕೋರಿ ಗೋಸ್ವಾಮಿ ಪರ ವಕೀಲ ಹರೀಶ್ ಸಾಳ್ವೆ ಅವರು ಕೋರ್ಟ್ ಅರ್ಜಿ ಸಲ್ಲಿಸಿದ್ದರು.

ಏಪ್ರಿಲ್ 14ರಂದು ಪ್ರಧಾನಿ ನರೇಂದ್ರ ಮೋದಿ ಅವರು ಲಾಕ್ ಡೌನ್ ವಿಸ್ತರಿಸಿದ ನಂತರ ಸಾವಿರಾರು ವಲಸೆ ಕಾರ್ಮಿಕರು ತಮ್ಮ ಊರುಗಳಿಗೆ ತೆರಳಲು ಬಾಂದ್ರಾ ರೈಲು ನಿಲ್ದಾಣಕ್ಕೆ ಆಗಮಿಸಿದ್ದರು. ಈ ಘಟನೆಗೂ ಬಾಂದ್ರಾದಲ್ಲಿರುವ ಮಸೀದಿಗೂ ಯಾವುದೇ ಸಂಬಂಧವಿಲ್ಲದಿದ್ದರೂ ಅರ್ನಬ್ ಅವರು ಮಸೀದಿಯ ಚಿತ್ರ ತೋರಿಸಿ ಮುಸ್ಲಿಮರ ವಿರುದ್ಧ ದ್ವೇಷ ಸೃಷ್ಟಿಸಲು ಯತ್ನಿಸಿದ್ದಾರೆ ಎಂದು ಆರೋಪಿಸಿ ರಝಾ ಎಜುಕೇಷನ್ ವೆಲ್ಫೇರ್ ಸೊಸೈಟಿ ಕಾರ್ಯದರ್ಶಿ ಇರ್ಫಾನ್ ಅಬೂಬಕರ್ ಶೈಖ್ ಎಂಬುವವರು ಪೊಲೀಸರು ದೂರೂ ನೀಡಿದ್ದರು.

ಶೈಕ್ ದೂರಿನ ಆಧಾರದ ಮೇಲೆ ಪೊಲೀಸರು ಅರ್ಬನ್ ಗೋಸ್ವಾಮಿ ಹಾಗೂ ಇತರೆ ಇಬ್ಬರ ವಿರುದ್ಧ ಐಪಿಸಿ ಸೆಕ್ಷನ್ 153, 153ಎ, 295ಎ, 500, 511 ಮತ್ತು 120 ಬಿ ಅಡಿ ಕೇಸ್ ದಾಖಲಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್