ಶೋಪಿಯಾನ್: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭಾರತೀಯ ಸೇನೆ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಮೂವರು ಉಗ್ರರನ್ನು ಹೊಡೆದುರುಳಿಸಿದ್ದಾರೆ.
ಶೋಪಿಯಾನ್ ಜಿಲ್ಲೆಯ ಸುಗೂ ಎಂಬ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವ ಮಾಹಿತಿ ತಿಳಿಯುತ್ತಿದ್ದಂತೆಯೇ ಭದ್ರತಾ ಪಡೆಗಳು ಹಾಗೂ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಜಂಟಿಯಾಗಿ ಕಾರ್ಯಾಚಣೆ ನಡೆಸಲು ಆರಂಭಿಸಿದ್ದರು.
ಈ ವೇಳೆ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಲು ಆರಂಭಿಸಿದ್ದು, ಕೂಡಲೇ ಕಾರ್ಯಾಚರಣೆಯನ್ನು ಚುರುಕುಗೊಳಿಸಿದ ಅಧಿಕಾರಿಗಳು ಇದೀಗ ಮೂವರು ಉಗ್ರರನ್ನು ಹೊಡೆದುರುಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಸ್ತುತ ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದೆ ಎಂದು ತಿಳಿದುಬಂದಿದೆ.