ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಕೊರೋನಾ ಆರ್ಭಟಕ್ಕೆ ತತ್ತರಿಸಿದ ಮಹಾರಾಷ್ಟ್ರ: ಒಂದೇ ದಿನ 3254 ಹೊಸ ಪಾಸಿಟಿವ್ ಪ್ರಕರಣ ದಾಖಲು

ಮಾರಕ ಕೊರೋನಾ ವೈರಸ್ ಸಾಂಕ್ರಾಮಿಕ ಸೋಂಕಿನಿಂದ ತತ್ತರಿಸಿ ಹೋಗಿರುವ ಮಹಾರಾಷ್ಟ್ರದಲ್ಲಿ ಒಂದೇ ದಿನ 3254 ಹೊಸ ಪಾಸಿಟಿವ್ ಪ್ರಕರಣ ದಾಖಲಾಗಿದೆ.

ಸಂಗ್ರಹ ಚಿತ್ರ
Srinivasa Murthy VN
Updated On : 10 Jun 2020, 9:27 pm

ಮುಂಬೈ: ಮಾರಕ ಕೊರೋನಾ ವೈರಸ್ ಸಾಂಕ್ರಾಮಿಕ ಸೋಂಕಿನಿಂದ ತತ್ತರಿಸಿ ಹೋಗಿರುವ ಮಹಾರಾಷ್ಟ್ರದಲ್ಲಿ ಒಂದೇ ದಿನ 3254 ಹೊಸ ಪಾಸಿಟಿವ್ ಪ್ರಕರಣ ದಾಖಲಾಗಿದೆ. 

ಹೌದು ಕಳೆದ 24 ಗಂಟೆಗಳಲ್ಲಿ ಮಹಾರಾಷ್ಟ್ರದಾದ್ಯತ 3254 ಹೊಸ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಮೂಲಕ ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 94,041ಕ್ಕೆ ಏರಿಕೆಯಾಗಿದೆ. 

ಇನ್ನು ಮಹಾರಾಷ್ಟ್ರದಲ್ಲಿ ಒಟ್ಟು ಇಂದು 149 ಮಂದಿ ಕೊರೋನಾ ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ಮಹಾರಾಷ್ಟ್ರದಲ್ಲಿ ಕೊರೋನಾಗೆ ಬಲಿಯಾದವರ ಸಂಖ್ಯೆ 3438ಕ್ಕೆ ಏರಿಕೆಯಾಗಿದೆ. ಮಹಾರಾಷ್ಟ್ರದಲ್ಲಿ ಇಂದು ಒಂದೇ ದಿನ 1879 ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ಈ ವರೆಗೂ 44,517 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. 49,524 ಸಕ್ರಿಯ ಪ್ರಕರಣಗಳಿವೆ. 

Advertisement

Advertisement

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement