ಸಂಗ್ರಹ ಚಿತ್ರ 
ದೇಶ

ದೆಹಲಿಯಲ್ಲಿ ಕೊರೋನಾ ಸಮುದಾಯ ಹಂತ ತಲುಪಿದೆ, ಕೇಂದ್ರವೇಕೆ ಇದನ್ನು ಒಪ್ಪಿಕೊಳ್ಳುತ್ತಿಲ್ಲ: ಆಪ್ ಪ್ರಶ್ನೆ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೋನಾ ವೈರಸ್ ಸಮುದಾಯ ಹಂತ ತಲುಪಿದ್ದು, ಕೇಂದ್ರ ಸರ್ಕಾರವೇಕೆ ಇದನ್ನು ಒಪ್ಪಿಕೊಳ್ಳುತ್ತಿಲ್ಲ ಎಂದು ಆಮ್ ಆದ್ಮಿ ಪಕ್ಷದ ಗುರುವಾರ ಪ್ರಶ್ನೆ ಮಾಡಿದೆ. 

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೋನಾ ವೈರಸ್ ಸಮುದಾಯ ಹಂತ ತಲುಪಿದ್ದು, ಕೇಂದ್ರ ಸರ್ಕಾರವೇಕೆ ಇದನ್ನು ಒಪ್ಪಿಕೊಳ್ಳುತ್ತಿಲ್ಲ ಎಂದು ಆಮ್ ಆದ್ಮಿ ಪಕ್ಷದ ಗುರುವಾರ ಪ್ರಶ್ನೆ ಮಾಡಿದೆ. 

ಈ ಕುರಿತು ಮಾತನಾಡಿರುವ ಆಮ್ ಆದ್ಮಿ ಪಕ್ಷದ ಸಂಸದ ಸಂಜಯ್ ಸಿಂಗ್ ಅವರು, ದೆಹಲಿಯಲ್ಲಿ ಕೊರೋನಾ ಸೋಂಕಿನ ಸಂಖ್ಯೆಯನ್ನು ನೋಡಿ, ಪ್ರತೀನಿತ್ಯ ಇಲ್ಲಿ ಸೋಂಕಿತರ ಸಂಖ್ಯೆ ಏರುತ್ತಲೇ ಇದ್ದು, ಈಗಾಗಲೇ ವೈರಸ್ ಸಮುದಾಯ ಹಂತ ತಲುಪಿದೆ. ಆದರೂ ಕೇಂದ್ರ ಸರ್ಕಾರವೇಕೆ ಇದನ್ನು ಒಪ್ಪಿಕೊಳ್ಳುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ. 

ಈಗಾಗಲೇ ದೆಹಲಿ ಆರೋಗ್ಯ ಸಚಿವರು ಕೊರೋನಾ ಎಷ್ಟು ವೇಗದಲ್ಲಿ ಹರಡುತ್ತಿದೆ ಎಂಬುದರ ಮಾಹಿತಿ ನೀಡಿದ್ದಾರೆ. ಸೋಂಕು ಯಾವ ರೀತಿ, ಎಲ್ಲಿ, ಹೇಗೆ ಹರಡಿತು ಎಂಬುದರ ಮಾಹಿತಿಯೇ ತಿಳಿಯದಿದ್ದಾಗ ಅದನ್ನು ಸಮುದಾಯ ಹಂತ ಎಂದು ಕರೆಯಲಾಗುತ್ತಿದೆ. ಕೇಂದ್ರ ಸರ್ಕಾರ ಯಾವುದರ ಆಧಾರದ ಮೇಲೆ ಇನ್ನೂ ಚಿಂತನೆ ನಡೆಸುತ್ತಿದೆ? ಯಾವ ಕಾರಣಕ್ಕೆ ಅವರು ಇದನ್ನು ನಂಬುತ್ತಿಲ್ಲ? ಇದಕ್ಕೆ ಕೇಂದ್ರ ಸರ್ಕಾರ ಉತ್ತರ ನೀಡಬೇಕು ಎಂದು ತಿಳಿಸಿದ್ದಾರೆ. 

ಕೆಲ ದಿನಗಳ ಹಿಂದಷ್ಟೇ ಹೇಳಿಕೆ ನೀಡಿದ್ದ ದೆಹಲಿ ಆರೋಗ್ಯ ಸಚಿವ ಸತ್ಯೇಂದರ್ ಜೈನ್ ಅವರು, ದೆಹಲಿಯಲ್ಲಿ ಕೊರೋನಾ ಸಮುದಾಯ ಹಂತ ತಲುಪಿದೆ ಎಂದು ಏಮ್ಸ್ ನಿರ್ದೇಶಕ ಡಾ.ರಂದೀಪ್ ಗುಲೇರಿಯಾ ಅವರೇ ಒಪ್ಪಿಕೊಂಡಿದ್ದಾರೆ. ಆದರೆ, ಕೇಂದ್ರ ಸರ್ಕಾರ ಇದನ್ನು ಒಪ್ಪಿಕೊಳ್ಳುತ್ತಿಲ್ಲ. ಸಮುದಾಯ ಹಂತ ತಲುಪಿರುವ ಕುರಿತು ನಾವು ಘೋಷಣೆ ಮಾಡಲು ಸಾಧ್ಯವಿಲ್ಲ. ಈ ಬಗ್ಗೆ ಕೇಂದ್ರ ಸರ್ಕಾರವೇ ನಿರ್ಧಾರ ಕೈಗೊಂಡು, ಘೋಷಣೆ ಮಾಡಬೇಕು ಎಂದು ತಿಳಿಸಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಬಹು ಅಂಗಾಂಗ ವೈಫಲ್ಯದಿಂದ ಗಾಯಕಿ ಆಶಾ ಭೋಸ್ಲೆ ನಿಧನ': ಬ್ರೀಚ್ ಕ್ಯಾಂಡಿ ಆಸ್ಪತ್ರೆ ಸ್ಪಷ್ಟನೆ

US-Iran ಶಾಂತಿ ಒಪ್ಪಂದ ವಿಫಲ: ಪಾಕಿಸ್ತಾನ ಕುತಂತ್ರ; ಸೌದಿಗೆ 13,000 Pak ಸೈನಿಕರು, 18 ಯುದ್ಧ ವಿಮಾನ ರವಾನೆ!

40 ಲಕ್ಷ ರೂ ಸಂಬಳ, ದಿಢೀರ್ ಕೆಲಸದಿಂದ ವಜಾ; 1.4 ಕೋಟಿ ಮೌಲ್ಯದ ಮನೆ EMI ತೀರಿಸಲು Rapido ಚಾಲಕನಾದ ಟೆಕ್ಕಿ!

ಇರಾನ್ ಜೊತೆಗಿನ 21 ಗಂಟೆಗಳ ಶಾಂತಿ ಮಾತುಕತೆ; ಡೊನಾಲ್ಡ್ ಟ್ರಂಪ್‌ಗೆ 'ಡಜನ್‌ಗಟ್ಟಲೆ' ಬಾರಿ ಫೋನ್ ಕರೆ ಮಾಡಿದ ಜೆಡಿ ವ್ಯಾನ್ಸ್!

ಪ್ರತಿ ಪಂದ್ಯಕ್ಕೂ ಬನ್ನಿ... ನೀವು ನನ್ನ ಅದೃಷ್ಟ: IPLನಲ್ಲಿ ಶತಕ ಸಿಡಿಸಿ ವಿನಮ್ರ ಮನವಿ ಮಾಡಿದ ಸಂಜು ಸ್ಯಾಮ್ಸನ್, Video!

SCROLL FOR NEXT