ಸಾಂದರ್ಭಿಕ ಚಿತ್ರ 
ದೇಶ

ದೇಶದಲ್ಲಿ ಕೊರೋನಾ ಸಮುದಾಯ ಪ್ರಸರಣ ಹಂತಕ್ಕೆ ತಲುಪಿಲ್ಲ: ಕೇಂದ್ರ ಸರ್ಕಾರ

ಭಾರತದಲ್ಲಿ ಕೊರೋನಾ ವೈರಸ್ ಸಮುದಾಯ ಪ್ರಸರಣ ಹಂತಕ್ಕೆ ತಲುಪಿಲ್ಲ ಎಂದು ಕೇಂದ್ರ ಸರ್ಕಾರ ಪುನರುಚ್ಚರಿಸಿದೆ.

ನವದೆಹಲಿ: ಭಾರತದಲ್ಲಿ ಕೊರೋನಾ ವೈರಸ್ ಸಮುದಾಯ ಪ್ರಸರಣ ಹಂತಕ್ಕೆ ತಲುಪಿಲ್ಲ ಎಂದು ಕೇಂದ್ರ ಸರ್ಕಾರ ಪುನರುಚ್ಚರಿಸಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಪ್ರಧಾನ ನಿರ್ದೇಶಕ ಬಲರಾಮ್‌ ಭಾರ್ಗವ್ ಅವರು, ದೆಹಲಿ ಮತ್ತು ಮುಂಬೈನಲ್ಲಿ ಕೆಲ ದಿನಗಳಿಂದ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದೆ. ಆದರೆ ದೇಶದಲ್ಲಿ ಕೊರೋನಾ ಸೋಂಕು ಸಮುದಾಯ ಹಂತಕ್ಕೆ ತಲುಪಿಲ್ಲ. ಇದರ ಸುತ್ತ ಕಾವೇರಿದ ಚರ್ಚೆ ನಡೆಯುತ್ತಿದೆ. ವಿಶ್ವ ಆರೋಗ್ಯ ಸಂಸ್ಥೆ ಇದನ್ನು ವ್ಯಾಖ್ಯಾನಿಸಿಲ್ಲ. ಸೋಂಕು ಹರಡುವಿಕೆ ನಮ್ಮ ದೇಶದಲ್ಲಿ ತುಂಬಾ ಕಡಿಮೆ, ಶೇ. 1ಕ್ಕಿಂತ ಕಡಿಮೆ ಇದೆ. ನಗರ ಪ್ರದೇಶಗಳಲ್ಲಿ ಇದು ಸ್ವಲ್ಪ ಹೆಚ್ಚು ಹಾಗೂ ಕಂಟೈನ್‌ಮೆಂಟ್‌ ಝೋನ್‌ಗಳಲ್ಲಿ ಸ್ವಲ್ಪ ಹೆಚ್ಚಾಗಿದೆ. ಖಂಡಿತವಾಗಿಯೂ ನಾವು ಸಮುದಾಯ ಪ್ರಸರಣ ಹಂತದಲ್ಲಿ ಇಲ್ಲ ಎಂದು ಹೇಳಿದ್ದಾರೆ.

ತಜ್ಞರ ಪ್ರಕಾರ ಸೋಂಕು ಪ್ರಕರಣಗಳ ಮೂಲ ಪತ್ತೆಯಾಗದೇ ಇರುವ ಪ್ರಕರಣಗಳು ಹೆಚ್ಚಾದಾಗ ಅದನ್ನು ಸಮುದಾಯ ಪ್ರಸರಣ ಅಥವಾ ಮೂರನೇ ಹಂತ ಎನ್ನಲಾಗುತ್ತದೆ.  ಕರ್ನಾಟಕವೂ ಸೇರಿ ದೇಶದೆಲ್ಲೆಡೆ ಈ ರೀತಿಯ ಪ್ರಕರಣಗಳು ಹೆಚ್ಚುತ್ತಿವೆ. ಅದರಲ್ಲೂ ಮುಂಬೈ ಮತ್ತು ದೆಹಲಿಯಲ್ಲಿ ಈ ಪ್ರಮಾಣ ವಿಪರೀತ ಏರಿಕೆಯಾಗಿದೆ. ಸೋಮವಾರ ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್‌ ಹೆಚ್ಚಿನ ಪ್ರಮಾಣದ ಪ್ರಕರಣಗಳಲ್ಲಿ ಸೋಂಕಿನ ಮೂಲ ಪತ್ತೆಯಾಗುತ್ತಿಲ್ಲ. ಆದರೆ ಕೇಂದ್ರ ಸರ್ಕಾರ ಮಾತ್ರ ಸಮುದಾಯ ಪ್ರಸರಣದ ಬಗ್ಗೆ ನಿರ್ಧಾರ ತೆಗೆದುಕೊಳ್ಳಬೇಕು ಎಂದಿದ್ದರು.  ಸತ್ಯೇಂದ್ರ ಜೈನ್‌ ಪ್ರಕಾರ ದೆಹಲಿಯ ಶೇ.50 ರಷ್ಟು ಪ್ರಕರಣಗಳಲ್ಲಿ ಸೋಂಕಿನ ಮೂಲ ತಿಳಿದು ಬರುತ್ತಿಲ್ಲ. 'ದೆಹಲಿಯಲ್ಲಿ ಸಮುದಾಯ ಪ್ರಸರಣ ಆರಂಭವಾಗಿದೆ. ಆದರೆ ಇದನ್ನು ಕೇಂದ್ರ ಸರ್ಕಾರ ಒಪ್ಪಿಕೊಳ್ಳುತ್ತಿಲ್ಲ ಎಂದು ಏಮ್ಸ್‌ ನಿರ್ದೇಶಕ ರಣದೀಪ್‌ ಗುಲೇರಿಯಾ ಹೇಳಿದ್ದಾರೆ ಎಂಬುದಾಗಿ ಜೈನ್ ಪ್ರತಿಪಾದಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ನೀವು ಪಡೆದ IMF ಬೇಲ್ಔಟ್‌ಗಿಂತ 2 ಪಟ್ಟು ಹೆಚ್ಚು; ಜಾಗಬಿಟ್ಟು ಹೋಗುವುದೇ ಪಾಕ್​ಗಿರುವ ಒಂದೇ ಆಯ್ಕೆ: ವಿಶ್ವಸಂಸ್ಥೆಯಲ್ಲಿ ಭಾರತ ವಾಗ್ದಾಳಿ!

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

Ranji Trophy final: ಔಕಿಬ್ ನಬಿ ಬೌಲಿಂಗ್ ಮ್ಯಾಜಿಕ್‌ಗೆ ಬೆರಗಾದ ಕೆಎಲ್ ರಾಹುಲ್; ಆರಂಭದಲ್ಲೇ ಕರ್ನಾಟಕಕ್ಕೆ ಸಂಕಷ್ಟ!

SCROLL FOR NEXT