ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ದೆಹಲಿಯಲ್ಲಿ ಇಂದು 2137 ಹೊಸ ಸೋಂಕು ಪ್ರಕರಣ ಪತ್ತೆ, 36 ಸಾವಿರ ಗಡಿ ದಾಟಿದ ಸೋಂಕಿತರ ಸಂಖ್ಯೆ

ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಕೊರೋನಾ ವೈರಸ್ ಆರ್ಭಟ ಮುಂದುವರೆದಿದ್ದು, ಇಂದು ಒಂದೇ ದಿನ 2137 ಹೊಸ ಸೋಂಕು ಪ್ರಕರಣ ಪತ್ತೆಯಾಗಿದೆ.

ಸಂಗ್ರಹ ಚಿತ್ರ
Srinivasa Murthy VN
Updated On : 12 Jun 2020, 11:12 pm

ನವದೆಹಲಿ: ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಕೊರೋನಾ ವೈರಸ್ ಆರ್ಭಟ ಮುಂದುವರೆದಿದ್ದು, ಇಂದು ಒಂದೇ ದಿನ 2137 ಹೊಸ ಸೋಂಕು ಪ್ರಕರಣ ಪತ್ತೆಯಾಗಿದೆ.

ಹೌದು. ಕಳೆದ 24 ಗಂಟೆಗಳಲ್ಲಿ ದೆಹಲಿಯಲ್ಲಿ ದಾಖಲೆಯ ಗರಿಷ್ಠ 2137 ಹೊಸ ಸೋಂಕು ಪ್ರಕರಣ ಪತ್ತೆಯಾಗಿದ್ದು, ಆ ಮೂಲಕ ದೆಹಲಿಯಲ್ಲಿ ಸೋಂಕಿತರ ಸಂಖ್ಯೆ 36,824ಕ್ಕೆ ಏರಿಕೆಯಾಗಿದೆ. ಇಂದು ಒಂದೇ ದಿನ ದೆಹಲಿಯಲ್ಲಿ 129 ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ  ಕೊರೋನಾಗೆ ಬಲಿಯಾದವರ ಸಂಖ್ಯೆ 1214ಕ್ಕೆ ಏರಿಕೆಯಾಗಿದೆ.

ಇಂದು ಒಂದೇ ದಿನ ದೆಹಲಿಯಲ್ಲಿ 667 ಮಂದಿ ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ಚೇತರಿಕೆ ಕಂಡ ಸೋಂಕಿತರ ಸಂಖ್ಯೆ 13398ಕ್ಕೆ ಏರಿಕೆಯಾಗಿದೆ. ದೆಹಲಿಯಲ್ಲಿ ಪ್ರಸ್ತುತ 22212 ಸಕ್ರಿಯ ಪ್ರಕರಣಗಳಿವೆ. 

Advertisement

Advertisement

ದೆಹಲಿ ಆರೋಗ್ಯ ಇಲಾಖೆ ನೀಡಿರುವ ಮಾಹಿತಿ ಅನ್ವಯ 9558 ಕೋವಿಡ್-19 ಬೆಡ್ ಗಳಿದ್ದು, 5361 ಬೆಡ್ ಗಳನ್ನು ಸೋಂಕಿತರಿಗೆ ನೀಡಲಾಗಿದೆ. 4197 ಬೆಡ್ ಗಳು ಖಾಲಿ ಇವೆ. ಅಂತೆಯೇ 598 ವೆಂಟಿಲೇಟರ್ ಬೆಡ್ ಗಳಿದ್ದು, 345 ಬೆಡ್ ಗಳನ್ನು ಗಂಭೀರ ಸ್ಥಿತಿಯಲ್ಲಿರುವ ಸೋಂಕಿತರಿಗೆ ನೀಡಲಾಗಿದೆ. ಇನ್ನೂ 253 ಬೆಡ್ ಗಳು ಖಾಲಿ ಉಳಿದಿವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement