ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ಮತ್ತು ದೆಹಲಿ ಆರೋಗ್ಯ ಸಚಿವ ಸತ್ಯೇಂದರ್ ಜೈನ್ 
ದೇಶ

ಕೋವಿಡ್- 19: ದೆಹಲಿ, ಮಹಾರಾಷ್ಟ್ರದಲ್ಲಿ ಲಾಕ್ ಡೌನ್ ವಿಸ್ತರಣೆ ಇಲ್ಲ-ಉಭಯ ರಾಜ್ಯಗಳ ಸ್ಪಷ್ಟನೆ

ರಾಷ್ಟ್ರ ರಾಜಧಾನಿ ನವದೆಹಲಿ ಹಾಗೂ ಮಹಾರಾಷ್ಟ್ರದಲ್ಲಿ ಕೊರೋನಾವೈರಸ್ ಪ್ರಕರಣಗಳು ತೀವ್ರಗತಿಯಲ್ಲಿ ಏರಿಕೆಯಾಗುತ್ತಿದ್ದು, ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಲಾಕ್ ಡೌನ್ ವಿಸ್ತರಣೆಯಾಗಲಿದೆ ಎಂಬಂತಹ ಮಾತುಗಳು ಕೇಳಿಬರುತಿತ್ತು. ಆದರೆ, ಲಾಕ್ ಡೌನ್ ವಿಸ್ತರಿಸದಿರಲು ಎರಡು ರಾಜ್ಯಗಳು ನಿರ್ಧರಿಸಿವೆ.

ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿ ಹಾಗೂ ಮಹಾರಾಷ್ಟ್ರದಲ್ಲಿ ಕೊರೋನಾವೈರಸ್ ಪ್ರಕರಣಗಳು ತೀವ್ರಗತಿಯಲ್ಲಿ ಏರಿಕೆಯಾಗುತ್ತಿದ್ದು, ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಲಾಕ್ ಡೌನ್ ವಿಸ್ತರಣೆಯಾಗಲಿದೆ ಎಂಬಂತಹ ಮಾತುಗಳು ಕೇಳಿಬರುತಿತ್ತು. ಆದರೆ, ಲಾಕ್ ಡೌನ್ ವಿಸ್ತರಿಸದಿರಲು ಎರಡು ರಾಜ್ಯಗಳು ನಿರ್ಧರಿಸಿವೆ.

ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ದೆಹಲಿ ಆರೋಗ್ಯ ಸಚಿವ ಸತ್ಯೇಂದರ್ ಜೈನ್, ಲಾಕ್ ಡೌನ್ ವಿಸ್ತರಣೆಯಾಗಲ್ಲ  ಎಂದು ಸ್ಪಷ್ಪಪಡಿಸಿದರು. 
ದೆಹಲಿಯಲ್ಲಿ ಈವರೆಗೂ 1085 ಜನರು ಮೃತಪಟ್ಟಿದ್ದು, ಸೋಂಕಿತರ ಸಂಖ್ಯೆ 34 ಸಾವಿರಕ್ಕೆ ಏರಿಕೆ ಆಗಿದೆ. ಸೊಂಕಿನಿಂದ ಮೃತಪಟ್ಟವರು ಹಾಗೂ ಪಾಸಿಟಿವ್ ಇರುವವರ ಬಗ್ಗೆ ಸಮಗ್ರ ಮಾಹಿತಿ ನೀಡುವಂತೆ ದೆಹಲಿ ಮುನ್ಸಿಪಲ್ ಕಾರ್ಪೋರೇಷನ್ ಕೋರಲಾಗಿದೆ ಎಂದು ಪ್ರಶ್ನೆಯೊಂದಕ್ಕೆ ಅವರು ಉತ್ತರಿಸಿದರು.

ಮತ್ತೊಂದೆಡೆ ಮಹಾರಾಷ್ಟ್ರದಲ್ಲಿಯೂ ಲಾಕ್ ಡೌನ್ ವಿಸ್ತರಣೆ ಮಾಡುವುದಿಲ್ಲ ಎಂದು ಮುಖ್ಯಮಂತ್ರಿಗಳ ಕಾರ್ಯಾಲಯ ಸ್ಪಷ್ಟಪಡಿಸಿದೆ. ಪ್ರಸ್ತುತ ಜೂನ್ 30ರವರೆಗೂ ಜಾರಿಯಲ್ಲಿರುವ ಲಾಕ್ ಡೌನ್ ನ್ನು ವಿಸ್ತರಿಸುವುದಿಲ್ಲ, ಕೊರೋನಾ ವೈರಸ್ ಹರಡದಂತೆ  ಜನರು ಗುಂಪು ಸೇರದಂತೆ ಮನವಿ ಮಾಡಲಾಗಿದೆ. 

ಲಾಕ್ ಡೌನ್ ನ್ನು ಮತ್ತೆ ಘೋಷಿಸಿಲ್ಲ, ಜನರು ಏಲ್ಲಿಯೂ ಒಂದೆಡೆ ಸೇರಬೇಡಿ, ಸರ್ಕಾರದ ಸಲಹೆ, ಸೂಚನೆಗಳನ್ನು ಪಾಲಿಸುವ ಸುರಕ್ಷಿತವಾಗಿ ಇರಿ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಕಾರ್ಯಾಲಯ ಟ್ವೀಟ್ ಮಾಡಿದೆ.

ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಾರ ಕಳೆದ 24 ಗಂಟೆಗಳಲ್ಲಿ 396 ಮಂದಿ ಸಾವಿನೊಂದಿಗೆ 10,956 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿವೆ.ಒಟ್ಟು  ಸೋಂಕಿತರ ಸಂಖ್ಯೆ 97, 648ಕ್ಕೆ ಏರಿಕೆ ಆಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

4 ಜನರಿಗೆ ಒಂದೇ ಟಿಕೆಟ್! ಸಾರಿಗೆ ಇಲಾಖೆಯಲ್ಲಿ ಡೀಸೆಲ್ ಬೆನ್ನಲ್ಲೇ ಟಿಕೆಟ್ ರೋಲ್ ಕೊರತೆ

ದೆಹಲಿಯಲ್ಲಿ ಹೈಡ್ರಾಮಾ: ವಿಮಾನ ನಿಲ್ದಾಣದಲ್ಲಿ ಬಂಧನಕ್ಕೊಳಗಾಗಿದ್ದ CJP ನಾಯಕರಾದ ದೀಪ್ಕೆ, ರಾಂಕಾ, ದಾಸ್ ಕೊನೆಗೂ ಬಿಡುಗಡೆ..!

Riyadh ವಿಮಾನ ನಿಲ್ದಾಣದ ಮೇಲೆ ಕ್ಷಿಪಣಿ ದಾಳಿ: 12 ಮಂದಿ ಸಾವು, 300ಕ್ಕೂ ಹೆಚ್ಚು ಜನರಿಗೆ ಗಾಯ

Operation Sindoor ನಮ್ಮ ಆತ್ಮರಕ್ಷಣೆಯ ಕ್ರಮ, ಪರಮಾಣು ಬೆದರಿಕೆಗೆ ಎಂದಿಗೂ ಮಣಿಯಲ್ಲ: 3 'ಲಕ್ಷ್ಮಣ ರೇಖೆ' ಎಳೆದು ಪಾಕ್'ಗೆ ಭಾರತ ಖಡಕ್ ಎಚ್ಚರಿಕೆ..!

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!