ಕೊರೋನಾ ಆರ್ಭಟಕ್ಕೆ ತತ್ತರಿಸಿದ ತಮಿಳುನಾಡು: 24 ಗಂಟೆಯಲ್ಲಿ ದಾಖಲೆಯ 1,982 ಹೊಸ ಸೋಂಕು ಪ್ರಕರಣ
ಮಾರಕ ಕೊರೋನಾ ವೈರಸ್ ಸಾಂಕ್ರಾಮಿಕ ಸೋಂಕಿಗೆ ತಮಿಳುನಾಡು ಸರ್ಕಾರ ತತ್ತರಿಸಿ ಹೋಗಿದ್ದು, ಕಳೆದ 24 ಗಂಟೆಗಳಲ್ಲಿ ರಾಜ್ಯಾದ್ಯಂತ ದಾಖಲೆಯ 1,982 ಹೊಸ ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ.
ಚೆನ್ನೈ: ಮಾರಕ ಕೊರೋನಾ ವೈರಸ್ ಸಾಂಕ್ರಾಮಿಕ ಸೋಂಕಿಗೆ ತಮಿಳುನಾಡು ಸರ್ಕಾರ ತತ್ತರಿಸಿ ಹೋಗಿದ್ದು, ಕಳೆದ 24 ಗಂಟೆಗಳಲ್ಲಿ ರಾಜ್ಯಾದ್ಯಂತ ದಾಖಲೆಯ 1,982 ಹೊಸ ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ.
ಮಾರಕ ಕೊರೋನಾ ವೈರಸ್ ದಾಳಿಗೆ ತಮಿಳುನಾಡು ತತ್ತರಿಸಿ ಹೋಗಿದ್ದು ಕಳೆದ 24 ಗಂಟೆಗಳಲ್ಲಿ ತಮಿಳುನಾಡಿನಲ್ಲಿ 1,982 ಹೊಸ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಮೂಲಕ ತಮಿಳುನಾಡಿನಲ್ಲಿ ಸೋಂಕಿತರ ಸಂಖ್ಯೆ 40,000 ಗಡಿ ದಾಟಿ 40,698ಕ್ಕೇರಿದೆ. ಅಂತೆಯೇ ಇಂದು 18 ಮಂದಿ ಸೋಂಕಿತರು ಸಾವನ್ನಪ್ಪಿದ್ದು ಆ ಮೂಲಕ ತಮಿಳುನಾಡಿನಲ್ಲಿ ಕೊರೋನಾಗೆ ಬಲಿಯಾದವರ ಸಂಖ್ಯೆ 367ಕ್ಕೆ ಏರಿಕೆಯಾಗಿದೆ.
ಈ ಪೈಕಿ ಚೆನ್ನೈ ಮಹಾನಗರಿಯೊಂದರಲ್ಲೇ 1,477 ಹೊಸ ಸೋಂಕು ಪ್ರಕರಣಗಳು ದಾಖಲಾಗಿದ್ದು, ಚೆನ್ನೈನಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 28,924ಕ್ಕೆ ಏರಿಕೆಯಾಗಿದೆ. ಈ ಪೈಕಿ 14,723 ಮಂದಿ ಗುಣಮುಖರಾಗಿದ್ದು, 13,906 ಸಕ್ರಿಯ ಪ್ರಕರಣಗಳಿವೆ.
ಇಂದು ತಮಿಳುನಾಡಿನಲ್ಲಿ ಒಟ್ಟು 18,231 ಕೋವಿಡ್-19 ಟೆಸ್ಟ್ ನಡೆಸಲಾಗಿದ್ದು, ಆ ಮೂಲಕ ರಾಜ್ಯದಲ್ಲಿ ಈ ವರೆಗೂ 6,73,906 ಕೋವಿಡ್-19 ಪರೀಕ್ಷೆ ನಡೆಸಲಾಗಿದೆ.