ದೇಶ

ಚೆನ್ನೈ: ಅಧೀನ ನ್ಯಾಯಾಲಯದ ಮೂವರು ನ್ಯಾಯಾಧೀಶರಿಗೆ ಕೊರೋನಾ ಪಾಸಿಟಿವ್

Lingaraj Badiger

ಚೆನ್ನೈ: ತಮಿಳುನಾಡಿನಲ್ಲಿ ಮಹಾಮಾರಿ ಕೊರೋನಾ ವೈರಸ್ ತೀವ್ರ ವ್ಯಾಪಕವಾಗಿ ಹರಡುತ್ತಿದ್ದು, ನ್ಯಾಯಾಧೀಶರಿಗೂ ಕಂಟಕವಾಗಿ ಕಾಡುತ್ತಿದೆ. ಮದ್ರಾಸ್ ಹೈಕೋರ್ಟ್ ಕ್ಯಾಂಪಸ್ ನಲ್ಲಿರುವ ಅಧೀನ ನ್ಯಾಯಾಲಯಗಳ ಮೂವರು ನ್ಯಾಯಾಧೀಶರಿಗೆ ಭಾನುವಾರ ಕೊವಿಡ್-19 ಪಾಸಿಟಿವ್ ದೃಢಪಟ್ಟಿದೆ.

ಈ ಮೂವರು ನ್ಯಾಯಾಧೀಶರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಅಧೀನ ನ್ಯಾಯಾಲಯಗಳ ಕೆಲವು ಸಿಬ್ಬಂದಿಗೂ ಸಹ ಕೊರೋನಾ ಪಾಸಿಟಿವ್ ಬಂದಿದೆ. ಆದರೆ ಎಷ್ಟು ಸಿಬ್ಬಂದಿಗೆ ಕೊವಿಡ್-19 ಪಾಸಿಟಿವ್ ದೃಢಪಟ್ಟಿದೆ ಎಂಬುದು ಇನ್ನೂ ಸ್ಪಷ್ಟವಾಗಿ ತಿಳಿದು ಬಂದಿಲ್ಲ.

ಇತ್ತೀಚಿಗಷ್ಟೇ ಮದ್ರಾಸ್ ಹೈಕೋರ್ಟ್ ನ ನಾಲ್ವರು ನ್ಯಾಯಾಧೀಶರಿಗೆ ಹಾಗೂ ಸಿಎಟಿಯ ಕೆಲವು ಸಿಬ್ಬಂದಿಗೂ ಕೊರೋನಾ ವಕ್ಕರಿಸಿತ್ತು.

ತಮಿಳುನಾಡಿನಲ್ಲಿ ಇಂದು ಒಂದೇ ದಿನ ಮಹಾಮಾರಿ ಕೊರೋನಾ ವೈರಸ್ ನಿಂದ 38 ಮಂದಿ ಮೃತಪಟ್ಟಿದ್ದು, 1974 ಮಂದಿಗೆ ಪಾಸಿಟಿವ್ ಬಂದಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 44661ಕ್ಕೆ ಏರಿಕೆಯಾಗಿದೆ.

SCROLL FOR NEXT