ದೇಶ

ಭಾರತ-ಚೀನಾ ಸಂಘರ್ಷ: 3 ಭಾರತೀಯ ಯೋಧರು ಹುತಾತ್ಮ, ಚೀನಾ ಕಡೆಯೂ ಸಾವು ನೋವು ವರದಿ!

Vishwanath S

ನವದೆಹಲಿ: ಲಡಾಖ್ ನ ಗಾಲ್ವಾನ್ ಕಣಿವೆಯಲ್ಲಿ ಭಾರತ ಮತ್ತು ಚೀನಾ ಯೋಧರ ನಡುವಿನ ಮಲ್ಲಯುದ್ಧದಲ್ಲಿ ಭಾರತದ ಮೂವರು ಯೋಧರು ಹತ್ಯೆಯಾಗಿದ್ದು ಸಂಚಲನ ಮೂಡಿಸಿತ್ತು. ಇದೀಗ ಚೀನಾ ಕಡೆಯೂ ಸಾವು-ನೋವು ಸಂಭವಿಸಿದೆ ಎಂದು ವರದಿಯಾಗಿದೆ. 

ಉಭಯ ದೇಶದ ಯೋಧರ ನಡುವಿನ ಸಂಘರ್ಷದಲ್ಲಿ ಭಾರತೀಯ ಸೇನೆಯ ಕರ್ನಲ್ ಮತ್ತು ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ. ಇದೇ ವೇಳೆ ಚೀನಾದ ಕಡೆಯೂ ಸಾವು ನೋವು ಸಂಭವಿಸಿದೆ. ಇದೇ ವೇಳೆ ಉಭಯ ದೇಶಗಳ ನಡುವಿನ ಸೈನಿಕರು ಗುಂಡಿನ ದಾಳಿ ನಡೆಸಿಲ್ಲ. ಬದಲಿಗೆ ಪರಸ್ಪರ ಹೊಡೆದಾಡಿಕೊಂಡಿದ್ದಾರೆ ಎಂದು ಭಾರತೀಯ ಸೇನೆ ಸ್ಪಷ್ಟಪಡಿಸಿದೆ.

ಚೀನಾದ ಗ್ಲೋಬಲ್ ಟೈಮ್ಸ್ ಪತ್ರಿಕೆಯ ಹಿರಿಯ ವರದಿಗಾರ್ತಿ ವಾಂಗ್ ವೆನ್ವೆನ್ ಎಂಬುವರು ಟ್ವೀಟ್ ಮಾಡಿ ಕಳೆದ ರಾತ್ರಿ ಭಾರತ ಮತ್ತು ಚೀನಾ ಯೋಧರ ನಡುವಿನ ಸಂಘರ್ಷದಲ್ಲಿ ಐವರು ಚೀನಾದ ಸೈನಿಕರು ಹತ್ಯೆಯಾಗಿದ್ದು 11 ಜನ ಗಾಯಗೊಂಡಿದ್ದಾರೆ ಎಂದು ಟ್ವೀಟ್ ಮಾಡಿದ್ದರು. 

ಗಾಲ್ವಾನ್ ಕಣಿವೆಯಲ್ಲಿ ಚೀನಾ ಸೈನಿಕರು ಅತಿಕ್ರಮಣ ಪ್ರವೇಶ ಮಾಡಿದ್ದರು. ಈ ವೇಳೆ ಭಾರತೀಯ ಸೇನೆ ಅವರನ್ನು ಹಿಂದೆ ಸರಿಯುವಂತೆ ಎಚ್ಚರಿಕೆ ನೀಡಿದ್ದರೂ ಅದನ್ನು ನಿರಾಕರಿಸಿದ್ದರಿಂದ ಉಭಯ ದೇಶಗಳ ಯೋಧರ ನಡುವೆ ಸಂಘರ್ಷ ನಡೆದಿತ್ತು.

SCROLL FOR NEXT