ಪ್ರಧಾನಿ ಮೋದಿ 
ದೇಶ

ಭಾರತಕ್ಕೆ ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ತಾತ್ಕಾಲಿಕ ಸದಸ್ಯತ್ವ: ವಿಶ್ವ ಸಮುದಾಯಕ್ಕೆ ಪ್ರಧಾನಿ ಮೋದಿ ಧನ್ಯವಾದ

ವಿಶ್ವಸಂಸ್ಥೆಯ ಭದ್ರತಾ ಮಂಡಳಿತ ಶಾಶ್ವತವಲ್ಲದ ಸದಸ್ಯ ರಾಷ್ಟ್ರವಾಗಿ ಭಾರತ ಎರಡು ವರ್ಷಗಳ ಅವಧಿಗೆ ಆಯ್ಕೆಯಾಗಿದ್ದು, ಈ ಹಿನ್ನೆಲೆಯಲ್ಲಿ ಭಾರತಕ್ಕೆ ಅಭೂತಪೂರ್ವ ಬೆಂಬಲ ನೀಡಿದ ವಿಶ್ವ ಸಮುದಾಯಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಗುರುವಾರ ಧನ್ಯವಾದಗಳನ್ನು ಹೇಳಿದ್ದಾರೆ. 

ನವದೆಹಲಿ: ವಿಶ್ವಸಂಸ್ಥೆಯ ಭದ್ರತಾ ಮಂಡಳಿತ ಶಾಶ್ವತವಲ್ಲದ ಸದಸ್ಯ ರಾಷ್ಟ್ರವಾಗಿ ಭಾರತ ಎರಡು ವರ್ಷಗಳ ಅವಧಿಗೆ ಆಯ್ಕೆಯಾಗಿದ್ದು, ಈ ಹಿನ್ನೆಲೆಯಲ್ಲಿ ಭಾರತಕ್ಕೆ ಅಭೂತಪೂರ್ವ ಬೆಂಬಲ ನೀಡಿದ ವಿಶ್ವ ಸಮುದಾಯಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಗುರುವಾರ ಧನ್ಯವಾದಗಳನ್ನು ಹೇಳಿದ್ದಾರೆ. 

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಜಾಗತಿಕವಾಗಿ ಶಾಂತಿ, ಭದ್ರತೆ, ಸ್ಥಿತಿಸ್ಥಾಪಕತ್ವ ಮತ್ತು ಸಮಾನತೆಯನ್ನು ಉತ್ತೇಜಿಸಲು ಭಾರತವು ಎಲ್ಲಾ ಸದಸ್ಯ ರಾಷ್ಟ್ರಗಳೊಂದಿಗೆ ಕೆಲಸ ಮಾಡಲಿದೆ. ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಭಾರತದ ಸದಸ್ಯತ್ವಕ್ಕಾಗಿ ಜಾಗತಿಕ ಸಮುದಾಯವು ತೋರಿಸಿದ ಅಗಾಧ ಬೆಂಬಲಕ್ಕೆ ತೀವ್ರ ಕೃತಜ್ಞತೆ ಸಲ್ಲಿಸುತ್ತೇನೆಂದು ಹೇಳಿದ್ದಾರೆ. 

75ನೇ ಅಧಿವೇಶನದ ಅಧ್ಯಕ್ಷ, ಭದ್ರತಾ ಮಂಡಳಿಯ ಐದು ಕಾಯಂ ಅಲ್ಲದ ಸದಸ್ಯ ದೇಶಗಳು ಹಾಗೂ ಆರ್ಥಿಕ–ಸಾಮಾಜಿಕ ಮಂಡಳಿಯ ಸದಸ್ಯ ಹುದ್ದೆಗೆ 193 ಸದಸ್ಯ ರಾಷ್ಟ್ರಗಳ ವಿಶ್ವಸಂಸ್ಥೆಯ ಸಾಮಾನ್ಯಸಭೆಯಲ್ಲಿ ಬುಧವಾರ ಚುನಾವಣೆ ನಡೆಯಿತು. ಕೋವಿಡ್ ಕಾರಣದಿಂದ ಮತದಾನಕ್ಕೆ ವಿಶೇಷ ವ್ಯವಸ್ಥೆ ಕಲ್ಪಿಸಲಾಗಿತ್ತು. 

ಏಷ್ಯಾ–ಪೆಸಿಫಿಕ್ ಭಾಗದಿಂದ ಭಾರತ ಮಾತ್ರ ಸ್ಪರ್ಧಿಸಿತ್ತು. ಹೀಗಾಗಿ ಈ ಭಾಗದಿಂದ ಚುನಾವಣಾ ಕಣದಲ್ಲಿದ್ದ ಏಕೈಕ ರಾಷ್ಟ್ರ ಭಾರತವಾಗಿತ್ತು. ಭಾರತದ ಉಮೇದುವಾರಿಕೆಯನ್ನು ಏಷ್ಯಾ–ಪೆಸಿಫಿಕ್ ಭಾಗದ 55 ಸದಸ್ಯ ದೇಶಗಳ ಗುಂಪು ಅವಿರೋಧವಾಗಿ ಅನುಮೋದಿಸಿದ್ದವು. ವಿಶೇಷವೆಂದರೆ, ಚೀನಾ, ಪಾಕಿಸ್ತಾನ ಕೂಡ ಭಾರತದ ಆಯ್ಕೆಗೆ ಬೆಂಬಲ ಸೂಚಿಸಿದ್ದವು.  

ಭಾರತದೊಂದಿಗೆ, ಐರ್ಲೆಂಡ್, ಮೆಕ್ಸಿಕೊ ಮತ್ತು ನಾರ್ವೆ ಕೂಡ ಬುಧವಾರ ನಡೆದ ಭದ್ರತಾ ಮಂಡಳಿ ಚುನಾವಣೆಯಲ್ಲಿ ಆಯ್ಕೆಯಾಗಿವೆ. 

ಪ್ರತೀ ವರ್ಷ 2 ವರ್ಷಗಳ ಅವಧಿಗೆ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಕಾಯಂ ಅಲ್ಲದ ಸದಸ್ಯ ದೇಶಗಳ ಆಯ್ಕೆಗೆ ಚುನಾವಣೆ ನಡೆಯುತ್ತದೆ. 10 ಸದಸ್ಯ ಸ್ಥಾನಗಳನ್ನು ವಿಭಾಗವಾರು ಹಂಚಿಕೆ ಮಾಡಲಾಗಿದೆ. ಮೂರನೇ ಎರಡರಷ್ಟು ಬಹುಮತ ಪಡೆಯುವ ದೇಶಗಳು ಚುನಾವಣೆಯಲ್ಲಿ ಆಯ್ಕೆಯಾಗಲಿವೆ.  

ಭಾರತ ಈ ಹಿಂದೆ ಹಲವು ಭಾರಿ ಭದ್ರತಾ ಮಂಡಳಿಯ ಕಾಯಂ ಅಲ್ಲದ ಸದಸ್ಯ ದೇಶವಾಗಿ ಆಯ್ಕೆಯಾಗಿತ್ತು. 1950-1951, 1967-1968, 1972-1973, 1977-1978, 1984-1985, 1991-1992 ಮತ್ತು ಇತ್ತೀಚೆಗೆ 2011-2012ರಲ್ಲಿ ಖಾಯಂ ಅಲ್ಲದ ಸದಸ್ಯ ರಾಷ್ಟ್ರವಾಗಿ ಭದ್ರತಾ ಮಂಡಳಿಗೆ ಪ್ರವೇಶಿಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT