ಕೆಸಿ ವೇಣುಗೋಪಾಲ್ 
ದೇಶ

ರಾಜಸ್ಥಾನ ರಾಜ್ಯಸಭಾ ಚುನಾವಣೆಯಲ್ಲಿ ಎರಡು ಸ್ಥಾನ ಗೆದ್ದ ಕಾಂಗ್ರೆಸ್

ಶಾಸಕರ ಕುದುರೆ ವ್ಯಾಪಾರದ ನಡುವೆಯೂ ಆಡಳಿತರೂಢ ಕಾಂಗ್ರೆಸ್ ರಾಜ್ಯಸಭೆ ಚುನಾವಣೆಯಲ್ಲಿ ಎರಡು ಸ್ಥಾನಗಳನ್ನು ಹಾಗೂ ಪ್ರತಿಪಕ್ಷ ಬಿಜೆಪಿ ಒಂದು ಸ್ಥಾನದಲ್ಲಿ ಗೆಲುವು ಸಾಧಿಸಿದೆ.

ಜೈಪುರ್: ಶಾಸಕರ ಕುದುರೆ ವ್ಯಾಪಾರದ ನಡುವೆಯೂ ಆಡಳಿತರೂಢ ಕಾಂಗ್ರೆಸ್ ರಾಜ್ಯಸಭೆ ಚುನಾವಣೆಯಲ್ಲಿ ಎರಡು ಸ್ಥಾನಗಳನ್ನು ಹಾಗೂ ಪ್ರತಿಪಕ್ಷ ಬಿಜೆಪಿ ಒಂದು ಸ್ಥಾನದಲ್ಲಿ ಗೆಲುವು ಸಾಧಿಸಿದೆ.

ಕಾಂಗ್ರೆಸ್ ನ ಅಭ್ಯರ್ಥಿಗಳಾದ ಕೆಸಿ ವೇಣುಗೋಪಾಲ್ ಮತ್ತು ನೀರಜ್ ದಂಗಿ ಇಬ್ಬರೂ ರಾಜಸ್ಥಾನ ವಿಧಾನಸಭೆಯಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ. ಬಿಜೆಪಿ ಇಬ್ಬರು ಅಭ್ಯರ್ಥಿಗಳ ಪೈಕಿ ಓರ್ವ ಅಭ್ಯರ್ಥಿ ರಾಜೇಂದ್ರ ಗೆಹ್ಲೋಟ್ ಅವರು ಮಾತ್ರ ಗೆಲುವು ಸಾಧಿಸಿದ್ದು, ಮತ್ತೊಬ್ಬ ಅಭ್ಯರ್ಥಿ ಓಂಕಾರ್ ಸಿಂಗ್ ಲಖಾವತ್ ಅವರು ಕೇವಲ 20 ಮತಗಳನ್ನು ಪಡೆಯುವ ಮೂಲಕ ಸೋಲು ಅನುಭವಿಸಿದ್ದಾರೆ.

ವೇಣುಗೋಪಾಲ್ ಅವರು 64 ಮತ, ನೀರಜ್ ದಂಗಿ ಅವರು 59 ಮತ ಹಾಗೂ ರಾಜೇಂದ್ರ ಗೆಹ್ಲೋಟ್ ಅವರು 54 ಮತ ಪಡೆಯುವ ಮೂಲಕ ಗೆಲುವು ಸಾಧಿಸಿದ್ದಾರೆ.

200 ಸದಸ್ಯ ಬಲ ಹೊಂದಿರುವ ರಾಜಸ್ಥಾನ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 107 ಶಾಸಕರನ್ನು ಹೊಂದಿದೆ. ಅಲ್ಲದೆ ಆರ್ ಎಲ್ ಡಿ, ಸಿಪಿಎಂ ಬಿಟಿಪಿ ಬೆಂಬಲದೊಂದಿಗೆ ಎರಡು ಸ್ಥಾನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!