ದೇಶ

ಮಧ್ಯಪ್ರದೇಶ: ಗವರ್ನರ್ ಲಾಲ್ ಜೀ ಟಂಡನ್ ಆರೋಗ್ಯದಲ್ಲಿ ಚೇತರಿಕೆ

Shilpa D

ಲಕ್ನೋ: ಮಧ್ಯಪ್ರದೇಶ ರಾಜ್ಯಪಾಲ ಲಾಲ್ ಜೀ ಟಂಡನ್ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಆರೋಗ್ಯದಲ್ಲಿ ಚೇತರಿಕೆಯಾಗುತ್ತಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಉಸಿರಾಟದ ತೊಂದರೆಯಿಂದಾಗಿ ಜೂನ್ 11 ರಂದು ಟಂಡನ್ ಅವರನ್ನು ಮೇದಾಂತ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸದ್ಯ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲಗಳು ಸುದ್ದಿ ಸಂಸ್ಥೆಗೆ ತಿಳಿಸಿದೆ.

ಅವರ ಕಿಡ್ನಿ ಮತ್ತು ಲಿವರ್  ಕ್ರಿಯೆ ಸುಧಾರಿಸುತ್ತಿದೆ ಎಂದು ಆಸ್ಪತ್ರೆ ಬುಲೆಟಿನ್ ನಲ್ಲಿ ತಿಳಿಸಿದೆ. ಇನ್ನೂ ಕೂಡ ಉಸಿರಾಡಲು ವೆಂಟಿಲೇಟರ್ ಅಳವಡಿಸಲಾಗಿದೆ, ತಜ್ಞ ವೈದ್ಯರ ತಂಡ ಅವರ ಆರೋಗ್ಯದ  ಮೇಲೆ ನಿಗಾ ಇರಿಸಿದೆ,

SCROLL FOR NEXT