ಸಂಗ್ರಹ ಚಿತ್ರ 
ದೇಶ

ಕೋವಿಡ್-19: 24 ಗಂಟೆಗಳಲ್ಲಿ 15,413 ಮಂದಿಯಲ್ಲಿ ವೈರಸ್ ಪತ್ತೆ, 4.10ಲಕ್ಷಕ್ಕೇರಿದೆ ಸೋಂಕಿತರ ಸಂಖ್ಯೆ

ಲಾಕ್'ಡೌನ್ ಸಡಿಲಗೊಂಡ ಬಳಿಕ ಶರವೇಗದಲ್ಲಿ ಏರುತ್ತಿರುವ ಕೊರೋನಾ ಸೋಂಕಿತರ ಸಂಖ್ಯೆ ಹೊಸದೊಂದು ಮೈಲಿಗಲ್ಲು ನಿರ್ಮಿಸಲು ಸಜ್ಜಾಗಿದೆ. ಭಾನುವಾರ ದೇಶದಲ್ಲಿ ಹೊಸದಾಗಿ 15,413 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 4.10ಲಕ್ಷಕ್ಕೆ ಏರಿಕೆಯಾಗಿದೆ.

ನವದೆಹಲಿ: ಲಾಕ್'ಡೌನ್ ಸಡಿಲಗೊಂಡ ಬಳಿಕ ಶರವೇಗದಲ್ಲಿ ಏರುತ್ತಿರುವ ಕೊರೋನಾ ಸೋಂಕಿತರ ಸಂಖ್ಯೆ ಹೊಸದೊಂದು ಮೈಲಿಗಲ್ಲು ನಿರ್ಮಿಸಲು ಸಜ್ಜಾಗಿದೆ. ಭಾನುವಾರ ದೇಶದಲ್ಲಿ ಹೊಸದಾಗಿ 15,413 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 4.10ಲಕ್ಷಕ್ಕೆ ಏರಿಕೆಯಾಗಿದೆ.

ಗಮನಾರ್ಹ ವಿಚಾರವೆಂದರೆ 2 ಲಕ್ಷಕ್ಕೂ ಹೆಚ್ಚು ಪ್ರಕರಣಗಳು ಕೇವಲ ಜೂನ್ ತಿಂಗಳೊಂದರಲ್ಲಿಯೇ ದಾಖಲಾಗಿದೆ. ಜೂ.1ರಿಂದ ಜೂ.20ರ ಅವಧಿಯಲ್ಲಿ 2,04,513 ಕೊರೋನಾ ಸೋಂಕಿತರು ಪತ್ತೆಯಾಗಿದ್ದಾರೆಂದು ಸಚಿವಾಲಯ ಮಾಹಿತಿ ನೀಡಿದೆ. 

ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಬರೋಬ್ಬರಿ 15413 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಈ ವರೆಗೂ ದೇಶದಲ್ಲಿ ಸೋಂಕಿತರ ಸಂಖ್ಯೆ 4,10,461 ಕ್ಕೆ ಏರಿಕೆಯಾಗಿದೆ. ಇನ್ನು 4,10,461 ಮಂದಿ ಸೋಂಕಿತರ ಪೈಕಿ 227756 ಸೋಂಕಿನಿಂದ ಗುಣಮುಖರಾಗಿದ್ದು, ಇನ್ನೂ ದೇಶದಲ್ಲಿ 169451 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ. 

ಇನ್ನು ನಿನ್ನೆ ಒಂದೇ ದಿನ 306 ಮಂದಿ ಸಾವನ್ನಪ್ಪಿದ್ದು, ಇದರೊಂದಿಗೆ ಸಾವಿನ ಸಂಖ್ಯೆ ಕೂಡ 13,254ಕ್ಕೆ ಏರಿಕೆಯಾಗಿದೆ. 

ದೇಶದ ಇತರೆ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ಮಹಾರಾಷ್ಟ್ರದಲ್ಲಿ ಕೊರೋನಾ ಆರ್ಭಟ ಹೆಚ್ಚಾಗಿದ್ದು, ಈ ವರೆಗೂ ಆ ರಾಜ್ಯದಲ್ಲಿ 1,28,205 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಇನ್ನು ದೆಹಲಿಯಲ್ಲಿ 56,746 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆಂದು ತಿಳಿದುಬಂದಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್